

ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಿ: ಅಧಿಕಾರಿಗಳಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಸೂಚನೆ
ಗ್ರಾಮಗಳಲ್ಲಿ ಅಕ್ರಮ ಮದ್ಯ ಮಾರಾಟ ತಡೆಯಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ಸೂಚಿಸಿದ್ದಾರೆ.
ಶಿರಸಿ ಕ್ಷೇತ್ರದಾದ್ಯಂತ ಅಕ್ರಮ ಮದ್ಯ ಮಾರಾಟ ವ್ಯಾಪಕವಾಗಿ ನಡೆಯುತ್ತಿದೆ ಎನ್ನುವ ದೂರುಗಳಿವೆ.ಇಂದಿನಿಂದಲೇ ನನ್ನ ಕ್ಷೇತ್ರದಲ್ಲಿ ಅಕ್ರಮ ಮದ್ಯ ಮಾರಾಟ ನಿಲ್ಲಬೇಕು. ಅಬಕಾರಿ ಇಲಾಖೆ ಆದ್ಯತೆಯ ಮೇಲೆ ಶಿರಸಿ-ಸಿದ್ಧಾಪುರಗಳಲ್ಲಿ ಅಕ್ರಮ ಮದ್ಯ ಮಾರಾಟ ನಿಲ್ಲಿಸಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಗುರುವಾರ ಸಿದ್ಧಾಪುರ ತಹಸಿಲ್ಧಾರ ಕಚೇರಿಯಲ್ಲಿ ನಡೆದ ಪ್ರಗತಿಪರಿಶೀಲನಾ ಸಭೆಯಲ್ಲಿ ಈ ಸೂಚನೆ ನೀಡಿದರು.

ಮೈಸೂರು: ಗ್ರಾಮಗಳಲ್ಲಿ ಅಕ್ರಮ ಮದ್ಯ ಮಾರಾಟ ತಡೆಯಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ಸೂಚಿಸಿದ್ದಾರೆ.
ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಜನರ ಸೇವೆ ಮಾಡಲು ಮತ್ತು ಸರ್ಕಾರಿ ಕಚೇರಿಗಳಲ್ಲಿ ನಡೆಯುವ ಭ್ರಷ್ಟಾಚಾರ ತಡೆಯಲು ಸರ್ಕಾರ ಬದ್ಧವಾಗಿದೆ. ಅಧಿಕಾರಿಗಳು ಎಲ್ಲಾ ಇಲಾಖೆಗಳಲ್ಲಿನ ಸರ್ಕಾರದ ಕಾರ್ಯಕ್ರಮಗಳು, ಬೆಳೆಗಳ ನಮೂನೆ, ಹನಿ ನೀರಾವರಿ ಬಳಕೆ ಬಗ್ಗೆ ಅರಿವು ಮೂಡಿಸಬೇಕು ಎಂದು ಹೇಳಿದರು.
ಜನರಲ್ ಆಸ್ಪತ್ರೆಯಲ್ಲಿ ವೈದ್ಯರ ಮತ್ತು ರೇಡಿಯಾಲಜಿಸ್ಟ್‌ಗಳ ಕೊರತೆ ಇರುವ ಬಗ್ಗೆ ಮಾತನಾಡಿ, ವೈದ್ಯರು ರೋಗಿಗಳನ್ನು ಖಾಸಗಿ ಆಸ್ಪತ್ರೆಗಳಿಗೆ ರೆಫರ್ ಮಾಡಬಾರದು ಎಂದು ಹೇಳಿದರು. ಅಲ್ಲದೆ, ಆಸ್ಪತ್ರೆಯಲ್ಲಿ ಒಂದು ವಾರಗಳ ಸಿಸಿಟಿವಿ ದೃಶ್ಯಾವಳಿಗಳನ್ನು ನೀಡುವಂತೆಯೂ ಅಧಿಕಾರಿಗಳಿಗೆ ಸೂಚಿಸಿದರು.
ಇದೇ ವೇಳೆ ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಸ್ಥಿತಿಗತಿ ಕುರಿತು ಸಮೀಕ್ಷೆ ನಡೆಸುವಂತೆ ಶಿಕ್ಷಣಾಧಿಕಾರಿಗಳಿಗೆ ಆದೇಶಿಸಿದ ಅವರು, ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಸಂಖ್ಯೆ ಕಳಪೆಯಾಗಿರುವುದಕ್ಕೆ ಕಾರಣಗಳ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಬಳಿಕ ಗ್ರಾಮೀಣ ಭಾಗದಲ್ಲಿ ಮದ್ಯದ ವ್ಯಸನ ಹೆಚ್ಚಾಗಿದ್ದು, ಕ್ಷೇತ್ರದಾದ್ಯಂತ ಸಣ್ಣಪುಟ್ಟ ಅಂಗಡಿಗಳಲ್ಲಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಇದಕ್ಕೆ ಕಡಿವಾಣ ಹಾಕುವಂತೆ ಸೂಚನೆ ನೀಡಿದರು. (ಕಪ್ರಡಾ)
