ಸ್ಫೀಕರ್‌ ಸ್ಥಾನ ಒಲ್ಲೆ ಎಂದ ದೇಶಪಾಂಡೆ!

ಸ್ಪೀಕರ್ ಸ್ಥಾನ ದೊಡ್ಡ ಜವಾಬ್ದಾರಿ, ಆ ಅರ್ಹತೆ ನನಗಿಲ್ಲ: ಆರ್.ವಿ ದೇಶಪಾಂಡೆ ಟಾಂಗ್

ಹೊಸ ಕಾಂಗ್ರೆಸ್‌ ಸರ್ಕಾರದಲ್ಲಿ ನನಗೆ ವಿಧಾನಸಭೆ  ಸ್ಪೀಕರ್‌ ಆಗುವ ಅರ್ಹತೆ ಇಲ್ಲವೆಂದು ಅನಿಸುತ್ತದೆ ಎಂದು ಸ್ವತಃ ಕಾಂಗ್ರೆಸ್‌ ಹಿರಿಯ ನಾಯಕ ಆರ್.ವಿ.ದೇಶಪಾಂಡೆ ಹೇಳಿಕೊಂಡಿದ್ದಾರೆ.

R. V deshapande

ಬೆಂಗಳೂರು: ಹೊಸ ಕಾಂಗ್ರೆಸ್‌ ಸರ್ಕಾರದಲ್ಲಿ ನನಗೆ ಸ್ಪೀಕರ್‌  ಆಗುವ ಅರ್ಹತೆ ಇಲ್ಲವೆಂದು ಅನಿಸುತ್ತದೆ ಎಂದು ಸ್ವತಃ ಕಾಂಗ್ರೆಸ್‌ ಹಿರಿಯ ನಾಯಕ ಆರ್.ವಿ.ದೇಶಪಾಂಡೆ ಹೇಳಿಕೊಂಡಿದ್ದಾರೆ.

ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಬೀಗುತ್ತಿರುವ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಎಂದು ಘೋಷಣೆ ಮಾಡಿದ್ದು, ಪ್ರಮಾಣವಚನ ಸ್ವೀಕಾರ ಮಾತ್ರ ಬಾಕಿಯಿದೆ. ಆದರೆ, ಸಚಿವ ಸಂಪುಟಕ್ಕೆ ಯಾರನ್ನು ಸೇರಿಸಿಕೊಳ್ಳಲಾಗುತ್ತದೆ ಎಂಬುದಕ್ಕೆ ಯಾರ ಬಳಿಯೂ ಸ್ಪಷ್ಟ ಉತ್ತರಗಳಿಲ್ಲ.

ಇದರ ಮಧ್ಯೆ ಆರ್​ವಿ ದೇಶಪಾಂಡೆಗೆ ಸ್ಪೀಕರ್ ಸ್ಥಾನ ನೀಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಆದರೆ ದೇಶಪಾಂಡೆ, ಪರೋಕ್ಷವಾಗಿ ಸ್ಪೀಕರ್ ಆಗಲು ತಯಾರಿಲ್ಲ ಅನ್ನೋದನ್ನು ಮಾಧ್ಯಮಗಳ ಮೂಲಕ ತಿಳಿಸಿದ್ದಾರೆ.

ದೆಹಲಿಯಲ್ಲಿ ಮಾತನಾಡಿರುವ ದೇಶಪಾಂಡೆ, ನಾಳೆ ಸಚಿವ ಸಂಪುಟ ರಚನೆಯಾಗಲಿದೆ. ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಸಚಿವರು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದರೆ, ಸಚಿವ ಸಂಪುಟದಲ್ಲಿ ನಾನು ಇರುವ ಬಗ್ಗೆ ಮುಖ್ಯಮಂತ್ರಿ ಮತ್ತು ಹೈಕಮಾಂಡ್ ತೀರ್ಮಾನ ಮಾಡುತ್ತಾರೆ. ರಾಜ್ಯದ ಸಚಿವ ಸಂಪುಟದಿಂದ ಹಿರಿಯರನ್ನು ಕೈ ಬಿಡುವ ಬಗ್ಗೆ ನನಗೆ ಗೊತ್ತಿಲ್ಲ ಎಂದು ಹೇಳಿದರು.

ಈಗಾಗಲೇ ರಾಜ್ಯದಲ್ಲಿ ನಾನು 8 ಮುಖ್ಯಮಂತ್ರಿಗಳ ಜೊತೆ ಕೆಲಸ ಮಾಡಿದ್ದೇನೆ. ಈ ಬಾರಿ ಏನು ಮಾಡುತ್ತಾರೆ, ಏನು ಇಲ್ಲ ಅನ್ನೋದು ಅವರಿಗೆ ಬಿಟ್ಟ ವಿಚಾರವಾಗಿದೆ. ಆದರೆ, ಕಾಂಗ್ರೆಸ್‌ ಸರ್ಕಾರದ ಸ್ಪೀಕರ್‌ ಆಗುವ ಅರ್ಹತೆ ನನಗೆ ಇಲ್ಲವೆಂದು ಅನಿಸುತ್ತದೆ. ಅದು ಬಹಳ ದೊಡ್ಡ ಹುದ್ದೆಯಾಗಿದ್ದು, ಸರ್ಕಾರದಲ್ಲಿಯೇ ಅತ್ಯಂತ ಜವಾಬ್ದಾರಿ ಹುದ್ದೆಯಾಗಿದೆ. ಇದರ ಬಗ್ಗೆ ನನ್ನ ಜೊತೆ ಯಾರು ಚರ್ಚೆಯೂ ಮಾಡಿಲ್ಲ ಎಂದು ದೇಶಪಾಂಡೆ ಮಾಹಿತಿ ನೀಡಿದರು.

ನನ್ನ ಪ್ರಕಾರ ಸ್ಪೀಕರ್ ಪೋಸ್ಟ್ ಬಹಳ ದೊಡ್ಡದು. ಆ ಅರ್ಹತೆ ನನಗೆ ಇಲ್ಲ ಎಂದು ಕಾಣುತ್ತದೆ. ಅದು ತುಂಬಾ ಜವಾಬ್ದಾರಿಯುತ ಹುದ್ದೆ ಎನ್ನುವ ಮೂಲಕ  ತಮಗೆ ಸಚಿವ ಸ್ಥಾನವೇ ಬೇಕೆಂದು ಪರೋಕ್ಷವಾಗಿ ಹೇಳಿದ್ದಾರೆ.(kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *