ಶಿವಮೊಗ್ಗ: ವಿದ್ಯುತ್ ಕಂಬಕ್ಕೆ ಖಾಸಗಿ ಬಸ್ ಡಿಕ್ಕಿ; 35 ವಿದ್ಯಾರ್ಥಿಗಳಿಗೆ ವಿದ್ಯುತ್ ಶಾಕ್, ಇಬ್ಬರ ಸ್ಥಿತಿ ಗಂಭೀರ
ಸಾಗರದ ಹೊಳೆಬಾಗಿಲು ಸಮೀಪದ ಗೆಣಸಿನಕುಣಿ ಗ್ರಾಮದ ಸಮೀಪ ಖಾಸಗಿ ಬಸ್ ಒಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ 35ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕರೆಂಟ್ ಶಾಕ್ ಹೊಡೆದಿದ್ದು ಇದರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ.
ಶಿವಮೊಗ್ಗ: ಸಾಗರದ ಹೊಳೆಬಾಗಿಲು ಸಮೀಪದ ಗೆಣಸಿನಕುಣಿ ಗ್ರಾಮದ ಸಮೀಪ ಖಾಸಗಿ ಬಸ್ ಒಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ 35ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕರೆಂಟ್ ಶಾಕ್ ಹೊಡೆದಿದ್ದು ಇದರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ.
ಹೊಳೆಬಾಗಿಲಿನಿಂದ ಸಾಗರಕ್ಕೆ 45 ಮಂದಿ ಪ್ರಯಾಣಿಕರನ್ನು ಹೊತ್ತು ಬರುತ್ತಿದ್ದ ಎಸ್ ಬಿಕೆ ಸಂಸ್ಥೆಗೆ ಸೇರಿದ ಖಾಸಗಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ 35 ವಿದ್ಯಾರ್ಥಿಗಳು ಶಾಕ್‌ಗೆ ಒಳಗಾಗಿದ್ದಾರೆ. ಅಲ್ಲದೆ ಕೆಲವರು ಬಸ್ಸಿನೊಳಗೇ ಉರುಳಿ ಬಿದ್ದರು.
Ads by
ಗಾಯಾಳು ವಿದ್ಯಾರ್ಥಿಗಳಿಗೆ ಸಾಗರ ಉಪವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. (kpc)