

ಸಿದ್ದಾಪುರ: ತಾಲ್ಲೂಕಿನ ಭುವನಗಿರಿಯ ಭುವನೇಶ್ವರಿ ದೇವಾಲಯದ ಪುಷ್ಕರಿಣಿಯು ಪುರಾತನ ಕಾಲದ ಕೆರೆಯಾಗಿದ್ದು ಮಳೆಗಾಲದಲ್ಲಿ ಚರಂಡಿಯ ನೀರು ಕೆರೆ ಸೇರಿ ಕಲುಷಿತಗೊಳ್ಳುತ್ತಿದ್ದರೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಆಡಳಿತ ಮಂಡಳಿಯ ಅಧ್ಯಕ್ಷ ಶ್ರೀಕಾಂತ ಹೆಗಡೆ ಗುಂಜಗೋಡು ಬೇಸರಿಸಿದರು.

ಅವರು ಬುಧವಾರ ತಹಶೀಲ್ದಾರರಿಗೆ ಮತ್ತು ಲೋಕೋಪಯೋಗಿ ಅಧಿಕಾರಿಗೆ ಈ ಕುರಿತು ಮನವಿ ನೀಡಿ ಮಾಹಿತಿ ನೀಡಿದರು. ಭುವನಗಿರಿ ಕೆರೆಯು ಬಿಳಗಿ ಅರಸರ ಕಾಲದಲ್ಲಿ ನಿರ್ಮಿಸಿದ್ದು ಪ್ರತಿದಿನ ಭುವನೇಶ್ವರಿ ದೇವಿಯ ಅಭಿಷೇಕಕ್ಕೆ ಈ ಕೆರೆಯ ನೀರನ್ನೇ ಬಳಸಲಾಗುತ್ತದೆ. ಮಳೆಗಾಲದಲ್ಲಿ ರಸ್ತೆಯ ಚರಂಡಿ ನೀರು ಸರಾಗವಾಗಿ ಹರಿದು ಹೋಗದ ಕಾರಣ ಚರಂಡಿ ನೀರು ಕೆರೆಯನ್ನು ಸೇರುತ್ತಿದ್ದು ನೀರು ಮಲಿನಗೊಳ್ಳುತ್ತಿದೆ. ಇದನ್ನು ಸರಿಪಡಿ ಸುವ ಕುರಿತು ಕಳೆದ 3-4 ವರ್ಷಗಳಿಂದಲೂ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಇದರಿಂದ ಭಕ್ತಾದಿಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗುತ್ತಿದ್ದು ಸಂಬಂಧಪಟ್ಟ ಅಧಿಕಾರಿಗಳು ಕೂಡಲೆ ಗಮನ ಹರಿಸಿ ಕೆರೆಯ ಸುಸ್ಥಿತಿ ಕಾಪಾಡಲು ಸಹಕರಿಸುವಂತೆ ಮನವಿ ನೀಡಲಾಗಿದೆ ಎಂದರು.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






