ಶಿರಸಿ ಕ್ಷೇತ್ರದಲ್ಲಿ ಮೊದಲ ಬಾರಿ ಗೆದ್ದ ಹಿಂದುಳಿದ ವರ್ಗಗಳ ಅಭ್ಯರ್ಥಿ

ಬಹಳ ತುರುಸಿನ ಸ್ಪರ್ಧೆಯಲ್ಲಿ ಶಿರಸಿ ಕ್ಷೇತ್ರವನ್ನು ಕಾಂಗ್ರೆಸ್‌ ಪಡೆದುಕೊಂಡಿದೆ. ಸ್ವಾತಂತ್ರ್ಯ ನಂತರ ಮೊಟ್ಟ ಮೊದಲ ಬಾರಿ ಹಿಂದುಳಿದ ವರ್ಗಗಳ ಅಭ್ಯರ್ಥಿ ಭೀಮಣ್ಣ ನಾಯ್ಕ ಜಯಗಳಿಸಿದ್ದು ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರನ್ನು ಪರಾಭವಗೊಳಿಸುವ ಮೂಲಕ ಈಡಿಗರ ಮತಬಾಹುಳ್ಯದ ಶಿರಸಿ ಕ್ಷೇತ್ರದಲ್ಲಿ ಮೊಟ್ಟ ಮೊದಲ ಬಾರಿ ಹಿಂದುಳಿದ ವರ್ಗಗಳ ಅಭ್ಯರ್ಥಿ ಜಯಿಸಿದಂತಾಗಿದೆ. ಶಿರಸಿಯ ವಿಶ್ವೇಶ್ವರ ಹೆಗಡೆ ಕಾಗೇರಿ ಮೂರು ಬಾರಿ ಅಂಕೋಲಾ ಕ್ಷೇತ್ರದಿಂದ ಹಾಗೂ ನಿರಂತರ ಮೂರು ಬಾರಿ ಶಿರಸಿ ಕ್ಷೇತ್ರದಿಂದ ಜಯಗಳಿಸಿದ್ದರು.