ಮದ್ಯದ ದರ ಏರಿಕೆ ಬಿಸಿ…. ಕುಡುಕರಿಗೆ ಥಂಡಿ!

ಮಧ್ಯಂತರ ಬಜೆಟ್‌ ಮಂಡಿಸಿರುವ ಸಿದ್ಧರಾಮಯ್ಯ ಮದ್ಯದ ಬೆಲೆ ಏರಿಕೆ ಮಾಡಿದ್ದಾರೆ. ಮಳೆಗಾಲದ ಚಳಿಯಲ್ಲಿ ಎಣ್ಣೆ ದರ ಏರಿಕೆ ಬಿಸಿ ಮುಟ್ಟಿದರೂ ಮದ್ಯ ಖರೀದಿ ಮಾಡಲಾರದ ಕುಡುಕರ ಅಸಹಾಯಕತೆಯಿಂದಾಗಿ ಎಣ್ಣೆ ಬಿಸಿಯಿಂದ ಥಂಡಿಕಡಿಮೆಮಾಡಿಕೊಳ್ಳುವ ಮದ್ಯಪ್ರೀಯರ ಥಂಡಿಯನ್ನೂ ಹೆಚ್ಚಿಸಿದಂತಾಗಿದೆ!

ಬಜೆಟ್ 2023ರಾಜ್ಯ ಬಜೆಟ್

ಎಣ್ಣೆ ಪ್ರಿಯರಿಗೆ ಶಾಕ್ ಕೊಟ್ಟ ಸರ್ಕಾರ: ಮದ್ಯ ದರ ದುಬಾರಿ, ಎಷ್ಟು ಇಲ್ಲಿದೆ ಮಾಹಿತಿ

ಎಣ್ಣೆ ಪ್ರಿಯರಿಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಇಂದು ಶುಕ್ರವಾರ ಮಂಡಿಸಿರುವ ಬಜೆಟ್ ನಲ್ಲಿ ಶಾಕ್ ನೀಡಿದ್ದಾರೆ.

Representational image

ಬೆಂಗಳೂರು: ಎಣ್ಣೆ ಪ್ರಿಯರಿಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಇಂದು ಶುಕ್ರವಾರ ಮಂಡಿಸಿರುವ ಬಜೆಟ್ ನಲ್ಲಿ ಶಾಕ್ ನೀಡಿದ್ದಾರೆ.

ಬಜೆಟ್‌ ಮಂಡನೆಗೂ ಮುನ್ನ ‘ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು’ ಎಂದು ಸಿದ್ದರಾಮಯ್ಯ ಅವರು ಹೇಳಿದರು. ಸಿಎಂ ಸಿದ್ದರಾಮಯ್ಯ ಅವರು 3.39 ಲಕ್ಷ ಕೋಟಿಯ ಬಜೆಟ್‌ ಮಂಡಿಸುತ್ತಿದ್ದಾರೆ. ಹಲವು ಉಚಿತ ಗ್ಯಾರಂಟಿಗಳನ್ನು ಜಾರಿಗೊಳಿಸಿರುವ ರಾಜ್ಯ ಸರ್ಕಾರ, ಅದಕ್ಕೆ ತಗುಲುವ ವೆಚ್ಚವನ್ನು ಸರಿದೂಗಿಸಲು ಮದ್ಯಪಾನ ಪ್ರಿಯರ ಮೇಲೆ ಭಾರ ಹೊರಿಸಿದೆ. 

ಅಬಕಾರಿ ತೆರಿಗೆಯಲ್ಲಿ ಹೆಚ್ಚಳ ಮಾಡಲಾಗಿದ್ದು, ಇದರಿಂದ ಮದ್ಯ ದುಬಾರಿಯಾಗಲಿದೆ. ಬಜೆಟ್‌ನಲ್ಲಿ ಅಬಕಾರಿ ತೆರಿಗೆ ಹೆಚ್ಚಳವಾಗಿದೆ. ಅಬಕಾರಿ ತೆರಿಗೆಯನ್ನು ಶೇಕಡಾ 20 ರಷ್ಟು ಹೆಚ್ಚಳ ಮಾಡಲಾಗಿದೆ.

ಗ್ಯಾರಂಟಿ ಭಾರ ಇಳಿಸಲು ತೆರಿಗೆ ಭಾರ: ರಾಜ್ಯದ ಅಬಕಾರಿ ತೆರಿಗೆಯಲ್ಲಿ ಶೇ 20ರಷ್ಟು ಹೆಚ್ಚಳ ಮಾಡಲಾಗಿದೆ. ಬಿಯರ್ ಮೇಲಿನ ಅಬಕಾರಿ ತೆರಿಗೆ ಶೇ 10ರಷ್ಟು ಹೆಚ್ಚಳವಾಗಲಿದೆ. ಇಂದು ವಿಧಾನಸಭೆಯಲ್ಲಿ ನೂತನ ಸರ್ಕಾರದ ಮೊದಲ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮದ್ಯದ ಮಲಿನ ಹೆಚ್ಚುವರಿ ತೆರಿಗೆಯನ್ನು ಘೋಷಣೆ ಮಾಡಿದ್ದಾರೆ.

ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆಯನ್ನು ಶೇಕಡಾ 175ರಿಂದ 185ಕ್ಕೆ ಹೆಚ್ಚಿಸಲಾಗಿದೆ ಎಂದು ಸಹ ಮುಖ್ಯಮಂತ್ರಿಗಳು ಘೋಷಣೆ ಮಾಡಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *