
ರಾಜಕಾರಣಿಗಳ ಲಾಬಿಗೆ ಸೊಪ್ಪು ಹಾಕದ ಸರ್ಕಾರ: ಬಿಡಿಎ ಅಧ್ಯಕ್ಷರಾಗಿ ಐಎಎಸ್ ಅಧಿಕಾರಿ ರಾಕೇಶ್ ಸಿಂಗ್ ನೇಮಕ
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಐಎಎಸ್ ಅಧಿಕಾರಿ ರಾಕೇಶ್ ಸಿಂಗ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.


ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಐಎಎಸ್ ಅಧಿಕಾರಿ ರಾಕೇಶ್ ಸಿಂಗ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬಿಡಿಎ ಅಧ್ಯಕ್ಷ ಸ್ಥಾನಕ್ಕೆ ರಾಜಕಾರಣಿಗಳ ಪೈಪೋಟಿ ಹಿನ್ನೆಲೆಯಲ್ಲಿ ಐಎಎಸ್ ಅಧಿಕಾರಿಯನ್ನು ನೇಮಕ ಮಾಡಲಾಗಿದೆ. ಕಾಂಗ್ರೆಸ್ ಶಾಸಕರಾದ ಟಿ.ಬಿ.ಜಯಚಂದ್ರ, ಎನ್ .ಎ ಹ್ಯಾರಿಸ್, ಎಂ.ಕೃಷ್ಣಪ್ಪ, ಪ್ರಿಯಾಕೃಷ್ಣ ಸೇರಿದಂತೆ ಹಲವರು ತೀವ್ರ ಲಾಬಿ ನಡೆಸಿದ್ದರು.
ಈ ಹಿನ್ನೆಲೆಯಲ್ಲಿ ಸರ್ಕಾರ ರಾಜಕಾರಣಿಗಳಿಗೆ ಮಣೆಹಾಕದೆ ಬಿಡಿಎ ಅಧ್ಯಕ್ಷ ಹುದ್ದೆಗೆ IAS ಅಧಿಕಾರಿ ರಾಕೇಶ್ ಸಿಂಗ್ ಅವರನ್ನು ನೇಮಿಸಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ನ ಕೆಲ ಶಾಸಕರಿಗೆ ಭಾರೀ ನಿರಾಸೆಯಾಗಿದೆ.
ಬಿಡಿಎ ಸೇರಿದಂತೆ ರಾಮನಗರ ಹಾಗೂ ಗ್ರಾಮಾಂತರ ಮತ್ತು ಕರ್ನಾಟಕದ ಒಟ್ಟು 10 ಯೋಜನಾ ಪ್ರಾಧಿಕಾರಗಳ ಅಧ್ಯಕ್ಷರಾಗಿ ರಾಖೇಶ್ ಸಿಂಗ್ ಅವರನ್ನು ನೇಮಕ ಮಾಡಿದ್ದು, ಅಚ್ಚರಿಗೆ ಕಾರಣವಾಗಿದೆ.
ಸಹಜವಾಗಿ ಬಿಡಿಎ ಹಾಗೂ ಇತರೆ ಯೋಜನಾ ಪ್ರಾಧಿಕಾರ ಅಧ್ಯಕ್ಷರ ಹುದ್ದೆಗೆ ಆಡಳಿತ ಪಕ್ಷದ ನಾಯಕರನ್ನು ನೇಮಕ ಮಾಡುವುದು ಮೊದಲಿನಿಂದಲೂ ನಡೆದುಕೊಂಡು ಬಂದಿದೆ. ಆದ್ರೆ, ಇದೀಗ ಅಚ್ಚರಿ ಎಂಬಂತೆ ಸರ್ಕಾರ ಪಕ್ಷದ ನಾಯಕರನ್ನು ಬಿಟ್ಟು ಐಎಎಸ್ ಅಧಿಕಾರಿಯನ್ನು ನೇಮಕ ಮಾಡಿ ಅಚ್ಚರಿ ಮೂಡಿಸಿದೆ. (kpc)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
