

ಸಿದ್ದಾಪುರ
ತಾಲೂಕಿನ ಹಾರ್ಸಿಕಟ್ಟಾದಲ್ಲಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಬಿಜೆಪಿ ಕಾರ್ಯಕರ್ತರ ಸಭೆ ನಡೆಸಿ ಚುನಾವಣೆಯ ಸಿದ್ದತೆ ಕುರಿತು ಚರ್ಚೆ ನಡೆಸಿ ಕಾರ್ಯಕರ್ತರು ಪ್ರತಿ ಮನೆ ಮನೆ ಭೇಟಿ ನೀಡಿ ಸರ್ಕಾರದ ಸಾಧನೆ ತಿಳಿಸಿ ಬಿಜೆಪಿಗೆ ಮತ ನೀಡುವಂತೆ ಕೇಳಬೇಕು. ಕಾರ್ಯಕರ್ತರೇ ಪಕ್ಷದ ಶಕ್ತಿ, ಅಭಿವೃದ್ಧಿ ಎನ್ನುವುದು ನಿರಂತರವಾಗಿರುವಂತಹುದಾಗಿದೆ. ಕ್ಷೇತ್ರದ ಪ್ರತಿಯೊಂದು ಗ್ರಾಪಂ ವ್ಯಾಪ್ತಿಯಲ್ಲಿಯೂ ಅಭಿವೃದ್ಧಿ ಕೆಲಸಮಾಡಿದ್ದೇನೆ. ಮುಂದೆಯೂ ಮಾಡುತ್ತೇನೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಕಾರ್ಯಕರ್ತರು ಬಿಜೆಪಿ ಸೇರ್ಪಡೆಗೊಂಡಿದ್ದು ಅವರಿಗೆ ಬಿಜೆಪಿ ಶಾಲು ಹೊದಿಸಿ ಪಕ್ಷಕ್ಕೆ ಬರಮಾಡಿಕೊಂಡರು.
ತಾಲೂಕು ಬಿಜೆಪಿ ಅಧ್ಯಕ್ಷ ಮಾರುತಿ ಟಿ.ನಾಯ್ಕ ಹೊಸೂರು, ಜಿಪಂ ಮಾಜಿ ಸದಸ್ಯ ಎಂ.ಜಿ.ಹೆಗಡೆ ಗೆಜ್ಜೆ, ನಾರಾಯಣ ಹೆಗಡೆ ಚಾರೆಕೋಣೆ, ಜಿ.ಎಂ.ಹೆಗಡೆ ಕರ್ಕಿಸವಲ್ ಮತ್ತಿತರರಿದ್ದರು.
