

ರಾಹುಲ್ ಗಾಂಧಿ ಅಭಿಮಾನಿಯಾಗಿ ಇಂದು ಇಲ್ಲಿಗೆ ಬಂದಿದ್ದೇನೆ, ಭಾರತ್ ಜೋಡೋ ಯಾತ್ರೆ ನನಗೆ ಸ್ಫೂರ್ತಿ ನೀಡಿತು: ನಟ ಶಿವರಾಜ್ ಕುಮಾರ್
ಇಂದು ಮಂಗಳವಾರ ಶಿವಮೊಗ್ಗ ಜಿಲ್ಲೆಯ ಸೊರಬ ಕ್ಷೇತ್ರಕ್ಕೆ ಕೈ ಅಭ್ಯರ್ಥಿ ಮಧು ಬಂಗಾರಪ್ಪ ಪರ ಪ್ರಚಾರ ನಡೆಸಲು ರಾಹುಲ್ ಗಾಂಧಿ ಆಗಮಿಸಿದ್ದರು. ಈ ವೇಳೆ ಇತ್ತೀಚೆಗಷ್ಟೆ ಕಾಂಗ್ರೆಸ್ ಸೇರಿದ್ದ ಗೀತಾ ಶಿವರಾಜ್ ಕುಮಾರ್ ಮತ್ತು ಕನ್ನಡದ ಜನಪ್ರಿಯ ನಟ ಶಿವರಾಜ್ ಕುಮಾರ್ ಕಾಂಗ್ರೆಸ್ ಪರ ಪ್ರಚಾರಕ್ಕೆ ಆಗಮಿಸಿದ್ದರು.


ಶಿವಮೊಗ್ಗ: ಇಂದು ಮಂಗಳವಾರ ಶಿವಮೊಗ್ಗ ಜಿಲ್ಲೆಯ ಸೊರಬ ಕ್ಷೇತ್ರಕ್ಕೆ ಕೈ ಅಭ್ಯರ್ಥಿ ಮಧು ಬಂಗಾರಪ್ಪ ಪರ ಪ್ರಚಾರ ನಡೆಸಲು ರಾಹುಲ್ ಗಾಂಧಿ ಆಗಮಿಸಿದ್ದರು. ಈ ವೇಳೆ ಇತ್ತೀಚೆಗಷ್ಟೆ ಕಾಂಗ್ರೆಸ್ ಸೇರಿದ್ದ ಗೀತಾ ಶಿವರಾಜ್ ಕುಮಾರ್ ಮತ್ತು ಕನ್ನಡದ ಜನಪ್ರಿಯ ನಟ ಶಿವರಾಜ್ ಕುಮಾರ್ ಕಾಂಗ್ರೆಸ್ ಪರ ಪ್ರಚಾರಕ್ಕೆ ಆಗಮಿಸಿದ್ದರು.
ಈ ವೇಳೆ ಮಧು ಬಂಗಾರಪ್ಪ ಅವರು ರಾಹುಲ್ ಗಾಂಧಿಗೆ ಶಿವರಾಜ್ ಕುಮಾರ್ ರನ್ನು ಪರಿಚಯಿಸಿದಾಗ ಅವರನ್ನು ಆತ್ಮೀಯವಾಗಿ ತಬ್ಬಿಕೊಂಡರು. ನಂತರ ರಾಹುಲ್ ಶಿವರಾಜ್ ಕುಮಾರ್ ಅವರೊಂದಿಗೆ ಸ್ವಲ್ಪ ಹೊತ್ತು ಮಾತಾಡಿ ಭಾಷಣ ಮಾಡಲು ಹೋದರು.


ಈ ಸಂದರ್ಭದಲ್ಲಿ ಮಾತನಾಡಿದ ಶಿವರಾಜ್ ಕುಮಾರ್, ರಾಹುಲ್ ಗಾಂಧಿ ಅಭಿಮಾನಿಯಾಗಿ ನಾನು ಇಂದು ಇಲ್ಲಿಗೆ ಬಂದಿದ್ದೇನೆ. ಇತ್ತೀಚೆಗೆ ಅವರು ಕೈಗೊಂಡಿದ್ದ ಭಾರತ್ ಜೋಡೋ ಯಾತ್ರೆ ನನಗೆ ಬಹಳ ಹಿಡಿಸಿತ್ತು. ನಾನು ಕೂಡ ವರ್ಕೌಟ್, ಫಿಟ್ನೆಸ್ ಗೆ ಪ್ರಾಮುಖ್ಯತೆ ನೀಡುತ್ತೇನೆ. ಭಾರತ್ ಜೋಡೋ ಯಾತ್ರೆಯಲ್ಲಿ ಸಾವಿರಾರು ಮೈಲುಗಳನ್ನು ರಾಹುಲ್ ಗಾಂಧಿ ನಡೆದು ಕ್ರಮಿಸಿದ್ದಾರೆ. ಅವರ ಯಾತ್ರೆ ನನಗೆ ಬಹಳ ಪ್ರೇರೇಪಿಸಿತು ಎಂದಿದ್ದಾರೆ. (kpc)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






