

ಬಿ.ಜೆ.ಪಿ. ವಿರುದ್ಧ ವ್ಯಾಪಕ ಆಡಳಿತ ವಿರೋಧಿ ಅಲೆ ಇರುವುದರಿಂದ ಈ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ರಾಜ್ಯದ ಆಡಳಿತ ಚುಕ್ಕಾಣಿ ಹಿಡಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಕಾಂಗ್ರೆಸ್ ಮುಖಂಡ ಎ.ರವೀಂದ್ರ ಶಿರಸಿ ಕ್ಷೇತ್ರದಲ್ಲಿ ಭೀಮಣ್ಣ ನಾಯ್ಕ ಗೆಲುವು ಶತಸಿದ್ಧ ಎಂದರು. ದೇಶ,ರಾಜ್ಯದ ಜನತೆ ಬೆಲೆ ಏರಿಕೆಯಿಂದ ತತ್ತರಿಸಿಹೋಗಿದ್ದಾರೆ. ರಾಜ್ಯದಲ್ಲಿ ಜನವಿರೋಧಿಯಾಗಿದ್ದ ಬಿ.ಜೆ.ಪಿ. ಸರ್ಕಾರದ ವಿರುದ್ಧ ಜನಾಭಿಪ್ರಾಯ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಶಿರಸಿ ಕ್ಷೇತ್ರದಲ್ಲಿ ಭೀಮಣ್ಣ ನಾಯ್ಕ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಗೆಲುವಿಗೆ ಯಾವ ತೊಂದರೆಗಳೂ ಇಲ್ಲ ಎಂದರು.


