ಎಂ.ಪಿ.ಚುನಾವಣೆ-2024 ಉತ್ತರ ಕನ್ನಡದಿಂದ ಅಭ್ಯರ್ಥಿಗಳ್ಯಾರು?

ಕುಮಟಾ ಕ್ಷೇತ್ರದಲ್ಲಿ ಜೆ.ಡಿ.ಎಸ್.‌ ನಿಂದ ವಿಧಾನಸಭಾ ಚುನಾವಣೆಗೆ ಸ್ಫರ್ಧಿಸಿ ಕೇವಲ 600 ಮತಗಳಿಂದ ವಿರೋಚಿತ ಸೋಲನ್ನನುಭವಿಸಿರುವ ಸೂರಜ್‌ ನಾಯ್ಕ ಸೋನಿಯವರನ್ನು ಉತ್ತರ ಕನ್ನಡ ಜಿಲ್ಲೆಯಿಂದ ಕಾಂಗ್ರೆಸ್‌ ಲೋಕಸಭಾ ಅಭ್ಯರ್ಥಿಯನ್ನಾಗಿಸುವ ಬಗ್ಗೆ ಕಾಂಗ್ರೆಸ್‌ ಯೋಚಿಸಿದೆ ಎಂದು ಬಲ್ಲ ಮೂಲಗಳು ತಿಳಿಸಿವೆ.

ಬಿ.ಜೆ.ಪಿ.ಯ ಹಿರಿಯ ನಾಯಕರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಶಿರಸಿ ಕ್ಷೇತ್ರದಲ್ಲಿ ಸೋಲನ್ನನುಭವಿಸಿರುವುದರಿಂದ ತನಗೇ ಉತ್ತರ ಕನ್ನಡ ಜಿಲ್ಲೆಯಿಂದ ಲೋಕಸಭಾ ಅಭ್ಯರ್ಥಿಯನ್ನಾಗಿಸಬೇಕು ಎಂದು ಟವೆಲ್‌ ಹಾಕಿ ಸರತಿ ಸಾಲಿನಲ್ಲಿ ನಿಂತಿದ್ದಾರೆ ಎನ್ನುವ ಗುಟ್ಟು ಈಗ ಬಹಿರಂಗವಾಗಿದೆ.

ಬಿ.ಜೆ.ಪಿ.ಯಿಂದ ಲೋಕಸಭಾ ಅಭ್ಯರ್ಥಿಯಾಗುವ ದೂರಾಲೋಚನೆಯಿಂದ ಇತ್ತೀಚೆಗೆ ಬಿ.ಜೆ.ಪಿ. ಸೇರಿದ್ದ ಶಶಿಭೂಷಣ ಹೆಗಡೆ ಹೊಸ ಬೆಳವಣಿಗೆಗಳಿಂದ ಕಂಗಾಲಾಗಿ ಸೀದಾ ದೆಹಲಿಗೆ ತೆರಳಿ, ಬಿ.ಜೆ.ಪಿ. ಉತ್ತರ ಕನ್ನಡ ಲೋಕಸಭಾ ಟಿಕೇಟ್‌ ಕಾಯ್ದಿರಿಸಲು ಬಿ.ಜೆ.ಪಿ. ಕೇಂದ್ರ ನಾಯಕರ ದುಂಬಾಲುಬಿದ್ದಿದ್ದಾರೆ ಎಂದು ಮಾಹಿತಿ ದೊರೆತಿದೆ.

ಹೀಗೆ ಉತ್ತರ ಕನ್ನಡ ಜಿಲ್ಲೆಯಿಂದ ಲೋಕಸಭಾ ಸದಸ್ಯರಾಗಲು ಕಾರವಾರದ ವಸಂತ್ ಅಸ್ನೋಟಿಕರ್, ಕುಮಟಾದ ಸೂರಜ್‌ ನಾಯ್ಕ, ಭಟ್ಕಳದ ಜೆ.ಡಿ.ನಾಯ್ಕ,ಸುನಿಲ್‌ ನಾಯ್ಕ,ಸಿದ್ಧಾಪುರದ ಕೆ.ಜಿ.ನಾಯ್ಕ, ಶಶಿಭೂಷಣ ಹೆಗಡೆ ಶಿರಸಿಯ ವಿಶ್ವೇಶ್ವರ ಹೆಗಡೆ ಕಾಗೇರಿ, ಹಳಿಯಾಳದ ಪ್ರಶಾಂತ್‌ ದೇಶಪಾಂಡೆ ಸೇರಿದಂತೆ ಕನಿಷ್ಠ ಒಂದು ಡಜನ್‌ ನಾಯಕರು ಸಿದ್ಧರಾಗುತಿದ್ದಾರೆ.

ವಾಸ್ತವವೇನೆಂದರೆ… ಉತ್ತರ ಕನ್ನಡ ಜಿಲ್ಲೆಯಲ್ಲಿ ಜಾದಳವಾಗಲಿ,ಬಿ.ಜೆ.ಪಿ.ಯಾಗಲಿ ಲೋಕಸಭಾ ಚುನಾವಣೆ ಗೆಲ್ಲುವ ಶಕ್ತಿ ಹೊಂದಿಲ್ಲ. ಮೋದಿ, ಅನಂತಕುಮಾರ ಹೆಗಡೆ, ವಿಶ್ವೇಶ್ವರ ಹೆಗಡೆ ಸೇರಿದಂತೆ ಯಾರೂ ಮುಳುಗುವ ಹಡಗಾಗಿರುವ ಬಿ.ಜೆ.ಪಿ.ಯನ್ನು ಗೆಲ್ಲಿಸುವ ಸ್ಥಿತಿಯಲ್ಲಿಲ್ಲ ಈ ಕಾರಣಗಳಿಂದ 4 ಜನ ಶಾಸಕರನ್ನು ಉತ್ತರ ಕನ್ನಡದಲ್ಲಿ ಮತ್ತು ಬೆಳಗಾವಿಯ ಒಬ್ಬರು ಶಾಸಕರನ್ನು ಹೊಂದಿರುವ ಕಾಂಗ್ರೆಸ್‌ ಈಗ ಕೇವಲ ಮೂರು ಶಾಸಕಸ್ಥಾನಗಳಿಗೆ ಇಳಿದಿರುವ ಬಿ.ಜೆ.ಪಿ.ಯನ್ನು ಸೋಲಿಸುವ ಶಕ್ತಿ ಹೊಂದಿದೆ ಎನ್ನುವ ಹಿನ್ನೆಲೆಯಲ್ಲಿ ಆನಂದ ಅಸ್ನೋಟಿಕರ್‌, ಸೂರಜ್‌ ನಾಯ್ಕ, ಪ್ರಶಾಂತ್‌ ದೇಶಪಾಂಡೆ ಸೇರಿದಂತೆ ಅನೇಕರು ಕಾಂಗ್ರೆಸ್‌ ಅಭ್ಯರ್ಥಿಯಾಗಲು ತೆರೆಮರೆಯ ಸಿದ್ಧತೆ ನಡೆಸಿದ್ದಾರೆ ಎನ್ನಲಾಗುತ್ತಿದೆ.!

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *