
‘ಮೋದಿ ಉಪನಾಮ’ ವಿವಾದ ಹಿನ್ನೆಲೆಯಲ್ಲಿ ಕೋರ್ಟ್ ಆದೇಶ ಬಂದ ನಂತರ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರ ಸಂಸದ ಸದಸ್ಯತ್ವ ರದ್ಧತಿ ಹಿಂದೆ ಬಿಜೆಪಿ ಪಿತೂರಿ ಇದೆ, ಬಿಜೆಪಿಯಿಂದ ಸೇಡಿನ ರಾಜಕಾರಣವಾಗುತ್ತಿದೆ ಎಂದು ಆರೋಪಿಸಿ ದೇಶಾದ್ಯಂತ ರಾಜ್ಯ ಕೇಂದ್ರಗಳಲ್ಲಿ ಕಾಂಗ್ರೆಸ್ ನಾಯಕರು ಮೌನ ಪ್ರತಿಭಟನೆ ಹಮ್ಮಿಕೊಂಡಿದ್ದು, ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಸಿಎಂ ಸಿದ್ದ

ಬೆಂಗಳೂರು: ‘ಮೋದಿ ಉಪನಾಮ’ ವಿವಾದ ಹಿನ್ನೆಲೆಯಲ್ಲಿ ಕೋರ್ಟ್ ಆದೇಶ ಬಂದ ನಂತರ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರ ಸಂಸದ ಸದಸ್ಯತ್ವ ರದ್ಧತಿ ಹಿಂದೆ ಬಿಜೆಪಿ ಪಿತೂರಿ ಇದೆ, ಬಿಜೆಪಿಯಿಂದ ಸೇಡಿನ ರಾಜಕಾರಣವಾಗುತ್ತಿದೆ ಎಂದು ಆರೋಪಿಸಿ ದೇಶಾದ್ಯಂತ ರಾಜ್ಯ ಕೇಂದ್ರಗಳಲ್ಲಿ ಕಾಂಗ್ರೆಸ್ ನಾಯಕರು ಮೌನ ಪ್ರತಿಭಟನೆ ಹಮ್ಮಿಕೊಂಡಿದ್ದು, ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೆವಾಲಾ, ಮಂತ್ರಿಗಳು, ಶಾಸಕರು ಭಾಗಿಯಾಗಿದ್ದರು. ಕಾಂಗ್ರೆಸ್ ನಾಯಕರು ಬಾಯಿಗೆ ಕಪ್ಪು ಪಟ್ಟಿ ಧರಿಸಿ ಕೇಂದ್ರ ಬಿಜೆಪಿ ಸರ್ಕಾರ ವಿರುದ್ಧ ಮೌನ ಪ್ರತಿಭಟನೆ ನಡೆಸಿದರು.
ಕಡತಗಳನ್ನ ಫ್ರೀಡಂ ಪಾರ್ಕ್ಗೆ ತಂದ ಅಧಿಕಾರಿಗಳು: ಕಾಂಗ್ರೆಸ್ ಫ್ರೀಡಂ ಪಾರ್ಕ್ ಬಳಿ ಮೌನ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆ ಅಧಿಕಾರಿಗಳು ಕಡತಗಳನ್ನ ಫ್ರೀಡಂ ಪಾರ್ಕ್ಗೆ ತೆಗೆದುಕೊಂಡು ಬಂದಿದ್ದಾರೆ. ಈ ವೇಳೆ ಅಧಿಕಾರಿಗಳು ತಂದಿದ್ದ ಕಡತಗಳಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸಹಿ ಹಾಕಿದ್ದಾರೆ. ಸಹಿ ಹಾಕಿದ ಬಳಿಕ ಕಡತಗಳನ್ನ ಅಧಿಕಾರಿಗಳು ಹೊತ್ತೊಯ್ದಿದ್ದಾರೆ. (kpc)
