

ಸಿದ್ದಾಪುರ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ, ಸನ್ಮಾನ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಸರಕುಳಿ ಶ್ರೀ ಜಗದಂಬಾ ಪ್ರೌಢಶಾಲಾ ಸಭಾಂಗಣದಲ್ಲಿ ಜುಲೈ.೧೩ರಂದು ಬೆಳಗ್ಗೆ ೧೦.೩೦ಕ್ಕೆ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗಂಗಾಧರ ಕೊಳಗಿವಹಿಸುವರು.
ಜಗದಂಬಾ ಪ್ರೌಢಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಮಂಜುನಾಥ ಜಿ.ಹೆಗಡೆ ತ್ಯರ‍್ಗಲ್ ಕಾರ್ಯಕ್ರಮ ಉದ್ಘಾಟಿಸುವರು.ಸರಕುಳಿ ಸಹಿಪ್ರಾ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಪ್ರಶಾಂತ ಹೆಗಡೆ ತಟ್ಟಿಕೈ ತಾಲೂಕು ಪತ್ರಕರ್ತರ ಮಾಹಿತಿ ಬಿಡುಗಡೆಮಾಡುವರು.
ಹಿರಿಯ ಪತ್ರಕರ್ತರಾದ ನರೇಂದ್ರ ಹೆಗಡೆ ಹೊಂಡಗಾಶಿ ಅವರಿಗೆ ತಾಲೂಕು ಕಾರ್ಯನಿರತ ಪತ್ರಕರ್ತ ಸಂಘದಿಂದ ಸನ್ಮಾನ ಹಾಗೂ ಹಿರಿಯ ಸಾಹಿತಿ ಶ್ರೀನಿವಾಸ ಶಾನಭಾಗ ಹಾರ್ಸಿಕಟ್ಟಾ ರಿಗೆ ಗುರುಮನೆ ದತ್ತಿನಿಧಿ ಪ್ರಶಸ್ತಿ ಪ್ರದಾನ ನಡೆಯಲಿದೆ.

ಬಿಇಒ ಜಿ.ಐ.ನಾಯ್ಕ, ಉ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜಿ.ಸುಬ್ರಾಯ ಭಟ್ಟ ಬಕ್ಕಳ ಹಾಗೂ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಬಸವರಾಜ್ ಪಾಟೀಲ್ ಮುಂಡಗೋಡ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುತ್ತಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

ಸಿದ್ದಾಪುರ
ಮಕ್ಕಳಿಗೆ ಸಂಸ್ಕೃತಿ ಹಾಗೂ ಸಂಸ್ಕಾರವನ್ನು ನೀಡಿದರೆ ಮಾತ್ರ ಉತ್ತಮ ಸಮಾಜ ನಿರ್ಮಾಣವಾಗುತ್ತದೆ.ಪ್ರತಿಯೊಬ್ಬರ ನಡತೆ, ವ್ಯಕ್ತಿತ್ವ ಪರಿಶುದ್ಧವಾಗಿದ್ದರೆ ಮಾತ್ರ ಪರಿವರ್ತನೆ ಸಾಧ್ಯ ಎಂದು ಸಿದ್ದಾಪುರದ ಈಶ್ವರೀಯ ವಿಶ್ವವಿದ್ಯಾಲಯದ ಸಂಚಾಲಕಿ ಬಿ.ಕೆ.ದೇವಿಕಾ ಹೇಳಿದರು.
ತಾಲೂಕಿನ ಹಾರ್ಸಿಕಟ್ಟಾ ಗಣೇಶಮಂಟಪದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹಾರ್ಸಿಕಟ್ಟಾ, ಮುಠ್ಠಳ್ಳಿ ಹಾಗೂ ಬಿದ್ರಕಾನ ಮಹಿಳಾ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವದಲ್ಲಿ ಅವರು ಸಂಪನ್ಮೂಲವ್ಯಕ್ತಿಗಳಾಗಿ ಸಂಸ್ಕೃತಿ ಹಾಗೂ ಸಂಸ್ಕಾರದ ಅವಶ್ಯಕತೆ ಕುರಿತು ಶನಿವಾರ ಮಾತನಾಡಿದರು.
ಸಂಸ್ಕೃತಿ ಹಾಗೂ ಸಂಸ್ಕಾರವನ್ನು ಮನೆಯಲ್ಲಿಯೇ ನೀಡಬೇಕು. ಇದು ಎಲ್ಲಿಯೂ ಸಿಗುವುದಲ್ಲ. ಮನೆಯಲ್ಲಿ ಮಕ್ಕಳಿಗೆ ರಾಮಾಯಣ, ಮಹಾಭಾರತ, ಭಗವದ್ಗೀತೆಗಳನ್ನು ತಿಳಿಸಿಕೊಡಬೇಕು ಎಂದು ಹೇಳಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ಜನಜಾಗೃತಿ ವೇದಿಕೆಯ ತಾಲೂಕು ನಿರ್ದೇಶಕ ರಮೇಶ ಹೆಗಡೆ ಹಾರ್ಸಿಮನೆ ಕಾರ್ಯಕ್ರಮ ಉದ್ಘಾಟಿಸಿ ವಾರ್ಷಿಕೋತ್ಸವದ ಅಂಗವಾಗಿ ನಡೆದ ಸ್ಫರ್ಧಾಕಾರ್ಯಕ್ರಮದ ವಿಜೇತರಿಗೆ ಬಹುಮಾನ ವಿತರಿಸಿದರು.

ಹಾರ್ಸಿಕಟ್ಟಾ ಗ್ರಾಪಂ ಅಧ್ಯಕ್ಷೆ ವಿದ್ಯಾ ಪಿ.ನಾಯ್ಕ ಅಧ್ಯಕ್ಷತೆವಹಿಸಿದ್ದರು.
ಮುಠ್ಠಳ್ಳಿ ಒಕ್ಕೂಟದ ಅಧ್ಯಕ್ಷ ತಿಮ್ಮಪ್ಪ, ಹಾರ್ಸಿಕಟ್ಟಾ ಒಕ್ಕೂಟದ ಅಧ್ಯಕ್ಷೆ ಶಶಿಕಲಾ ಆಚಾರ್ಯ, ಬಿದ್ರಕಾನ ಒಕ್ಕೂಟದ ಅಧ್ಯಕ್ಷ ಮಂಜುನಾಥ ಉಪಸ್ಥಿತರಿದ್ದರು.
ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಪ್ರಭಾಕರ ನಾಯ್ಕ ಪ್ರಾಸ್ತಾವಿಕ ಮಾತನಾಡಿದರು.
ಜ್ಞಾನವಿಕಾಸ ತಾಲೂಕು ಸಂಚಾಲಕಿ ಪ್ರಭಾವತಿ, ಪ್ರದೀಪ, ಉದಯ ಕಾರ್ಯಕ್ರಮ ನಿರ್ವಹಿಸಿದರು. ಸೇವಾನಿರತರಾದ ಹೇಮಾವತಿ, ನೇತ್ರಾವತಿ, ಚಂದ್ರಮತಿ ಸಹಕರಿಸಿದರು.
