

ನಟ ಶಿವರಾಜ್‌ಕುಮಾರ್ ಪತ್ನಿ ಗೀತಾ ಶಿವರಾಜ್‌ಕುಮಾರ್ ಅವರು ನಾಳೆ (ಶುಕ್ರವಾರ) ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ ಎಂದು ವರದಿಯಾಗಿದೆ.


ಬೆಂಗಳೂರು: ನಟ ಶಿವರಾಜ್‌ಕುಮಾರ್ ಪತ್ನಿ ಗೀತಾ ಶಿವರಾಜ್‌ಕುಮಾರ್ ಅವರು ನಾಳೆ (ಶುಕ್ರವಾರ) ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ ಎಂದು ವರದಿಯಾಗಿದೆ.
ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ನಾಳೆ ಗೀತಾ ಅವರು ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ. ಮಾಜಿ ಸಿಎಂ ದಿವಂಗತ ಎಸ್. ಬಂಗಾರಪ್ಪನವರ ಪುತ್ರಿಯಾಗಿರುವ ಗೀತಾ ಅವರು, ಈ ಹಿಂದೆ ಜೆಡಿಎಸ್‌ನಿಂದ ಲೋಕಸಭಾ ಚುನಾವಣೆಗೆ ಬಿಎಸ್ ಯಡಿಯೂರಪ್ಪ ಎದುರಾಳಿಯಾಗಿ ಸ್ಪರ್ಧಿಸಿದ್ದರು. ಆದರೆ, ಯಡಿಯೂರಪ್ಪ ಅವರ ಎದುರು ಭಾರಿ ಮತಗಳ ಅಂತರದಿಂದ ಸೋತಿದ್ದರು.
ಬಂಗಾರಪ್ಪ ಅವರ ಐವರು ಮಕ್ಕಳಲ್ಲಿ ಮಧು ಬಂಗಾರಪ್ಪ, ಕುಮಾರ್ ಬಂಗಾರಪ್ಪ ಮತ್ತು ಗೀತಾ ಶಿವರಾಜ್‌ಕುಮಾರ್ ಅವರು ರಾಜಕೀಯ ಜೀವನದಲ್ಲಿದ್ದಾರೆ. ಮಧು ಬಂಗಾರಪ್ಪ ಮತ್ತು ಕುಮಾರ್ ಬಂಗಾರಪ್ಪ ಅವರು ಕ್ರಮವಾಗಿ ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿದ್ದು, ಈ ಬಾರಿ ಸೊರಬ ವಿಧಾನಸಭಾ ಚುನಾವಣೆಯಲ್ಲಿ ಸೆಣಸಲಿದ್ದಾರೆ.
2021ರ ಜುಲೈನಲ್ಲಿ ಮಧು ಬಂಗಾರಪ್ಪ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದರು. ಆಗಲೇ ಗೀತಾ ಶಿವರಾಜ್‌ಕುಮಾರ್ ಸಹ ಕಾಂಗ್ರೆಸ್ ಸೇರಲಿದ್ದಾರೆ ಎನ್ನುವ ಸುದ್ದಿಗಳು ಹಬ್ಬಿದ್ದವು.
ಈ ಹಿಂದೆಯೇ ‘ಗೀತಾ ಶಿವರಾಜ್‌ಕುಮಾರ್ ಕಾಂಗ್ರೆಸ್‌ಗೆ ಬಂದಿದ್ದಾರೆ ಎಂದುಕೊಳ್ಳಿ’ ಎಂದು ಹೇಳಿದ್ದ ಮಧು ಬಂಗಾರಪ್ಪ, ಗೀತಾ ಅವಕು ಪಕ್ಷ ಸೇರುವ ಕುರಿತು ಸುಳಿವು ನೀಡಿದ್ದರು. ಇದೀಗ ಅಧಿಕೃತವಾಗಿ ಅವರು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗುತ್ತಿದ್ದಾರೆ (kpc)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
