

ಕರ್ನಾಟಕದಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಗೊಂದಲಕ್ಕೆ ಕಾಂಗ್ರೆಸ್ ಹೈಕಮಾಂಡ್ ಇನ್ನು ಕೆಲವೇ ಹೊತ್ತಿನಲ್ಲಿ ತೆರೆ ಎಳೆಯುವ ಲಕ್ಷಣ ಕಾಣುತ್ತಿದೆ.


ನವದೆಹಲಿ: ಕರ್ನಾಟಕದಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಗೊಂದಲಕ್ಕೆ ಕಾಂಗ್ರೆಸ್ ಹೈಕಮಾಂಡ್ ಇನ್ನು ಕೆಲವೇ ಹೊತ್ತಿನಲ್ಲಿ ತೆರೆ ಎಳೆಯುವ ಲಕ್ಷಣ ಕಾಣುತ್ತಿದೆ.
ಇದೀಗ ಸ್ವಲ್ಪ ಹೊತ್ತಿನ ಮುಚೆ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ರಾಹುಲ್ ಗಾಂಧಿ ನಿವಾಸಕ್ಕೆ ಆಗಮಿಸಿದ್ದು, ಅವರ ಜೊತೆ ಚರ್ಚೆ ಮಾಡಿ ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ನಿವಾಸಕ್ಕೆ ತೆರಳಲಿದ್ದಾರೆ. ಅಲ್ಲಿ ಸಿದ್ದರಾಮಯ್ಯನರನ್ನು ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದು ಘೋಷಣೆ ಮಾಡುವ ಸಾಧ್ಯತೆಯಿದೆ.
ಈ ಮಧ್ಯೆ ಹಿಮಾಚಲ ಪ್ರದೇಶ ಪ್ರವಾಸದಲ್ಲಿದ್ದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಕೂಡ ಇನ್ನು ಸ್ವಲ್ಪ ಹೊತ್ತಿನಲ್ಲಿಯೇ ದೆಹಲಿಗೆ ಆಗಮಿಸಲಿದ್ದಾರೆ. ಅಲ್ಲಿ ಸೋನಿಯಾ ಜೊತೆ ಅಂತಿಮ ಮಾತುಕತೆಯಾಗಿ ಸಿದ್ದರಾಮಯ್ಯ ಹೆಸರು ಘೋಷಣೆಯಾಗಲಿದೆ ಎಂದು ಮಾಧ್ಯಮ ವರದಿಗಳು ಹೇಳುತ್ತಿವೆ.
ನಾಳೆ ಪ್ರಮಾಣ ವಚನ?: ನೂತನವಾಗಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರ ಹೆಸರನ್ನು ಘೋಷಿಸಿದ ನಂತರ ನಾಳೆ ಅಪರಾಹ್ನ ಬೆಂಗಳೂರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ಡಿಕೆಶಿಗೆ ಉಪ ಮುಖ್ಯಮಂತ್ರಿ ಪಟ್ಟ?: ಸಿಎಂ ಸ್ಥಾನಕ್ಕೆ ಪ್ರಬಲ ಪೈಪೋಟಿ ನೀಡಿದ್ದ ಡಿ ಕೆ ಶಿವಕುಮಾರ್ ಹೈಕಮಾಂಡ್ ಮನವೊಲಿಕೆ ನಂತರ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಒಪ್ಪಿಕೊಂಡಿದ್ದು ಅದರ ಜೊತೆಗೆ ಇನ್ನೆರಡು ಪ್ರಮುಖ ಖಾತೆಗಳಿಗೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗುತ್ತಿದೆ. ಕೆಪಿಸಿಸಿ ಅಧ್ಯಕ್ಷರಾಗಿಯೂ ಡಿಕೆಶಿ ಮುಂದುವರಿಯಲಿದ್ದಾರೆ. ಇಂದು ಅಪರಾಹ್ನ ಡಿ ಕೆ ಶಿವಕುಮಾರ್ ಸಹ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಲಿದ್ದಾರೆ.
ನಾಳೆ ಶಾಸಕರ ಸಭೆ: ಎಲ್ಲ 135 ಕಾಂಗ್ರೆಸ್ ಶಾಸಕರ ಸಭೆ ನಾಳೆ ಗುರುವಾರ ನಡೆಯುವ ನಿರೀಕ್ಷೆಯಿದೆ. ಅದರಲ್ಲಿ ಯಾರ್ಯಾರು ಸಚಿವರಾಗಲಿದ್ದಾರೆ, ಯಾರ್ಯಾರಿಗೆ ಯಾವ ಖಾತೆ ಹಂಚಿಕೆ ಎಂಬುದರ ಬಗ್ಗೆ ಚರ್ಚೆಯಾಗಿ ಮುಂದಿನ ವಾರವೇ ಸಚಿವ ಸಂಪುಟ ರಚನೆಯಾಗಲಿದೆ ಎಂಬ ಮಾಹಿತಿಗಳು ಸಹ ಲಭ್ಯವಾಗಿವೆ. (kpc)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
