

ಸಿದ್ಧಾಪುರ ಸರ್ಕಾರಿ ಪದವಿ ಮಹಾವಿದ್ಯಾಲಯ ತ್ಯಾರಸಿಯ ವಿದ್ಯಾರ್ಥಿಗಳು ಗುಂಪುಘರ್ಷಣೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ.
ಇಂದು ಬೆಳಿಗ್ಗೆ ಸಿದ್ಧಾಪುರ ಸರ್ಕಾರಿ ಪದವಿ ಮಹಾವಿದ್ಯಾಲಯದಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ ನಡೆದಿತ್ತು. ಈ ಕಾರ್ಯಕ್ರಮದ ಅಂಗವಾಗಿ ನಡೆಯುತಿದ್ದ ಮನೋರಂಜನಾ ಚಟುವಟಿಕೆಗಳ ಸಂದರ್ಭದಲ್ಲಿ ನೃತ್ಯಮಾಡಿ ಕೆಸರು ನೀರು ಹಾರಿಸುತಿದ್ದ ಕೆಲವು ವಿದ್ಯಾರ್ಥಿಗಳನ್ನು ಪ್ರಶ್ನಿಸಿದ ಸಹಪಾಠಿಗಳ ಮೇಲೆ ಏರಿಹೋದ ಕೆಲವು ವಿದ್ಯಾರ್ಥಿಗಳು ತಮ್ಮ ಸಹಪಾಠಿ ಸ್ನೇಹಿತರನ್ನೇ ಹೊಡೆದು,ಧರಿಸಿದ ಬಟ್ಟೆಗಳನ್ನು ಹರಿದು ಹಾಕಿದ ಬಗ್ಗೆ ಬಾಧಿತ ವಿದ್ಯಾರ್ಥಿಯೊಬ್ಬ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ.
ಈ ದೂರಿನನ್ವಯ ತನಿಖೆ ನಡೆಸುತ್ತಿರುವ ಪೊಲೀಸರು ಕೆಲವು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಇಂದು ಮುಂಜಾನೆ ಸ್ನೇಹ ಸಮ್ಮಿಲನದಲ್ಲಿ ಪಾಲ್ಗೊಂಡಿದ್ದ ಸ್ಥಳೀಯ ಶಾಸಕ ಭೀಮಣ್ಣ ನಾಯ್ಕ ವಿದ್ಯಾರ್ಥಿಗಳಿಗೆ ಹಿತನುಡಿಗಳನ್ನಾಡಿದ್ದರು. ಈ ಕಾರ್ಯಕ್ರಮ ಮುಗಿಸಿ ಶಾಸಕರು ಶಿರಸಿಗೆ ಮರಳುವ ಮೊದಲು ವಿದ್ಯಾರ್ಥಿಗಳ ಗುಂಪು-ಘರ್ಷಣೆ ವರದಿಯಾಗಿದೆ.
