ಚೇತನ್‌ ವಿರುದ್ಧ ಶ್ರೀಧರ ವಿವಾದದ ಅಗ್ನಿ ಪ್ರಜ್ವಲ!

ಬಜರಂಗ ದಳದ ಕಾರ್ಯಕರ್ತರನ್ನು ಥಳಿಸಲು, ದ್ರಾವಿಡ ಸೇನೆ ಆರಂಭಿಸಲು ಅಗ್ನಿ ಶ್ರೀಧರ್ ಕರೆ; ನಟ ಚೇತನ್ ತಿರುಗೇಟು!

ಲೇಖಕ ಅಗ್ನಿ ಶ್ರೀಧರ್ ಅವರು ಇತ್ತೀಚಿನ ಸಾಮಾಜಿಕ ಮಾಧ್ಯಮದಲ್ಲಿ ಪ್ರತಿ ಹಳ್ಳಿ ಮತ್ತು ಪಟ್ಟಣದಲ್ಲಿ ದ್ರಾವಿಡ ಸೈನ್ಯವನ್ನು ಪ್ರಾರಂಭಿಸಿ ಮತ್ತು ಬಜರಂಗದಳದ ಕಾರ್ಯಕರ್ತರನ್ನು ಬದಲಾಯಿಸಿ ಅಥವಾ ಥಳಿಸಿ ಎಂದು ಹೇಳಿಕೆ ನೀಡಿರುವುದು ಇದೀಗ ವಿವಾದವನ್ನು ಹುಟ್ಟುಹಾಕಿದೆ.

Chetan kumar

ಬೆಂಗಳೂರು: ಲೇಖಕ ಅಗ್ನಿ ಶ್ರೀಧರ್ ಅವರು ಇತ್ತೀಚಿನ ಸಾಮಾಜಿಕ ಮಾಧ್ಯಮದಲ್ಲಿ ಪ್ರತಿ ಹಳ್ಳಿ ಮತ್ತು ಪಟ್ಟಣದಲ್ಲಿ ದ್ರಾವಿಡ ಸೈನ್ಯವನ್ನು ಪ್ರಾರಂಭಿಸಿ ಮತ್ತು ಬಜರಂಗದಳದ ಕಾರ್ಯಕರ್ತರನ್ನು ಬದಲಾಯಿಸಿ ಅಥವಾ ಥಳಿಸಿ ಎಂದು ಹೇಳಿಕೆ ನೀಡಿರುವುದು ಇದೀಗ ವಿವಾದವನ್ನು ಹುಟ್ಟುಹಾಕಿದೆ.

https://imasdk.googleapis.com/js/core/bridge3.578.0_en.html#goog_518500679

ನಟ ಚೇತನ್ ಕುಮಾರ್ ಭಾನುವಾರ ಅಗ್ನಿ ಶ್ರೀಧರ್ ಹೇಳಿಕೆಯನ್ನು ಖಂಡಿಸಿದ್ದಾರೆ. ‘ಪ್ರತಿ ಊರಿಲ್ಲಿ ದ್ರಾವಿಡ ಪಡೆ ಆರಂಭಿಸಿ; ಬಜರಂಗದಳದ ಕಾರ್ಯಕರ್ತರನ್ನು ಬದಲಿಸಿ, ಇಲ್ಲವೇ ಬಾರಿಸಿ’ ಎಂದು ‘ಅಗ್ನಿ’ ಶ್ರೀಧರ್ ಹೇಳುತ್ತಾರೆ. ಶ್ರೀಧರ್ ಅವರು ನನಗೆ ಚಲನಚಿತ್ರದಲ್ಲಿ ನಟಿಸಲು ಅವಕಾಶ ನೀಡಿದ್ದಕ್ಕಾಗಿ ನಾನು ಅವರಿಗೆ ಕೃತಜ್ಞನಾಗಿದ್ದೇನೆ. ಆದರೆ, ಹಿಂಸಾಚಾರಕ್ಕೆ ಅವರ ಈ ಪ್ರಚೋದನೆಯನ್ನು ನಾನು ಬಲವಾಗಿ ವಿರೋಧಿಸುತ್ತೇನೆ ಎಂದಿದ್ದಾರೆ. 

ಭೂಗತ ಲೋಕದ (ಮಾಜಿ) ಡಾನ್‌ನಿಂದ ನಾವು ಎಂದಾದರೂ ಸಾಮಾಜಿಕ ಸದಾಚಾರ ಅಥವಾ ಅಹಿಂಸೆಯನ್ನು ನಿರೀಕ್ಷಿಸಬಹುದೇ? ಎಂದು ಚೇತನ್ ಪ್ರಶ್ನಿಸಿದ್ದಾರೆ.

ನಟ ಚೇತನ್ ಕುಮಾರ್ ಅವರು ಪಠ್ಯಪುಸ್ತಕ ಪರಿಷ್ಕರಣೆ ವಿವಾದ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಗಳ ಬಗ್ಗೆಯೂ ಪ್ರತಿಕ್ರಿಯಿಸಿದ್ದಾರೆ. 

‘ಸ್ವಾತಂತ್ರ್ಯ ಹೋರಾಟಗಾರರ ಚಿಂತನೆಗಳನ್ನು ನಿಜವಾಗಿ ಅರ್ಥಮಾಡಿಕೊಳ್ಳಲು ಭಗತ್ ಸಿಂಗ್ ಅವರ ‘ನಾನೇಕೆ ನಾಸ್ತಿಕ’ ಓದಲು ಪ್ರಿಯಾಂಕ್ ಖರ್ಗೆ ಚಕ್ರವರ್ತಿ ಸೂಲಿಬೆಲೆಗೆ ಹೇಳಿದರು. ಆದರೆ, ಇತ್ತೀಚೆಗೆ ಪ್ರಿಯಾಂಕ್ ಖರ್ಗೆ ಅವರು ‘ದೇವರ’ ಮೇಲೆ ಪ್ರಮಾಣ ವಚನ ಸ್ವೀಕರಿಸಿದರು. ಇದು ವಿಪರ್ಯಾಸ. ಬಹುಶಃ ಖರ್ಗೆ ಅವರು ಕೂಡ ಭಗತ್ ಸಿಂಗ್ ಅವರ ಕೃತಿಯನ್ನೂ ಓದಬೇಕು. ಬಿಜೆಪಿ ಮತ್ತು ಕಾಂಗ್ರೆಸ್ ಪಠ್ಯಪುಸ್ತಕಗಳು (ಹ್ಯುಮಾನಟೀಸ್ & ಸೋಶಲ್ ಸೈನ್ಸಸ್) ದೋಷಪೂರಿತವಾಗಿವೆ ಎಂದು ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಹೇಳಿದ್ದಾರೆ.

ಅಗ್ನಿ ಶ್ರೀಧರ್ ಅವರು ತಮ್ಮ ಪ್ರಗತಿಪರ ಚಿಂತನೆಗೆ ಹೆಸರುವಾಸಿಯಾಗಿದ್ದಾರೆ. ಕರ್ನಾಟಕದಲ್ಲಿ ಆರ್‌ಎಸ್‌ಎಸ್ ವಿರುದ್ಧ ಜಾಗೃತಿ ಮೂಡಿಸಲು ಚುನಾವಣೆಗೂ ಮುನ್ನ ರಾಷ್ಟ್ರೀಯ ದ್ರಾವಿಡ ಸಂಘ (ಆರ್‌ಡಿಎಸ್) ಅನ್ನು ಪ್ರಾರಂಭಿಸಿದರು. 

ಜೈನ ಸಮುದಾಯದ ಕೆಲವು ಗೋಮಾಂಸವನ್ನು ವಿದೇಶಗಳಿಗೆ ರಫ್ತು ಮಾಡುವ ಮೂಲಕವೇ ವಾರ್ಷಿಕ 40 ಸಾವಿರ ಕೋಟಿ ವಹಿವಾಟು ನಡೆಸುತ್ತಿದ್ದಾರೆ  ಈ ಹಿಂದೆ ಅಗ್ನಿ ಶ್ರೀಧರ್ ಹೇಳಿಕೆ ನೀಡಿದ್ದರು.

ಗೋಮಾಂಸ ರಫ್ತು ಉದ್ಯಮದಲ್ಲಿ ಈ ಹಿಂದೆ ಮುಸ್ಲಿಂ ಸಮುದಾಯವು ದೊಡ್ಡ ಪಾಲನ್ನು ಹೊಂದಿತ್ತು. ಮುಸ್ಲಿಂರನ್ನು ಈ ಉದ್ಯಮದಿಂದ ಹೊರಗಿಡಲು ಆರ್‌ಎಸ್ಎಸ್ ಮತ್ತು ಬಿಜೆಪಿ ಸರ್ಕಾರ ಗೋಹತ್ಯೆ ನಿಷೇಧ ಕಾನೂನು ಜಾರಿಗೊಳಿಸಿತು. ಈ ಹುನ್ನಾರದ ಹಿಂದೆ ಜೈನ ಸಮುದಾಯವಿದೆ ಎಂದು ದೂರಿದ್ದರು.

‘ಶ್ರೀಮಂತ ಮುಸ್ಲಿಮರು ಗೋಮಾಂಸ ತಿನ್ನುವುದಿಲ್ಲ. ಆದರೆ, ಗೋಹತ್ಯೆಯ ವಿಚಾರ ಮುನ್ನೆಲೆಗೆ ಬಂದಾಗಲೆಲ್ಲಾ ಗೋಮಾಂಸವು ಮುಸ್ಲಿಂ ಸಮುದಾಯದ ಆಹಾರ ಎಂದು ಬಿಂಬಿಸಲಾಗುತ್ತಿದೆ. ಆದರೆ, ದಲಿತರು ಮತ್ತು ಕ್ರಿಶ್ಚಿಯನ್ನರು ಗೋಮಾಂಸವನ್ನು ಹೆಚ್ಚಾಗಿ ತಿನ್ನುತ್ತಾರೆ. ಅದರ ಬಗ್ಗೆ ಚರ್ಚೆಗಳು ನಡೆಯುತ್ತಿಲ್ಲ ಎಂದು ಅವರು ಹೇಳಿದರು. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *