ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಹಲವು ಘಟಾನುಘಟಿ ನಾಯಕರು ಸಹಸ್ರಾರು ಮತಗಳ ಅಂತರದಿಂದ ಸೋತಿದ್ದಾರೆ. ಈ ಪೈಕಿ ಸೋಮಣ್ಣ, ಆರ್, ಅಶೋಕ, ಸುಧಾಕರ್, ಸಿ.ಟಿ. ರವಿ. ಜೆ.ಸಿ. ಮಾಧುಸ್ವಾಮಿ ಮತ್ತಿತರ ನಾಯಕರಿದ್ದಾರೆ.
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಹಲವು ಘಟಾನುಘಟಿ ನಾಯಕರು ಸಹಸ್ರಾರು ಮತಗಳ ಅಂತರದಿಂದ ಸೋತಿದ್ದಾರೆ. ಈ ಪೈಕಿ ಸೋಮಣ್ಣ, ಆರ್, ಅಶೋಕ, ಸುಧಾಕರ್, ಸಿ.ಟಿ. ರವಿ. ಜೆ.ಸಿ. ಮಾಧುಸ್ವಾಮಿ ಮತ್ತಿತರ ನಾಯಕರಿದ್ದಾರೆ.
ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿದ ವರುಣಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಸಿದ್ದರಾಮಯ್ಯ, 46,163 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಅವರನ್ನು ಸೋಲಿಸಿದ್ದಾರೆ. ಉಳಿದಂತೆ ಕನಕಪುರದಲ್ಲಿ ಡಿಕೆ ಶಿವಕುಮಾರ್ ಅವರು 1, 22, 392 ಮತಗಳ ಅಂತರದಿಂದ ಸಮೀಪದ ಜೆಡಿಎಸ್ ಅಭ್ಯರ್ಥಿ ಬಿ ನಾಗರಾಜು ಅವರನ್ನು ಸೋಲಿಸಿದ್ದಾರೆ. ಇಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಆರ್. ಅಶೋಕ ಠೇವಣಿ ಕಳೆದುಕೊಂಡಿದ್ದಾರೆ.
ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಮೀರ್ ಅಹ್ಮದ್ ಖಾನ್, 53, 953 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿಯಾಗಿದ್ದ ಭಾಸ್ಕರ್ ರಾವ್ ಅವರನ್ನು ಮಣಿಸಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಬಿಜೆಪಿ ನಾಯಕ ಸಿಎನ್ ಅಶ್ವತ್ಥ ನಾರಾಯಣ 41, 302 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಅನೂಫ್ ಐಯ್ಯಂಗಾರ್ ಅವರನ್ನು ಸೋಲಿಸಿದ್ದಾರೆ.
ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಜಗದೀಶ್ ಶೆಟ್ಟರ್ 34,289 ಮತಗಳ ಅಂತರದಿಂದ ಬಿಜೆಪಿಯ ಮಹೇಶ್ ಟೆಂಗಿನಕಾಯಿ ಎದುರು ಸೋಲೊಪ್ಪಿಕೊಂಡಿದ್ದಾರೆ. ಚಿಕ್ಕನಾಯಕನಹಳ್ಳಿಯಲ್ಲಿ ಜೆ. ಸಿ. ಮಾಧುಸ್ವಾಮಿ, ಕಾಂಗ್ರೆಸ್ ಅಭ್ಯರ್ಥಿ ಸಿ.ಬಿ. ಸುರೇಶ್ ಬಾಬು ಎದುರು 10.642 ಮತಗಳ ಅಂತರಿಂದ ಸೋತಿದ್ದಾರೆ.
ಚಿತ್ತಾಪುರದಲ್ಲಿ ಪ್ರಿಯಾಂಕ್ ಖರ್ಗೆ, 13, 640 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಮಣಿಕಾಂತ್ ರಾಥೋಡ್ ಅವರನ್ನು ಸೋಲಿಸಿದ್ದಾರೆ. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಕೆ. ಸುಧಾಕರ್ ಅವರನ್ನು 10, 642 ಮತಗಳ ಅಂತರದಿಂದ ಕಾಂಗ್ರೆಸಿನ ಪ್ರದೀಪ್ ಈಶ್ವರ್ ಸೋಲಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ 5,926 ಮತಗಳ ಅಂತರದಿಂದ ಸಿ.ಟಿ. ರವಿ ಅವರನ್ನು ಕಾಂಗ್ರೆಸ್ ಅಭ್ಯರ್ಥಿ ಹೆಚ್. ಡಿ. ತಮ್ಮಯ್ಯ ಸೋಲಿನ ರುಚಿ ತೋರಿಸಿದ್ದಾರೆ.
ಹೊಳೆ ನರಸೀಪುರದಲ್ಲಿ ಜೆಡಿಎಸ್ ನ ಹೆಚ್ ಡಿ ರೇವಣ್ಣ 3,152 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಎಸ್ ಪಟೇಲ್ ಅವರನ್ನು ಮಣಿಸಿದ್ದಾರೆ. ಕೊರಟಗೆರೆಯಲ್ಲಿ ಡಾ. ಜಿ. ಪರಮೇಶ್ವರ್ ತನ್ನ ಸಮೀಪದ ಜೆಡಿಎಸ್ ಅಭ್ಯರ್ಥಿ ಪಿ.ಆರ್. ಸುಧಾಕರ್ ಲಾಲ್ ಅವರನ್ನು 14, 347 ಮತಗಳ ಅಂತರದಿಂದ ಮಣಿಸಿದ್ದಾರೆ.
ರಾಮನಗರದಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರನ್ನು 10,715 ಮತಗಳ ಅಂತರದಿಂದ ಕಾಂಗ್ರೆಸ್ ನ ಇಕ್ಬಾಲ್ ಹುಸೇನ್ ಸೋಲಿಸಿದ್ದಾರೆ. ತೀರ್ಥಹಳ್ಳಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ಅವರನ್ನು 12,241 ಮತಗಳ ಅಂತರದಿಂದ ಬಿಜೆಪಿಯ ಆರಗ ಜ್ಞಾನೇಂದ್ರ ಸೋಲಿಸಿದ್ದಾರೆ.