BEd ಕಡ್ಡಾಯವಲ್ಲ, ಸರ್ಕಾರದ ಆದೇಶ ವಜಾ!

BEd ಕಡ್ಡಾಯವಲ್ಲ, ಸರ್ಕಾರದ ಆದೇಶ ವಜಾ: ‘ಪ್ರಾಥಮಿಕ ಶಿಕ್ಷಣಕ್ಕೆ ಬಿಎಡ್ ಅರ್ಹತೆ ಅನಿಯಂತ್ರಿತ, ಅಸಮಂಜಸ’ ಎಂದ ಸುಪ್ರೀಂ ಕೋರ್ಟ್

ಪ್ರಾಥಮಿಕ ಶಾಲೆಯ ಶಿಕ್ಷಕರಾಗಲು ಬಿ.ಇಡಿ. ಅರ್ಹತೆ ಹೊಂದಿರಬೇಕು  ಎಂದು ಕೇಂದ್ರ ಸರ್ಕಾರ ಕೈಗೊಂಡ ನಿರ್ಧಾರವು ‘ಸ್ವೇಚ್ಛೆ’ಯಿಂದ ಕೂಡಿದೆ ಮತ್ತು ‘ಅತಾರ್ಕಿಕ’ವಾಗಿದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದ್ದು ಮಾತ್ರವಲ್ಲದೇ BEd ಕಡ್ಡಾಯವಲ್ಲ ಎಂದು ಹೇಳಿ ಸುಪ್ರೀಂ ಕೋರ್ಟ್ ಸರ್ಕಾರದ ಆದೇಶವನ್ನು ವಜಾಗೊಳಿಸಿದೆ.

ನವದೆಹಲಿ: ಪ್ರಾಥಮಿಕ ಶಾಲೆಯ ಶಿಕ್ಷಕರಾಗಲು ಬಿ.ಇಡಿ. ಅರ್ಹತೆ ಹೊಂದಿರಬೇಕು  ಎಂದು ಕೇಂದ್ರ ಸರ್ಕಾರ ಕೈಗೊಂಡ ನಿರ್ಧಾರವು ‘ಸ್ವೇಚ್ಛೆ’ಯಿಂದ ಕೂಡಿದೆ ಮತ್ತು ‘ಅತಾರ್ಕಿಕ’ವಾಗಿದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದ್ದು ಮಾತ್ರವಲ್ಲದೇ BEd ಕಡ್ಡಾಯವಲ್ಲ ಎಂದು ಹೇಳಿ ಸುಪ್ರೀಂ ಕೋರ್ಟ್ ಸರ್ಕಾರದ ಆದೇಶವನ್ನು ವಜಾಗೊಳಿಸಿದೆ.

ಮಕ್ಕಳಿಗೆ ಉಚಿತ, ಕಡ್ಡಾಯ ಮತ್ತು ಗುಣಮಟ್ಟದ ಶಿಕ್ಷಣ ನೀಡುವುದಕ್ಕಾಗಿ ರೂಪಿಸಲಾದ ಶಿಕ್ಷಣ ಹಕ್ಕು ಕಾಯ್ದೆಗೂ ಈ ನಿರ್ಧಾರಕ್ಕೂ ಸಂಬಂಧ ಇಲ್ಲ. ಪ್ರಾಥಮಿಕ ಶಾಲಾ ಶಿಕ್ಷಕರಾಗಲು ಬಿ.ಇಡಿ. ಅನ್ನು ಅರ್ಹತೆಯಾಗಿ ನಿಗದಿ ಮಾಡಬೇಕು ಎಂದು ಎನ್‌ಸಿಟಿಇ 2018ರ ಜೂನ್‌ 28ರಂದು ಹೊರಡಿಸಿದ್ದ ಅಧಿಸೂಚನೆಯನ್ನು ಸುಪ್ರೀಂ ಕೋರ್ಟ್‌ ರದ್ದು ಮಾಡಿದೆ. 

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್‌ ಮತ್ತು ಸುಧಾಂಶು ಧುಲಿಯಾ ಅವರಿದ್ದ ಪೀಠವು, ‘ಪ್ರಾಥಮಿಕ ಹಂತದ ತರಗತಿಗಳಲ್ಲಿ ಕಲಿಸಲು ಬಿ.ಇಡಿ. ಅರ್ಹತೆಯ ಅಗತ್ಯ ಇಲ್ಲ. ಈ ತರಗತಿಗಳಲ್ಲಿ ಕಲಿಸಲು ಭಿನ್ನವಾದ ಅರ್ಹತೆ ಅಗತ್ಯ ಇದೆ. ಪ್ರಾಥಮಿಕ ತರಗತಿಗಳಿಗೆ ಬೋಧಿಸಲು ಬಿ.ಇಡಿ. ವಿದ್ಯಾರ್ಹತೆ ಇರುವವರು ಆಯ್ಕೆ ಆಗಿದ್ದರೆ ನೇಮಕವಾಗಿ ಎರಡು ವರ್ಷಗಳೊಳಗೆ ಬೋಧನೆಗೆ ಸಂಬಂಧಿಸಿದ ಕೋರ್ಸ್‌ ಒಂದನ್ನು ಪೂರ್ಣಗೊಳಿಸಬೇಕು ಎಂದು ಬೋಧನಾ ಶಿಕ್ಷಣ ರಾಷ್ಟ್ರೀಯ ಪರಿಷತ್‌ (ಎನ್‌ಸಿಟಿಇ) ಹೇಳಿರುವುದು ಇದನ್ನು ಪುಷ್ಟೀಕರಿಸುತ್ತದೆ’ ಎಂದು ಹೇಳಿದೆ. 

ಪ್ರಾಥಮಿಕ ಶಾಲೆಯ ಶಿಕ್ಷಕರಾಗಲು ಬಿ.ಇಡಿ. ಅನ್ನು ಅರ್ಹತೆಯಾಗಿ ನಿಗದಿ ಮಾಡುವ ಮೂಲಕ ಸರ್ಕಾರವು ಸಂವಿಧಾನ ಮತ್ತು ಕಾನೂನುಗಳನ್ನು ಉಲ್ಲಂಘಿಸಿದೆ. ಶಿಕ್ಷಕರಿಗೆ ಸಂಬಂಧಿಸಿದಂತೆ ಬೋಧನಾ ಕೌಶಲವು ಅತ್ಯಂತ ಮಹತ್ವದ್ದಾಗಿದೆ. ಬಿ.ಇಡಿ. ಅನ್ನು ಅರ್ಹತೆಯಾಗಿ ನಿಗದಿ ಮಾಡಲು ಸರ್ಕಾರ ನೀಡಿರುವ ಒಂದೇ ಒಂದು ಸಮರ್ಥನೆ ಏನೆಂದರೆ, ಇದು ‘ಉನ್ನತ ಅರ್ಹತೆ’ ಎಂಬುದಾಗಿದೆ. ನೀತಿಗೆ ಸಂಬಂಧಿಸಿದ ನಿರ್ಧಾರ  ಎಂದು ಪರಿಗಣಿಸಿದರೂ ಇದು ಸರಿಯಾದ ಕ್ರಮ ಅಲ್ಲ ಎಂದು ಕೋರ್ಟ್ ಹೇಳಿದೆ. 

ಅಂತೆಯೇ ಪ್ರಾಥಮಿಕ ಶಾಲೆಯಲ್ಲಿ ಬೋಧಿಸಲು ಪ್ರಾಥಮಿಕ ಶಿಕ್ಷಣ ಡಿಪ್ಲೊಮಾವೇ (ಡಿ.ಎಡ್‌.) ಅರ್ಹತೆಯೇ ಹೊರತು ಬಿ.ಇಡಿ. ಅಲ್ಲ ಎಂದು ಸುಪ್ರೀಂ ಕೋರ್ಟ್‌ ಹಲವು ಬಾರಿ ಹೇಳಿದ್ದಾಗಿಯೂ ಪೀಠ ತನ್ನ ಆದೇಶದಲ್ಲಿ ಉಲ್ಲೇಖಿಸಿದೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *