ದೇವಿಮನೆ ಘಟ್ಟದಲ್ಲಿ ದೊರೆತ ಅಪರಿಚಿತ ಶವದ ಹಿಂದೆ ದೊಡ್ಡ ಕೊಲೆ ಕತೆ! ಒಟ್ಟೂ ೫ ಜನ ಆರೆಸ್ಟ್‌!!

ಈ ವಾರದ ಪ್ರಾರಂಭದಲ್ಲಿ ಕುಮಟಾ ದೇವಿಮನೆ ಘಟ್ಟದ ಬಳಿ ಪತ್ತೆಯಾಗಿದ್ದ ಅಪರಿಚಿತ ಮಹಿಳಾ ಶವ ಯಲ್ಲವ್ವ ಯಾನೆ ತನುಜಾ ದೊಡ್ಮನಿ ಎಂದು ಖಾತ್ರಿಯಾಗಿದ್ದು ಇದೊಂದು ಕೊಲೆ ಪ್ರಕರಣ ಎನ್ನುವುದನ್ನು ಕುಮಟಾ ಪೊಲೀಸರು ಪತ್ತೆ ಮಾಡಿದ್ದಾರೆ.

೨೬ ವರ್ಷದ ಶಿಗ್ಗಾಂವ ನ ತನುಜಾ ಶವ ದೇವಿಮನೆ ಘಟ್ಟದ ಬಳಿ ಪತ್ತೆಯಾಗುತ್ತಲೇ ಪೊಲೀಸರು ಸಾರ್ವಜನಿಕ ಪ್ರಕಟಣೆ ನೀಡಿದ್ದರು. ಈ ಘಟನೆಯನ್ನು ಕೆದಕುತ್ತಾ ಹೋದ ಉತ್ತರ ಕನ್ನಡ ಪೊಲೀಸರಿಗೆ ಈ ಶವದ ಹಿಂದೆ ಇರುವ ಸಂಘಟಿತ ಕೊಲೆಯ ರಹಸ್ಯ ಬಯಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ವರೆಗೆ ಉತ್ತರ ಕನ್ನಡ ಮತ್ತು ಗದಗದ ತಲಾ ಒಬ್ಬರು ಹಾಗೂ ಶಿಗ್ಗಾಂವನ ಮೂವರನ್ನು ಬಂಧಿಸಲಾಗಿದೆ. ಗದಗದ ಒಬ್ಬ ವ್ಯಕ್ತಿ ಮತ್ತು ಮುಂಡಗೋಡಿನ ಇಂದೂರಿನ ಒಬ್ಬ ವ್ಯಕ್ತಿ ಈ ಕೊಲೆಗೆ ಸಹಕರಿಸಿದ ಬಗ್ಗೆ ಆರೋಪ ಮಾಡಲಾಗಿದ್ದು ಇಂದೂರಿನ ಅಮಿತ್‌ ಗೋಖಲೆ ಎನ್ನುವ ವ್ಯಕ್ತಿ ಮಹಿಳೆಯ ಶವ ಸಾಗಿಸಲು ಇತರ ಆರೋಪಿಗಳಿಗೆ ಸಹಕರಿಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದಾನೆ. ಶವ- ಸಾಗಾಟ, ಕೊಲೆ ಷಡ್ಯಂತ್ರಕ್ಕೆ ಬಳಸಿದ ಕ್ರೂಸರ್‌ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಯಲ್ಲವ್ವ ಯಾನೆ ತನುಜಾ ಎನ್ನುವ ವಿವಾಹಿತ ಮಹಿಳೆಗೆ ಇಬ್ಬರು ಮಕ್ಕಳಿದ್ದು ಅವರ ಕುಟುಂಬಸ್ಥರೇ ವ್ಯೂಹ ರಚಿಸಿ ಊಟದಲ್ಲಿ ನಿದ್ರೆಗುಳಿಗೆ ಹಾಕಿ ನಂತರ ಕೊಲೆ ಮಾಡಿ ಅನ್ಯರ ನೆರವು ಪಡೆದು ಶವವನ್ನು ಕುಮಟಾ ಪೊಲೀಸ್‌ ಠಾಣಾ ವ್ಯಾಪ್ತಿಯ ದೇವಿಮನೆ ಘಟ್ಟದ ಬಳಿ ಎಸೆದು ಪರಾರಿಯಾಗಿದ್ದರು. ಈ ಕೊಲೆ ಪ್ರಕರಣದ ಬಾಧಿತರಾದ ಲೋಹಿತ್‌ ದೊಡ್ಮನಿಯ ಮನೆಯವರೇ ಈ ಕೊಲೆ ಆರೋಪಿಗಳಾಗಿದ್ದು ಗಂಡ ಮತ್ತು ಮಕ್ಕಳಿಗೆ ತಿಳಿಯದಂತೆ ಗುಪ್ತವಾಗಿ ಈ ಕೊಲೆ ಷಡ್ಯಂತ್ರ ಮಾಡಿರುವ ಹಿನ್ನೆಲೆಯಲ್ಲಿ ಲೋಹಿತ್‌ ನ ಅಮ್ಮ, ಚಿಕ್ಕಮ್ಮ ಮತ್ತು ಅಣ್ಣನನ್ನು ಬಂಧಿಸಲಾಗಿದೆ. ತಮ್ಮ ಕುಟುಂಬಕ್ಕೆ ಕೆಟ್ಟ ಹೆಸರು ತರುತ್ತಾಳೆ ಎನ್ನುವ ಶೀಲ ಸಂಬಂಧಿ ಆಕ್ಷೇಪದ ಹಿನ್ನೆಲೆಯಲ್ಲಿ ವ್ಯವಸ್ಥಿತವಾಗಿ ಈ ಕೊಲೆ ಮಾಡಲಾಗಿದೆ ಎಂದು ತನಿಖೆಯಿಂದ ಧೃಢಪಟ್ಟಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *