

ಬಿಜೆಪಿಗೆ ಲಿಂಗಾಯತರ ಅಗತ್ಯವಿಲ್ಲದಿದ್ದರೆ, ನಮಗೂ ಬಿಜೆಪಿ ಅಗತ್ಯವಿಲ್ಲ: ಕಾಂಗ್ರೆಸ್’ಗೆ ಬೆಂಬಲ ಘೋಷಿಸಿದ ವೀರಶೈವ-ಲಿಂಗಾಯತರು!
ಬಿಜೆಪಿ ಪಕ್ಷಕ್ಕೆ ಲಿಂಗಾಯತರ ಅಗತ್ಯವಿಲ್ಲದಿದ್ದರೆ, ಲಿಂಗಾಯತರಿಗೂ ಬಿಜೆಪಿ ಬೇಕಿಲ್ಲ ಎಂದು ಹೇಳಿರುವ ವೀರಶೈವ-ಲಿಂಗಾಯತ ಸಮುದಾಯವು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುವುದಾಗಿ ಘೋಷಣೆ ಮಾಡಿದೆ.


ಬೆಂಗಳೂರು: ಬಿಜೆಪಿ ಪಕ್ಷಕ್ಕೆ ಲಿಂಗಾಯತರ ಅಗತ್ಯವಿಲ್ಲದಿದ್ದರೆ, ಲಿಂಗಾಯತರಿಗೂ ಬಿಜೆಪಿ ಬೇಕಿಲ್ಲ ಎಂದು ಹೇಳಿರುವ ವೀರಶೈವ-ಲಿಂಗಾಯತ ಸಮುದಾಯವು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುವುದಾಗಿ ಘೋಷಣೆ ಮಾಡಿದೆ.
ಈ ಸಂಬಂಧ ಪ್ರತಿಕಾ ಪ್ರಕಟಣೆ ಹೊರಡಿಸಿರುವ ಸಮುದಾಯವು, ಬಿಜೆಪಿ ಹಾಗೂ ಬಿಎಲ್.ಸಂತೋಷ್ ಅವರು ನೀಡಿದ್ದಾರೆನ್ನಲಾದ ಹೇಳಿಕೆಯ ವಿಡಿಯೋ ಕುರಿತು ಅಸಮಾಧಾನ ಹೊರಹಾಕಿದೆ.
ರಾಜ್ಯ ವಿಧಾನಸಭೆಗೆ ಮತ್ತೆ ಚುನಾವಣೆ ಬಂದಿದೆ. ಈ ಸಂದರ್ಭದಲ್ಲಿ ಕರ್ನಾಟಕದಲ್ಲಿ ನಡೆಯುತ್ತಿರುವ ರಾಜಕೀಯ ವಿದ್ಯಾಮಾನಗಳನ್ನು ಗಮನಿಸಿದರೆ ಲಿಂಗಾಯತ ಮತ್ತು ವೀರಶೈವ ಸಮುದಾಯಕ್ಕೆ ಆತಂಕಕಾರಿ ಬೆಳವಣಿಗೆಗಲು ಸ್ಪಷ್ಟವಾಗಿ ಗೋಚರಿಸು ತ್ತಿದೆ. ವೈದಿಕಶಾಹಿ ಮನಸ್ಥಿತಿಯ ಮನುವಾದಿಗಳು ನಡೆಸುತ್ತಿರುವ ಕುತಂತ್ರ ಮೇಲುಗೈ ಸಾಧಿಸುತ್ತಿದೆಯೇನೋ ಎಂದೆನಿಸುತ್ತಿದೆ. ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸುಳಿದಾಡುತ್ತಿರುವ ಬಿಜೆಪಿ ಪಕ್ಷದ ಸಂಘಟನಾ ಕಾರ್ಯದರ್ಶಿಗಳಾದ ಬಿ.ಎಲ್.ಸಂತೋಷ್ ಅವರು ಎಂದು ಹೇಳಲಾದ ಮಾತುಗಳು ಇದನ್ನು ಪುಷ್ಟೀಕರಿಸುತ್ತಿವೆ. ಮೊನ್ನೆ ನಡೆದ ಸಭೆಯೊಂದರಲ್ಲಿ ಸನ್ಮಾನ್ಯ ಬಿ.ಎಲ್.ಸಂತೋಷ್ ಅವರು ಹೇಳಿದ್ದಾರೆ ಎಂಬ ಹೇಳಿಕೆ ಇಡೀ ನಮ್ಮ ಸಮುದಾಯದ ಸ್ವಾಭಿಮಾನಕ್ಕೆ ಧಕ್ಕೆ ತರುವ ಆತಂಕಕಾರಿ ವಿಷಯವಾಗಿದೆ. ನಾವು ಹಿಂದುತ್ವದಲ್ಲಿ ಮುಂದುವರೆಯುತ್ತೇವೆ. ನಮ್ಮ ಲಿಂಗಾಯಿತ ಅಗತ್ಯವಿಲ್ಲ. ನಾವು ಇನ್ನೆಷ್ಟು ದಿನ ಲಿಂಗಾಯತರ ಓಲೈಕೆ ಮಾಡಿಕೊಂಡಿರಬೇಕು ಎಂಬ ಸಂತೋಷ್ ಅವರ ಮಾತುಗಳು ಅವರ ಅಹಂಕಾರದ ಪ್ರತೀಕವಾಗಿದೆ.
ಒಂದೆಡೆ ಸಿಎಂ ಬೊಮ್ಮಾಯಿ ಮತ್ತು ಅವರ ಸಂಪುಟದ ಲಿಂಗಾಯಿತ ಸಮುದಾಯದ ಮತ್ರಿಗಳು ನಾವುಗಳು ಬಸವಪಥದಲ್ಲೇ ಸಾಗುತ್ತಿದ್ದೇವೆಂಬ ಗೋಷೆಗಳು ಮತ್ತು ಸಂತೋಷ್ ಅವರ ಮಾತುಗಳನ್ನೊಮ್ಮೆ ಮನನ ಮಾಡಿಕೊಳ್ಳಬೇಕಾದ ಅಗತ್ಯವಿದೆ. ಬೊಮ್ಮಾಯಿ ಸರ್ಕಾರ ಬಂದಾಗಿನಿಂದ ಬಿಜೆಪಿ ಒಂದಲ್ಲಾ ಒಂದು ರೀತಿಯಲ್ಲಿ ಲಿಂಗಾಯರ ಮೇಲೆ ಪ್ರತ್ಯಕ್ಷವಾಗಿ-ಪರೋಕ್ಷವಾಗಿ ದಬ್ಬಾಳಿಕೆ ನಡೆಸುತ್ತಲೇ ಬರುತ್ತಿದೆ. ಕಳೆದ 5 ವರ್ಷಗಳಿಂದ ಗಮನಿಸಿದಾಗ ಪಠ್ಯಪುಸ್ತಕಗಳಲ್ಲಿ ವಚನಕಾರರ ವಚನಸಾಹಿತ್ಯವನ್ನು ಕೈಬಿಟ್ಟಿರುವುದು ಮತ್ತು ಬಸವಣ್ಣನವರ ವಿಚಾರಧಾರೆಯನ್ನು ತಿರುಚಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಹೇಳಿದೆ.
ಇತ್ತೀಚಿನ ರಾಜಕೀಯ ಬೆಳವಣಿಗೆಯನ್ನು ಗಮಿಸಿದಾಗ ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ ಅವರು ಕಣ್ಣೀರು ಹಾಕುವಂತೆ ಮಾಡಿದ್ದು ನಮ್ಮೆಲ್ಲರ ಕಣ್ಮುಂದ ಇದೆ. ಯಡಿಯೂರಪ್ಪ ನಂತರ ನಾಯಕರ ಮೇಲೆ ದಾಳಿ ಶುರು ಮಾಡಿದ್ದು, ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿ, ಆಯನೂರು ಮಂಜುನಾಥ್, ಸಂಜಯ್ ಪಾಟೀಲ್, ಸೊಗು ಶಿವಣ್ಣ, ಗುಲ್ಬರ್ಗಾದ ಚಂದ್ರಶೇಖರ್ ಮುಂತಾದ ಪ್ರಭಾವಿ ಲಿಂಗಾಯ ನಾಯಕರುಗಳನ್ನು ಮೂಲೆಗುಂಪು ಮಾಡಿರುವುದು ಸ್ಪಷ್ಟವಾಗಿದೆ.
ವಿ.ಸೋಮಣ್ಣ ಅವರನ್ನು ಸಿದ್ದರಾಮಯ್ಯನವರ ವಿರುದ್ಧ ಸ್ಪರ್ಧಿಸಲು ನಿರ್ದೇಶನ ನೀಡಿ, ಅವರನ್ನು ಹರಕೆಯ ಕುರಿಯನ್ನಾಗಿ ಮಾಡಲಾಗಿದೆ. ಹೀಗೆ ಕರ್ನಾಟಕ ರಾಜಕಾರಣದಲ್ಲಿ ಲಿಂಗಾಯ ನಾಯಕಚ್ವವನ್ನು ನಿರ್ನಾಮ ಮಾಡುವ ಬಿಜೆಪಿಯ ಕುತಂತ್ರ ಇದೀಗ ಸ್ಪಷ್ಟವಾಗಿದೆ.
ಮೋದಿ ಹಾಗೂ ಅಮಿತ್ ಶಾ ಅವರು ಲಿಂಗಾಯತರಿಗೆ ರಾಜ್ಯದ ಮುಂದಿನ ಸಿಎಂ ಬಿಂಬಿಸಲು ಆ ಸಮುದಾಯದ ರಾಜ್ಯಮಟ್ಟದ ಬಿಜೆಪಿ ಮುಖಂಡರು ವಿನಂತಿಸಿದಾಗ ಅದನ್ನು ಸ್ಪಷ್ಟವಾಗಿ ನಿರಾಕರಿಸುವುದು ದೊಡ್ಡ ದ್ರೋಹ. ತಮ್ಮ ಭಾಷಣಗಳಲ್ಲಿ ಕಾಂಗ್ರೆಸ್ ಪಕ್ಷವು ಲಿಂಗಾಯರಿಗೆ ದ್ರೋಹ ಮಾಡಿದೆ ಎಂದು ಎಲ್ಲೆಡೆ ಬಿಂಬಿಸುವ ಪ್ರಯತ್ನಗಳನ್ನು ರಾಷ್ಟ್ರಮಟ್ಟದ ನಾಯಕರು ಮಾಡುತ್ತಿದ್ದು, ಇದು ಸತ್ಯಕ್ಕೆ ದೂರವಾದ ಮಾತು. ಎಸ್.ನಿಜಲಿಂಗಪ್ಪ, ಬಿಡಿ.ಜತ್ತಿ, ವೀರೇಂದ್ರ ಪಾಟೀಲ್, ರಾಜಶೇಖರ ಮೂರ್ತಿ, ಎಸ್ಆರ್.ಪಾಟೀಲ್. ಎಂಬಿ ಪಾಟೀಲ್ ಮುಂತಾದವರನ್ನು ರಾಜ್ಯ ಮಟ್ಟದಲ್ಲಿ ಮತ್ತು ರಾಷ್ಟ್ರಮಟ್ಟದಲ್ಲಿ ಪ್ರಮುಖ ಸ್ಥಾನವನ್ನು ನೀಡಿ ನಿರಂತರವಾಗಿ ಗೌರವಿಸುತ್ತಿರುವುದು ಕಾಂಗ್ರೆಸ್ ಪಕ್ಷವೆಂದು ಸ್ಮರಿಸಬೇಕಾಗಿದೆ. ಎಲ್ಲಾ ಲಿಂಗಾಯತ ಮತ್ತು ವೀರಶೈವ ಸಮುದಾಯದವರು ಈ ಬಗ್ಗೆ ಎಚ್ಚೆತ್ತುಕೊಂಡು ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿ, ಅದಕ್ಕೆ ತಕ್ಕ ಪಾಠ ಕಲಿಸುವುದಲ್ಲದೆ, ಸ್ಪಷ್ಟ ಸಂದೇಶ ರವಾನಿಸಬೇಕು ಎಂದು ತಿಳಿಸಿದೆ. (ಕಪ್ರಡಾ)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
