
‘ಶಕ್ತಿ ಯೋಜನೆ’ ಸಾರಿಗೆ ನಿಗಮಗಳನ್ನು ಸ್ವಾವಲಂಬಿಯಾಗಿಸುತ್ತದೆ: ರಾಜ್ಯ ಸರ್ಕಾರ
‘ಶಕ್ತಿ’ ಯೋಜನೆ ಜಾರಿಯಾದ ನಂತರ ಹಣ ಪಾವತಿಸುವ ಪ್ರಯಾಣಿಕರು ಸೇರಿದಂತೆ ಪ್ರಯಾಣಿಕರ ಸಂಖ್ಯೆ ಹೆಚ್ಚಿರುವುದರಿಂದ ರಾಜ್ಯ ರಸ್ತೆ ಸಾರಿಗೆ ನಿಗಮಗಳು ಸ್ವಾವಲಂಬಿಯಾಗುತ್ತಿವೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಬುಧವಾರ ಹೇಳಿದರು.

ಬೆಂಗಳೂರು: ‘ಶಕ್ತಿ’ ಯೋಜನೆ ಜಾರಿಯಾದ ನಂತರ ಹಣ ಪಾವತಿಸುವ ಪ್ರಯಾಣಿಕರು ಸೇರಿದಂತೆ ಪ್ರಯಾಣಿಕರ ಸಂಖ್ಯೆ ಹೆಚ್ಚಿರುವುದರಿಂದ ರಾಜ್ಯ ರಸ್ತೆ ಸಾರಿಗೆ ನಿಗಮಗಳು ಸ್ವಾವಲಂಬಿಯಾಗುತ್ತಿವೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಬುಧವಾರ ಹೇಳಿದರು.
ವಿಧಾನ ಪರಿಷತ್ತಿನಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಸಚಿವರು, ರಸ್ತೆಗಳಲ್ಲಿನ ದಟ್ಟಣೆಯನ್ನು ಹೋಗಲಾಡಿಸಲು ಸಾರ್ವಜನಿಕ ಸಾರಿಗೆಯನ್ನು ಸುಧಾರಿಸುವುದು ಏಕೈಕ ಪರಿಹಾರವಾಗಿದೆ, ಆದರೆ ಅದನ್ನು ನಡೆಸುತ್ತಿರುವ ಸಂಸ್ಥೆಗಳು ದೇಶಾದ್ಯಂತ ನಷ್ಟದಲ್ಲಿ ಸಿಲುಕಿವೆ. ‘ಶಕ್ತಿ’ ಯೋಜನೆ ಜಾರಿಯಾದ ನಂತರ ರಾಜ್ಯ ಸಾರಿಗೆ ಸಂಸ್ಥೆಗಳು ನಷ್ಟದಿಂದ ಹೊರಬಂದು ಲಾಭ ಕಾಣುವ ಹಂತ ತಲುಪಿವೆ ಎಂದು ಹೇಳಿದರು.
“ಸರ್ಕಾರಿ ಬಸ್‌ಗಳಲ್ಲಿ ಪ್ರಯಾಣಿಸುವವರ ಸಂಖ್ಯೆ ಹೆಚ್ಚಾದಂತೆ ಆದಾಯವು 20-40 ಪ್ರತಿಶತದಷ್ಟು ಹೆಚ್ಚಾಗಿದೆ. ಮಹಿಳಾ ಪ್ರಯಾಣಿಕರ ಸಂಖ್ಯೆ ಮಾತ್ರವಲ್ಲದೆ ಹಣ ಪಾವತಿಸುವ ಪ್ರಯಾಣಿಕರ ಸಂಖ್ಯೆಯೂ ಹೆಚ್ಚಾಗಿದೆ. ಇದು ನಿಗಮಗಳು ಶೀಘ್ರದಲ್ಲೇ ಸ್ವಾವಲಂಬಿಯಾಗಲು ಸಹಾಯ ಮಾಡುತ್ತದೆ ಎಂದು ತಿಳಿಸಿದರು.
ಶಕ್ತಿ ಯೋಜನೆ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವುದರ ಜೊತೆಗೆ ಯೋಜನೆಯು ಉದ್ಯೋಗಗಳ ಸೃಷ್ಟಿ ಮತ್ತು ಆರ್ಥಿಕ ಬೆಳವಣಿಗೆಗೆ ಸಹಾಯ ಮಾಡಿದೆ. “ನಷ್ಟದಿಂದ ಹೊರಬರಲು ನಾವು ಪರೋಕ್ಷವಾಗಿ ಪರಿಹಾರವನ್ನು ಕಂಡುಕೊಂಡಿದ್ದೇವೆಂದು ಹೇಳಿದರು. (ಕಪ್ರಡಾ)
