

ಸಾರಿಗೆ ನೌಕರರ ವೇತನವನ್ನು ಶೇ. 15ರಷ್ಟು ಹೆಚ್ಚಳ ಮಾಡಲು ಗುರುವಾರ ನಡೆದ ಸಚಿವ ಸಂಪುಟ ಸಭೆ ಆಡಳಿತಾತ್ಮಕ ಅನುಮೋದನೆ ನೀಡಿದೆ.

ಬೆಂಗಳೂರು: ಸಾರಿಗೆ ನೌಕರರ ವೇತನವನ್ನು ಶೇ. 15ರಷ್ಟು ಹೆಚ್ಚಳ ಮಾಡಲು ಗುರುವಾರ ನಡೆದ ಸಚಿವ ಸಂಪುಟ ಸಭೆ ಆಡಳಿತಾತ್ಮಕ ಅನುಮೋದನೆ ನೀಡಿದೆ.
ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಏಪ್ರಿಲ್ ತಿಂಗಳಿಂದ ಪೂರ್ವಾನ್ವಯವಾಗುವಂತೆ ಸಾರಿಗೆ ನೌಕರರ ವೇತನವನ್ನು ಶೇ. 15 ಹೆಚ್ಚಳ ಮಾಡಲು ತೀರ್ಮಾನಿಸಲಾಗಿದೆ.
ಕಳೆದ ಮಾರ್ಚ್ ನಲ್ಲಿ ಈ ಹಿಂದಿನ ಬಿಜೆಪಿ ಸರ್ಕಾರ, ನಾಲ್ಕೂ ನಿಗಮಗಳ(ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಕಲ್ಯಾಣ ಕರ್ನಾಟಕ ಸಾರಿಗೆ, ವಾಯುವ್ಯ ಕರ್ನಾಟಕ ಸಾರಿಗೆ) ಸಾರಿಗೆ ನೌಕರರ ವೇತನವನ್ನು ಶೇ.15ರಷ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸಿತ್ತು. (kpc)
