ಐದು ಗ್ಯಾರಂಟಿಗಳಿಗೆ ತಾತ್ವಿಕ ಒಪ್ಪಿಗೆ, ಮುಂದಿನ ಸಂಪುಟ ಸಭೆ ಬಳಿಕ ಅಧಿಕೃತ ಘೋಷಣೆ: ಸಿಎಂ ಸಿದ್ದರಾಮಯ್ಯ

ಮೊದಲ ಸಚಿವ ಸಂಪುಟ ಸಭೆಯಲ್ಲೇ ಐದು ಗ್ಯಾರಂಟಿಗಳಿಗೆ ತಾತ್ವಿಕ ಅನುಮೋದನೆ ಪಡೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು.

ಬೆಂಗಳೂರು: ಮೊದಲ ಸಚಿವ ಸಂಪುಟ ಸಭೆಯಲ್ಲೇ ಐದು ಗ್ಯಾರಂಟಿಗಳಿಗೆ ತಾತ್ವಿಕ ಅನುಮೋದನೆ ಪಡೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು. 

ಮೊದಲ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ ಅವರು, ಐದು ಗ್ಯಾರಂಟಿ ಯೋಚನೆಗಳ ಅನುಷ್ಠಾನ ಕುರಿತಂತೆ ಹೆಚ್ಚಿನ ವಿವರಗಳು ಹಾಗೂ ಗ್ಯಾರಂಟಿಗಳಿಗೆ ಇರುವ ಷರತ್ತುಗಳು ಮತ್ತು ನಿಯಮಗಳನ್ನು ಮುಂದಿನ ಸಭೆಗಳಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.

ಗೃಹಜ್ಯೋತಿ ಯೋಜನೆಯಡಿ ಪ್ರತಿ ಮನೆಗೂ 200 ಯೂನಿಟ್ ಉಚಿತ ವಿದ್ಯುತ್, ಗೃಹಲಕ್ಷ್ಮೀ ಯೋಜನೆಯಡಿ ಗೃಹಿಣಿಯರಿಗೆ ಪ್ರತಿ ತಿಂಗಳು 2000 ರೂಪಾಯಿ ನೀಡಲಾಗುವುದು. ಅನ್ನಭಾಗ್ಯ ಯೋಜನೆಯಡಿ ಪ್ರತಿ ವ್ಯಕ್ತಿಗೆ 10 ಕೆ.ಜಿ ಅಕ್ಕಿ, ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ನಿರುದ್ಯೋಗಿ ಪದವೀಧರರಿಗೆ ಪ್ರತಿ ತಿಂಗಳಿಗೆ 3000 ರೂಪಾಯಿ, ನಿರುದ್ಯೋಗಿ ಡಿಪ್ಲೋಮಾ ಪದವೀಧರರಿಗೆ ತಿಂಗಳಿಗೆ 1500 ರೂ. ನೀಡಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದರು.

ಸುದ್ದಿಗೋಷ್ಠಿ ವೇಳೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ ಅವರು, ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿ ನಾಯಕರು ಕಾಂಗ್ರೆಸ್ ನ ಗ್ಯಾರಂಟಿಗಳ ವಿರುದ್ಧ ಕಿಡಿಕಾರಿದ್ದರು. ಈ ಯೋಜನೆಗಳನ್ನು ಅನುಷ್ಠಾನ ಮಾಡಿದ್ದೇ ಆದರೆ ರಾಜ್ಯ ದಿವಾಳಿಯಾಗುತ್ತದೆ ಎಂದು ಹೇಳಿದ್ದರು. ಆದರೆ ಯಾವುದೇ ಆರ್ಥಿಕ ದಿವಾಳಿ ಆಗದಂತೆ ಯೋಜನೆಗಳನ್ನು ಜಾರಿಗೆ ತರುತ್ತೇವೆ ಎಂದರು.

ಐದು ಗ್ಯಾರಂಟಿಗಳಿಗೆ ಸುಮಾರು 50 ಸಾವಿರ ಕೋಟಿ ಆಗಬಹುದು. ಕಟ್ಟುನಿಟ್ಟಾದ ತೆರಿಗೆ ಸಂಗ್ರಹ ಮೂಲಕ ನಾವು ಆರ್ಥಿಕ ಹೊರೆಯನ್ನು ಕಡಿಮೆ ಮಾಡಿಕೊಳ್ಳುತ್ತೇವೆ. ಕೇಂದ್ರದಿಂದ ಈ ವರ್ಷ 50 ಸಾವಿರ ಕೋಟಿ ರೂ. ಬರಬೇಕಿದೆ. ಕರ್ನಾಟಕದಿಂದ 4 ಲಕ್ಷ ಕೋಟಿ ರೂ. ತೆರಿಗೆ ಕಟ್ಟುತ್ತೇವೆ. ನಮ್ಮ ರಾಜ್ಯದ ಬಜೆಟ್​ ಗಾತ್ರ 3.10 ಲಕ್ಷ ಕೋಟಿ ರೂ. ಇದೆ. ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ನಮಗೆ ಅನ್ಯಾಯವಾಗಿದೆ. ಕೇಂದ್ರ ಸರ್ಕಾರದಿಂದ ನಮ್ಮ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ ಎಂದು ಸಿದ್ದರಾಮಯ್ಯ ದೂರಿದರು. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *