ಮೋದಿ ವಿರೋಧಿ ಪ್ರತಿಪಕ್ಷಗಳ ಮೈತ್ರಿಕೂಟದ ಹೆಸರೇನು ಗೊತ್ತೆ?

ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ‘INDIA’ ಎಂದು ನಾಮಕರಣ: ಬೆಂಗಳೂರಿನಲ್ಲಿ ಮಲ್ಲಿಕಾರ್ಜುನ ಖರ್ಗೆ ಘೋಷಣೆ

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಶತಾಯಗತಾಯ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಒಂದಾಗಿರುವ ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ಇಂಡಿಯನ್​ ನ್ಯಾಷನಲ್ ಡೆವಲಪ್ ಮೆಂಟಲ್​​ ಇನ್​ಕ್ಲೂಸಿವ್​​​​ ಅಲೈನ್ಸ್(INDIA) ಎಂದು ನಾಮಕರಣ ಮಾಡಲಾಗಿದೆ.

opposition parties press meet

ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಶತಾಯಗತಾಯ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಒಂದಾಗಿರುವ ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ಇಂಡಿಯನ್​ ನ್ಯಾಷನಲ್ ಡೆವಲಪ್ ಮೆಂಟಲ್​​ ಇನ್​ಕ್ಲೂಸಿವ್​​​​ ಅಲೈನ್ಸ್(INDIA) ಎಂದು ನಾಮಕರಣ ಮಾಡಿರುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಘೋಷಿಸಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ ಪ್ರತಿಪಕ್ಷಗಳ ಸಭೆಯ ನಂತರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಭಾರತದ ಪ್ರಜಾಪ್ರಭುತ್ವ ಉಳಿವಿಗೆ ನಮ್ಮ ಹೋರಾಟ ನಡೆಯುತ್ತಿದೆ. ಒಂದೇ ಧ್ವನಿಯಲ್ಲಿ ನಾವು ಹೋರಾಟ ಮಾಡುತ್ತಿದ್ದೇವೆ ಎಂದರು,

26 ಪಕ್ಷಗಳ ನಾಯಕರು ಸಭೆಯಲ್ಲಿ ಭಾಗಿಯಾಗಿ ನಾವು ಈ ನಿರ್ಧಾರಕ್ಕೆ ಬಂದಿದ್ದೇವೆ. 11 ಜನರ ಸಮಿತಿ ರಚನೆ ಮಾಡಲು ಸಭೆಯಲ್ಲಿ ನಿರ್ಧಾರ ಕೈಗೊಂಡಿದ್ದೇವೆ. ಈ 11 ಜನರ ಹೆಸರು ಸದ್ಯದಲ್ಲೇ ಘೋಷಣೆ ಮಾಡುತ್ತೇವೆ. ಮಹಾರಾಷ್ಟ್ರ, ಮುಂಬೈನಲ್ಲಿ ಮತ್ತೆ ಸಭೆ ಸೇರಲಿದ್ದೇವೆ. ಕ್ಯಾಂಪೇನ್ ಮ್ಯಾನೇಜ್ಮೆಂಟ್​​ಗೆ ಕಾರ್ಯದರ್ಶಿ ನೇಮಕ ಮಾಡಲಾಗುವುದು. ದೆಹಲಿಯಲ್ಲಿ ಈ ಬಗ್ಗೆ ನಾವು ನಿರ್ಧಾರ ಕೈಗೊಳ್ಳಲಿದ್ದೇವೆ. ಮುಂಬೈನಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಖರ್ಗೆ ತಿಳಿಸಿದರು.

ಇದೇ ವೇಳೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮಲ್ಲಿಕಾರ್ಜುನ ಖರ್ಗೆ ಅವರು, ಬಿಜೆಪಿ ಸರ್ಕಾರ ಪ್ರಜಾಪ್ರಭುತ್ವವನ್ನು ನಾಶ ಮಾಡುತ್ತಿದೆ. ಸಂವಿಧಾನವನ್ನು ಕೂಡ ಹಾಳು ಮಾಡುತ್ತಿದೆ. ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು.

ಎನ್​ಡಿಎ ಸಭೆಯಲ್ಲಿ ಭಾಗವಹಿಸಿದ ಕೆಲವು ಪಕ್ಷಗಳ ಹೆಸರು ಚುಣಾವಣಾ ಆಯೋಗದ ಪಟ್ಟಿಯಲ್ಲೇ ಇಲ್ಲ. ಪ್ರಧಾನಿ ಮೋದಿ ನೇತೃತ್ವದಲ್ಲಿ ಸಭೆ ಮಾಡುತ್ತಿದ್ದಾರೆ. ಅವರ ಜೊತೆಗಿರೋ ಪಕ್ಷಗಳು ತುಕಡೇ ತುಕಡೇ ಗ್ಯಾಂಗ್. ವಿಪಕ್ಷಗಳ ಸಭೆ ಮಾಡೋದನ್ನ ನೋಡಿ ಮೋದಿಗೆ ಭಯವಾಗಿದೆ. ಹೀಗಾಗಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಸಭೆ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. (ಕಪ್ರಡಾ)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *