ಕಡಕೇರಿಯಲ್ಲಿ ಜೆಡಿಎಸ್, ಬಾಲಿಕೊಪ್ಪದಲ್ಲಿ ಕಾಂಗ್ರೆಸ್ ಪ್ರಚಾರ

ಸಿದ್ದಾಪುರ,
ಶಿರ್ಸಿ ಸಿದ್ದಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ಟಿ ನಾಯ್ಕ ತಾಲೂಕಿನ ವಿವಿಧ ಸ್ಥಳಗಳಲ್ಲಿ ಪ್ರಚಾರ ಆರಂಭಿಸಿದ್ದಾರೆ
ಹಾಳದಕಟ್ಟ ,ಹಣಜಿಬೈಲ್, , ರವೀಂದ್ರ ನಗರ, ಬಾಲಿಕೊಪ್ಪ ಗಳಲ್ಲಿ ಕಾರ್ಯಕರ್ತರನ್ನು ಭೇಟಿ ಮಾಡಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ನೀಡಿದ ಜನೋಪಯೋಗಿ ಯೋಜನೆಗಳ ಬಗ್ಗೆ ಜನರಿಗೆ ತಿಳು ವಳಿಕೆ ನೀಡುವಲ್ಲಿ ಕಾರ್ಯಕರ್ತರು ಪ್ರವ್ರ ತ್ತರಾಗಬೇಕು ಜೊತೆಗೆ ಆಡಳಿತದಲ್ಲಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನರಿಗೆ ಯಾವ ರೀತಿಯ ಯೋಜನೆಗಳನ್ನ ನೀಡುತ್ತಿದ್ದಾರೆ ಅವರ ವೈಪಲ್ಯಗಳನ್ನು ಜನಸಾಮಾನ್ಯರಿಗೆ ತಿಳುವಳಿಕೆ ನೀಡಿ ಮನಒಲಿಸಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರವಾಗಿ ಮತ ಚಲಾಯಿಸುವಂತೆ ವಿನಂತಿಸಿಕೊಳ್ಳುತ್ತಿದ್ದಾರೆ.

ಸಿರ್ಸಿ ಸಿದ್ದಾಪುರ ಕ್ಷೇತ್ರದಲ್ಲಿ ಕಳೆದ 15 ವರ್ಷಗಳಿಂದ ಶಾಸಕರಾಗಿದ್ದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಆಡಳಿತ ವೈಫಲ್ಯ ಅವರು ಜನರಿಗೆ ಸ್ಪಂದಿಸದಿರುವ ವಿಷಯಗಳನ್ನು ಜನಸಾಮಾನ್ಯರಿಗೆ ತಿಳಿಸಿ ಮತ ಚಲಾಯಿಸುವಂತೆ ಸೂಚಿಸುತ್ತಿದ್ದಾರೆ
ಈ ಸಂದರ್ಭದಲ್ಲಿ ಮಾತನಾಡಿದ ಭೀಮಣ್ಣ ನಾಯ್ಕ ಸಿದ್ದಾಪುರ ಪಟ್ಟಣ ಪಂಚ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಹಳ ಇದ್ದು ನಾವು ಹೋದಲ್ಲೆಲ್ಲಾ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಹೇಳುತ್ತಿದ್ದಾರೆ. 15 ವರ್ಷಗಳಿಂದ ಶಾಸಕರಾಗಿದ್ದ ಕಾಗೇರಿಯವರು ಏನು ಮಾಡುತ್ತಿದ್ದಾರೆ ಕಾಂಗ್ರೆಸ್ ಸರ್ಕಾರವಿದ್ದಾಗ ತಂದಂಥ ಯೋಜನೆಗಳನ್ನೇ ತಮ್ಮ ಸರ್ಕಾರ ಮಾಡಿದೆ ಎಂದು ಸುಳ್ಳು ಹೇಳಿಕೆಗಳನ್ನು ನೀಡುತ್ತಾ ಜನರಿಗೆ ಮೋಸ ಮಾಡುತ್ತಿದ್ದಾರೆ ಇಂಥ ಮೋಸ ವಂಚನೆಗಳು ಈ ಭಾರೀ ನಡೆಯುವುದಿಲ್ಲ ಹೆಚ್ಚಿನ ಜನರು ಕಾಂಗ್ರೆಸ್ನತ್ತ ಒಲವು ತೋರಿಸಿದ್ದು ಈ ಬಾರಿ ಬಹುಮತದಿಂದ ನನ್ನ ನ್ನು ಗೆಲ್ಲಿಸುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದು ತಿಳಿಸಿದರು.


ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ್ ನಾಯಕ್ ಮಾತನಾಡಿ ಬಿಜೆಪಿಯವರು ಹಿಂದುತ್ವದ ಆಧಾರದಲ್ಲಿ ಮತ ಪಡೆಯಲು ಹಿಂದೂ ಯುವಕರನ್ನ ಬಳಸಿಕೊಂಡು ಧರ್ಮದ ಹೆಸರಿನಲ್ಲಿ ಯುವಕರಲ್ಲಿ ವಿಷ ಬೀಜ ಬಿತ್ತುತ್ತಿದ್ದಾರೆ ಸಿದ್ದಾಪುರ ದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಇದರ ಉಪಯೋಗವನ್ನು ನಾವು ಪಡೆದುಕೊಂಡು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವನ್ನು ನೋಡಲು ಕಾತುರರಾಗಿದ್ದೇವೆ
ರಾಜ್ಯ ದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಮುಖಂಡರುಗಳಾದ ವಿ ಎನ್. ನಾಯ್ಕ, ಸಿ ಆರ್. ನಾಯ್ಕ,ವೀರಭದ್ರ ನಾಯ್ಕ, ಸುರೇಂದ್ರ ಮಡಿವಾಳ ,ಜೈರಾಮ್ ಹೊಸೂರ್, ವೆಂಕಟರಮಣ ನಾಯ್ಕ, ಮುನಾವರ್ ಗುರ್ಕಾರ್ ,ಬಾಲಕೃಷ್ಣ ನಾಯ್ಕ, ಪ್ರಶಾಂತ್ ಹೊಸೂರ್ ಹೆಚ್ ಕೆ ಶಿವಾನಂದ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *