ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಮತ್ತು ಬಿಜೆಪಿ ವಿರುದ್ಧ ಒಗ್ಗಟ್ಟಿನಿಂದ ಹೋರಾಡುತ್ತೇವೆ

ಪಾಟ್ನಾ ಸಭೆ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಒಗ್ಗಟ್ಟಿನಿಂದ ಹೋರಾಡಲು 17 ಪ್ರತಿಪಕ್ಷಗಳಿಂದ ನಿರ್ಧಾರ

2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಒಗ್ಗಟ್ಟಿನಿಂದ ಹೋರಾಡಲು ಮತ್ತು ತಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಉತ್ಸಾಹದಿಂದ ಕೆಲಸ ಮಾಡಲು 17 ವಿರೋಧ ಪಕ್ಷಗಳು ಶುಕ್ರವಾರ ನಿರ್ಧರಿಸಿವೆ.

patnameet

ಪಾಟ್ನಾ: 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಒಗ್ಗಟ್ಟಿನಿಂದ ಹೋರಾಡಲು ಮತ್ತು ತಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಉತ್ಸಾಹದಿಂದ ಕೆಲಸ ಮಾಡಲು 17 ವಿರೋಧ ಪಕ್ಷಗಳು ಶುಕ್ರವಾರ ನಿರ್ಧರಿಸಿವೆ.

ಸುಮಾರು ನಾಲ್ಕು ಗಂಟೆಗಳ ಕಾಲ ನಡೆದ ಪ್ರತಿಪಕ್ಷಗಳ ಸುದೀರ್ಘ ಸಭೆಯ ನಂತರ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಬಿಹಾರ ಮುಖ್ಯಮಂತ್ರಿ ಹಾಗೂ ಜೆಡಿಯು ವರಿಷ್ಠ ನಿತೀಶ್ ಕುಮಾರ್ ಅವರು, ಸಭೆಯಲ್ಲಿ 17 ಪಕ್ಷಗಳ ನಾಯಕರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಮುಂದಿನ ಕೆಲವು ದಿನಗಳಲ್ಲಿ ನಾಯಕರು ಒಟ್ಟಾಗಿ ಹೋರಾಡುವ ಯೋಜನೆಗೆ ಅಂತಿಮ ರೂಪ ನೀಡಲಾಗುವುದು ಎಂದು ಹೇಳಿದರು.

“ನಾವು ಉತ್ತಮ ಸಭೆ ನಡೆಸಿದ್ದೇವೆ ಮತ್ತು ಸಭೆಯಲ್ಲಿ ಹಲವಾರು ನಾಯಕರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. 17 ಪಕ್ಷಗಳು ಒಟ್ಟಾಗಿ ಕೆಲಸ ಮಾಡಲು ಮತ್ತು ಲೋಕಸಭೆ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಸ್ಪರ್ಧಿಸಲು ನಿರ್ಧರಿಸಿವೆ” ಎಂದು ಬಿಹಾರ ಸಿಎಂ ತಿಳಿಸಿದ್ದಾರೆ.

ನಾವು ರಾಷ್ಟ್ರೀಯ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡುತ್ತಿದ್ದೇವೆ. ದೇಶದ ಇತಿಹಾಸವನ್ನು ತಿರುಚಲು ಪ್ರಯತ್ನಿಸುತ್ತಿರುವ ಬಿಜೆಪಿ ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ನಿತೀಶ್ ಕುಮಾರ್ ಆರೋಪಿಸಿದರು.

ಮುಂದಿನ ತಿಂಗಳು ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಪ್ರತಿಪಕ್ಷ ನಾಯಕರ ಮುಂದಿನ ಸಭೆ ನಡೆಯಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಘೋಷಿಸಿದ್ದಾರೆ.

ಸಾಮಾನ್ಯ ಕಾರ್ಯಸೂಚಿ ಸಿದ್ಧಪಡಿಸಲು ನಿರ್ಧರಿಸಿದ್ದು, ಮುಂದಿನ ಸಭೆಯಲ್ಲಿ ಯಾವ ರೀತಿ ಮುನ್ನಡೆಯಬೇಕು ಎಂಬ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಖರ್ಗೆ ತಿಳಿಸಿದ್ದಾರೆ.

ನಾವು ಪ್ರತಿ ರಾಜ್ಯಕ್ಕೂ ಪ್ರತ್ಯೇಕ ಯೋಜನೆಗಳನ್ನು ರೂಪಿಸಬೇಕು ಮತ್ತು ಕೇಂದ್ರದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಲು ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಅವರು ಹೇಳಿದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, “ನಮ್ಮಲ್ಲಿ ಕೆಲವು ಭಿನ್ನಾಭಿಪ್ರಾಯಗಳಿರಬಹುದು. ಆದರೆ ಪರಸ್ಪರ ಅರ್ಥ ಮಾಡಿಕೊಂಡು ಒಟ್ಟಾಗಿ ಕೆಲಸ ಮಾಡಲು ನಿರ್ಧರಿಸಿದ್ದೇವೆ ಮತ್ತು ನಮ್ಮ ಸಿದ್ಧಾಂತವನ್ನು ರಕ್ಷಿಸಲು ಕೆಲಸ ಮಾಡುತ್ತೇವೆ” ಎಂದರು.

ಈ ವೇಳೆ ಮಾತನಾಡಿದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು, ಪಾಟ್ನಾದಲ್ಲಿ ಮೊದಲ ಪ್ರತಿಪಕ್ಷ ನಾಯಕರ ಸಭೆ ಆಯೋಜಿಸಲಾಗಿದ್ದು, “ಪಾಟ್ನಾದಿಂದ ಏನೇ ಆರಂಭವಾದರೂ ಅದು ಸಾರ್ವಜನಿಕ ಚಳುವಳಿಯ ರೂಪ ಪಡೆದುಕೊಳ್ಳುತ್ತದೆ” ಎಂದರು.

ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಮತ್ತು ಬಿಜೆಪಿ ವಿರುದ್ಧ ಒಗ್ಗಟ್ಟಿನಿಂದ ಹೋರಾಡುತ್ತೇವೆ. ಬಿಜೆಪಿ ಇತಿಹಾಸವನ್ನು ತಿರುಚಲು ಬಯಸುತ್ತದೆ. ಆದರೆ ನಾವು ಇತಿಹಾಸವನ್ನು ಉಳಿಸುತ್ತೇವೆ ಎಂದು ಪಶ್ಚಿಮ ಬಂಗಾಳ ಸಿಎಂ ಹೇಳಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *