ಶಾಂತಿ ಕದಡಿದರೆ ಭಜರಂಗದಳ, ಆರ್‌ಎಸ್‌ಎಸ್‌ ಗೂ ನಿಷೇಧ: ಬಿಜೆಪಿ ಜಾರಿಗೆ ತಂದಿದ್ದ ಮಸೂದೆಗಳು ವಾಪಸ್; ಪ್ರಿಯಾಂಕ್‌ ಖರ್ಗೆ

ರಾಜ್ಯದಲ್ಲಿ ಶಾಂತಿ ಕದಡಿದರೆ ಭಜರಂಗದಳ ಮತ್ತು ಆರ್‌ಎಸ್‌ಎಸ್‌ನಂತಹ ಸಂಘಟನೆಗಳನ್ನು ತಮ್ಮ ಸರ್ಕಾರ ನಿಷೇಧಿಸುತ್ತದೆ, ಒಂದು ವೇಳೆ ಬಿಜೆಪಿ ನಾಯಕರಿಗೆ ಅದನ್ನು ಒಪ್ಪಿಕೊಳ್ಳಲು ಸಾಧ್ಯವಾಗದಿದ್ದರೆ ಪಾಕಿಸ್ತಾನಕ್ಕೆ ಹೋಗಬಹುದು .

Priyank Kharge

ಬೆಂಗಳೂರು: ರಾಜ್ಯದಲ್ಲಿ ಶಾಂತಿ ಕದಡಿದರೆ ಭಜರಂಗದಳ ಮತ್ತು ಆರ್‌ಎಸ್‌ಎಸ್‌ನಂತಹ ಸಂಘಟನೆಗಳನ್ನು ತಮ್ಮ ಸರ್ಕಾರ ನಿಷೇಧಿಸುತ್ತದೆ, ಒಂದು ವೇಳೆ ಬಿಜೆಪಿ ನಾಯಕರಿಗೆ ಅದನ್ನು ಒಪ್ಪಿಕೊಳ್ಳಲು ಸಾಧ್ಯವಾಗದಿದ್ದರೆ ಪಾಕಿಸ್ತಾನಕ್ಕೆ ಹೋಗಬಹುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ನಾವು ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ ತೋಟ ಮಾಡುತ್ತೇವೆ ಎಂದು ಭರವಸೆ ನೀಡಿದ್ದೇವೆ,  ಒಂದು ವೇಳೆ ಶಾಂತಿ ಕದಡಿದರೆ ಅದು ಭಜರಂಗದಳ ಅಥವಾ ಆರ್‌ಎಸ್‌ಎಸ್ ಎಂಬುದನ್ನು ನಾವು ಪರಿಗಣಿಸುವುದಿಲ್ಲ.

ಕಾನೂನನ್ನು ಕೈಗೆ ತೆಗೆದುಕೊಂಡರೆ ನಿಷೇಧ ಕಟ್ಟಿಟ್ಟ ಬುತ್ತಿ. ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಭಜರಂಗದಳ, ಆರ್‌ಎಸ್‌ಎಸ್ ಸೇರಿದಂತೆ ಯಾವುದೇ ಸಂಘಟನೆಯನ್ನು ನಿಷೇಧಿಸಲು ಹಿಂದೆ  ಮುಂದೆ ಯೋಚಿಸುವುದಿಲ್ಲ ಎಂದಿದ್ದಾರೆ.

ಹಿಜಾಬ್, ಹಲಾಲ್ ಕಟ್ ಮತ್ತು ಗೋಹತ್ಯೆ ಕಾನೂನುಗಳ ಮೇಲಿನ ನಿಷೇಧವನ್ನು ಸರ್ಕಾರ ಹಿಂಪಡೆಯಲಿದೆ ಎಂದು ಅವರು ಹೇಳಿದರು. ಸಮಾಜದಲ್ಲಿ ಕಾನೂನು ಮತ್ತು ಪೊಲೀಸರ ಭಯವಿಲ್ಲದೆ ಕೆಲವು ಅಂಶಗಳು ಮುಕ್ತವಾಗಿ ವಿಹರಿಸುತ್ತಿವೆ.  ಕಳೆದ ಮೂರು ವರ್ಷಗಳಿಂದ ಈ ಪ್ರವೃತ್ತಿ ನಡೆಯುತ್ತಿದೆ ಎಂದು ಪ್ರಿಯಾಂಕ್ ಹೇಳಿದ್ದಾರೆ.

ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಜನರು ಅವರನ್ನು ವಿರೋಧ ಪಕ್ಷದಲ್ಲಿ ಕೂರಿಸಲು ಕಾರಣವೇನು ಎಂಬುದನ್ನು ಬಿಜೆಪಿ ಅರ್ಥ ಮಾಡಿಕೊಳ್ಳಬೇಕು. ಕೇಸರಿಕರಣ ತಪ್ಪು ಎಂದು ಹೇಳಿದ್ದೇವೆ, ಎಲ್ಲರೂ ಅನುಸರಿಸಬಹುದಾದ ಬಸವಣ್ಣನವರ ತತ್ವಗಳನ್ನು ಕಾಂಗ್ರೆಸ್ ಅನುಸರಿಸುತ್ತದೆ ಎಂದು ಮಾಹಿತಿ ನೀಡಿದರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *