ಲೋಕಲ್‌ ನ್ಯೂಸ್…‌ ಪತ್ರಕರ್ತರ ಸಂಘದಿಂದ ಸನ್ಮಾನ

ಸಿದ್ದಾಪುರ
ಪತ್ರಿಕಾರಂಗ ಇಂದು ಅತ್ಯಂತ ಮಹತ್ವವಾಗಿದ್ದು ಇದು ದೃಶ್ಯ ಮಾಧ್ಯಮಗಿಂತ ಹೆಚ್ಚು ಪ್ರಭಾವಶಾಲಿ ಆಗಿದೆ. ಪತ್ರಿಕೆ ಸಮಾಜದ ಹಾಗೂ ಸರ್ಕಾರದ ಕಣ್ಣುಗಳನ್ನು ತೆರೆಸುವಂತಹುದಾಗಿದೆ ಎಂದು ಸರಕುಳಿ ಜಗದಂಬಾ ಪ್ರೌಢಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಮಂಜುನಾಥ ಜಿ.ಹೆಗಡೆ ತ್ಯಾರಗಲ್ ಹೇಳಿದರು.
ತಾಲೂಕಿನ ಸರಕುಳಿ ಜಗದಂಬಾ ಪ್ರೌಢಶಾಲೆಯಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ, ಸನ್ಮಾನ ಹಾಗೂ ಗುರುಮನೆ ದತ್ತಿ ನಿಧಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಇಂದು ಪತ್ರಿಕೆ ಜನರಿಗೆ ಸುಲಭವಾಗಿ ಸಿಗುತ್ತಿದ್ದರೂ ಓದುವವರ ಸಂಖ್ಯೆ ಕಡಿಮೆ ಆಗುತ್ತಿದೆ ಎಂದು ವಿಷಾದಿಸಿದರು.


ಸರಕುಳಿ ಸಹಿಪ್ರಾ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಪ್ರಶಾಂತ ಹೆಗಡೆ ಮೇಲ್ಗಿರಿ ತಾಲೂಕು ಪತ್ರಕರ್ತರ ಮಾಹಿತಿ ಬಿಡುಗಡೆಮಾಡಿದರು.
ಬಿಇಒ ಜಿ.ಐ.ನಾಯ್ಕ ಮಾತನಾಡಿ ಪತ್ರಿಕೆಯ ಶಕ್ತಿ ಅಗಾಧವಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪತ್ರಿಕೆ ಸಮಾಜ ಹಾಗೂ ಸರ್ಕಾರವನ್ನು ಎಚ್ಚರಿಸುವ ಕನ್ನಡಿಯಾಗಿ ಕಾರ್ಯನಿರ್ವಹಿಸುತ್ತಿದೆ. ಪತ್ರಕರ್ತರು ಇಂದು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.

ಉ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜಿ.ಸುಬ್ರಾಯ ಭಟ್ಟ ಬಕ್ಕಳ ಪತ್ರಕರ್ತರ ಸಂಘಟನೆ ಕುರಿತು ಮಾತನಾಡಿ ಸರ್ಕಾರ ಪತ್ರಕರ್ತರ ಮಕ್ಕಳಿಗೆ ಉಚಿತ ಶಿಕ್ಷಣ ಹಾಗೂ ಆರೋಗ್ಯ ಸೇವೆಯನ್ನು ನೀಡಬೇಕೆಂದು ಆಗ್ರಹಿಸಿದರು.
ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಬಸವರಾಜ್ ಪಾಟೀಲ್ ಮುಂಡಗೋಡ ಮಾತನಾಡಿದರು.
ಅಧ್ಯಕ್ಷತೆಯನ್ನು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗಂಗಾಧರ ಕೊಳಗಿವಹಿಸಿದ್ದರು.
ಪ್ರೌಢಶಾಲೆಯ ಮುಖ್ಯಾಧ್ಯಾಪಕ ಕೃಷ್ಣಮೂರ್ತಿ ಹೆಗಡೆ, ಸಹಿಪ್ರಾ ಶಾಲೆಯ ಮುಖ್ಯಾಧ್ಯಾಪಕಿ ಕಲ್ಪನಾ ವೈದ್ಯ ಉಪಸ್ಥಿತರಿದ್ದರು.


ಸನ್ಮಾನ: ಹಿರಿಯ ಪತ್ರಕರ್ತರಾದ ನರೇಂದ್ರ ಹೆಗಡೆ ಹೊಂಡಗಾಶಿ ದಂಪತಿಯನ್ನು ತಾಲೂಕು ಕಾರ್ಯನಿರತ ಪತ್ರಕರ್ತ ಸಂಘದಿಂದ ಸನ್ಮಾನಿಸಲಾಯಿತು. ಹಿರಿಯ ಸಾಹಿತಿ ಶ್ರೀನಿವಾಸ ಶಾನಭಾಗ ಹಾರ್ಸಿಕಟ್ಟಾ ರಿಗೆ ಗುರುಮನೆ ದತ್ತಿನಿಧಿ ಪ್ರಶಸ್ತಿಯನ್ನು ಕೆಕ್ಕಾರ ನಾಗರಾಜ ಭಟ್ಟ ಪ್ರದಾನ ಮಾಡಿ ಗೌರವಿಸಿದರು. ನರೇಂದ್ರ ಹೆಗಡೆ ಹಾಗೂ ಶ್ರೀನಿವಾಸ ಶಾನಭಾಗ ಅನಿಸಿಕೆ ವ್ಯಕ್ತಪಡಿಸಿದರು.
ಅಂಕಿತಾ ಸಂಗಡಿಗರು ಹಾಗೂ ರೇಖಾ ಹೆಗಡೆ ಹೊಂಡಗಾಶಿ ಪ್ರಾರ್ಥನೆ ಹಾಡಿದರು. ಪತ್ರಕರ್ತರಾದ ಸುಜಯ ಭಟ್ಟ, ಶ್ರೀಧರ ಹೆಗಡೆ, ನಾಗರಾಜ ಭಟ್ಟ, ಶಿವಶಂಕರ ಕೋಲಶಿರ್ಸಿ, ರಮೇಶ ಹಾರ್ಸಿಮನೆ ಕಾರ್ಯಕ್ರಮ ನಿರ್ವಹಿಸಿದರು.

ನಿಧನ- ಕನ್ನ ರಾಮ ಗೊಂಡ
ಸಿದ್ದಾಪುರ: ತಾಲೂಕಿನ ಅವರಗುಪ್ಪದ ಕನ್ನ ರಾಮ ಗೊಂಡ (೭೫) ಇತ್ತೀಚೆಗೆ ನಿಧನಹೊಂದಿದರು.
ಅವರಿಗೆ ಪತ್ನಿ, ಪುತ್ರ ಹಾಗೂ ಮೂವರು ಪುತ್ರಿಯರಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *