

ಸಿದ್ದಾಪುರ: ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಶುಕ್ರವಾರ ತಾಲೂಕಿನ ವಿವಿಧ ಶಾಲೆಗಳಿಗೆ ಭೇಟಿ ನೀಡಿ ಅಲ್ಲಿಯ ಸ್ಥಿತಿ-ಗತಿ ಆಲಿಸಿದರು.
ತಾಲೂಕಿನ ಕೋಡ್ಸರ, ಹಾಲ್ಕಣಿ, ಬಾಳೇಸರ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ ಶಿಕ್ಷಕರು ಹಾಗೂ ಮಕ್ಕಳೊಂದಿಗೆ ಸಮಾಲೋಚನೆ ನಡೆಸಿ ಸಮಸ್ಯೆಗಳ ಮಾಹಿತಿ ಪಡೆದುಕೊಂಡರು.
ಇದೇ ವೇಳೆ ಹಸರಗೋಡ ಗ್ರಾಮ ಪಂಚಾಯ್ತಿಗೆ ಭೇಟಿ ನೀಡಿ ದೂರು-ದುಮ್ಮಾನ ಕೇಳಿದರು. ಕರ್ಜಗಿಯ ಚಂಡಿಕಾ ದೇವಿ ದೇವಸ್ಥಾನಕ್ಕೆ ಆಗಮಿಸಿ ದೇವಿಯ ದರ್ಶನ ಪಡೆದರು. ಮಧ್ಯಾಹ್ನ ಸಿದ್ದಾಪುರದ ಶಾಸಕರ ಕಚೇರಿಗೆ ಭೇಟಿ ನೀಡಿ ಸಾರ್ವಜನಿಕರ ಅಹವಾಲು ಆಲಿಸಿದರು.
ಈ ವೇಳೆ ತಾಲೂಕಾ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಐ.ನಾಯ್ಕ, ತಾಲೂಕಾ ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ದೇವರಾಜ ಹಿತ್ತಲಕೊಪ್ಪ,
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ, ಪ್ರಮುಖರಾದ ವಿ.ಎನ್.ನಾಯ್ಕ ಮತ್ತಿತರರು ಉಪಸ್ಥಿತರಿದ್ದರು.

ಶಿರಸಿ-ಸಿದ್ದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಭೀಮಣ್ಣ ಟಿ ನಾಯ್ಕ ಸಿದ್ದಾಪುರದ ಹೊಸಗದ್ದೆ ಕ್ಲಸ್ಟರ್ ನ ಸ ಹಿ ಪ್ರಾ ಶಾಲೆ ಬಾಳೇಸರ ದಲ್ಲಿ 1 ರಿಂದ 10 ನೇ ತರಗತಿಯ ಶಾಲಾ ಮಕ್ಕಳಿಗೆ ವಾರಕ್ಕೆ ಎರಡು ಮೊಟ್ಟೆ -ಚಿಕ್ಕಿ ವಿತರಿಸುವ ಯೋಜನೆಗೆ ವಿದ್ಯುಕ್ತವಾಗಿ ಚಾಲನೆ ನೀಡಿದರು.

ಸಿದ್ದಾಪುರದ ಕ್ಷೇತ್ರ ಶಿಕ್ಷಣಾಧಿಕಾರಿ ಜಿ ಆಯ್ ನಾಯ್ಕ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಭೂಮೇಶ್ ಎ ಎಚ್, ಹಸರಗೋಡ ಗ್ರಾ ಪಂ ಅಧ್ಯಕ್ಷ ಪ್ರದೀಪ ಹೆಗಡೆ, ಉಪಾಧ್ಯಕ್ಷೆ ಶ್ರೀಲಕ್ಷ್ಮಿ ಹೆಗಡೆ,ಪಿ ಡಿ ಓ ವಿದ್ಯಾ ದೇಸಾಯಿ,ಶಿಕ್ಷಣ ಸಂಯೋಜಕ ಮಹೇಶ ಹೆಗಡೆ, ಸಿ ಆರ್ ಪಿ ಶ ಗಣೇಶ ಕೊಡಿಯಾ, ಮುಖ್ಯ ಶಿಕ್ಷಕರ ಆರ್ ಎಸ್ ನಾಯ್ಕ, ಸಹ ಶಿಕ್ಷಕರು,ಎಸ್ ಡಿ ಎಂ ಸಿ ಪದಾಧಿಕಾರಿಗಳು ಹಾಜರಿದ್ದರು.

