ಆಪರೇಷನ್ ಹಸ್ತ’ಕ್ಕೆ ಕಾಂಗ್ರೆಸ್ ಹೈಕಮಾಂಡ್ ಅಸ್ತು! ಕಾಂಗ್ರೆಸ್ ಸೇರಲು ಹಿಂಡು ಹಿಂಡಾಗಿ ನುಗ್ಗುತ್ತಿರುವ ಬಿಜೆಪಿ ನಾಯಕರು!

ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷ ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸುವ ಸಾಧ್ಯತೆಯಿದೆ. 2024 ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಆಪರೇಷನ್ ಹಸ್ತಕ್ಕೆ ಕಾಂಗ್ರೆಸ್ ಹೈಕಮಾಂಡ್ ಒಪ್ಪಿಗೆ ನೀಡಿದೆ. ಆಪರೇಷನ್ ಹಸ್ತ ಬಿಜೆಪಿ ಶಾಸಕರ ಬೆಂಬಲಿಗರು ಮತ್ತು ಎರಡನೇ ಹಂತದ ನಾಯಕರಿಂದ ಪ್ರಾರಂಭವಾಗಿದೆ ಎಂಬುದು ಸ್ಪಷ್ಟ ಸೂಚನೆಯಾಗಿದೆ.

Cong strikes at BJP MLAs' supporters ahead of 2024 LS polls

ಬೆಂಗಳೂರು: ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷ ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸುವ ಸಾಧ್ಯತೆಯಿದೆ.  2024 ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಆಪರೇಷನ್ ಹಸ್ತಕ್ಕೆ ಕಾಂಗ್ರೆಸ್ ಹೈಕಮಾಂಡ್ ಒಪ್ಪಿಗೆ ನೀಡಿದೆ. ಆಪರೇಷನ್ ಹಸ್ತ ಬಿಜೆಪಿ ಶಾಸಕರ ಬೆಂಬಲಿಗರು ಮತ್ತು ಎರಡನೇ ಹಂತದ ನಾಯಕರಿಂದ ಪ್ರಾರಂಭವಾಗಿದೆ ಎಂಬುದು ಸ್ಪಷ್ಟ ಸೂಚನೆಯಾಗಿದೆ.

ಕೆಪಿಸಿಸಿ ಕಚೇರಿಯಲ್ಲಿ ನೂತನವಾಗಿ ನೇಮಕಗೊಂಡ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸದಸ್ಯ ಹಾಗೂ ರಾಜ್ಯಸಭಾ ಸಂಸದ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆಪ್ತ ಸಯ್ಯದ್ ನಸೀರ್ ಹುಸೇನ್ ಅವರ ಸಮ್ಮುಖದಲ್ಲಿ ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಯಶವಂತಪುರ ಶಾಸಕ ಎಸ್ ಟಿ ಸೋಮಶೇಖರ್ ಭಾನುವಾರ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದರು, ಅದಾದ ನಂತರ  ಸೋಮವಾರ ಸೋಮಶೇಖರ್ ಬೆಂಬಲಿಗರು ಕಾಂಗ್ರೆಸ್ ಸೇರಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ತುಂಬು ಹೃದಯದಿಂದ ಸ್ವಾಗತಿಸಿದ್ದಾರೆ.  ಸೋಮಶೇಖರ್ ಅವರನ್ನು ಕಾಂಗ್ರೆಸ್ ಕರೆತರುವ ಜವಾಬ್ದಾರಿಯನ್ನು ಡಿಕೆಶಿವಕುಮಾರ್ ನೆಲಮಂಗಲ ಶಾಸಕ ಶ್ರೀನಿವಾಸ್ ಅವರಿಗೆ ವಹಿಸಿದ್ದಾರೆ ಎನ್ನಲಾಗಿದೆ.

ಈಗಾಗಲೇ ಕೆಆರ್ ಪುರಂ ಶಾಸಕ ಬೈರತಿ ಬಸವರಾಜ್  ಬೆಂಬಲಿಗರು  ಮತ್ತು ಮಾಜಿ ಕಾರ್ಪೊರೇಟರ್‌ಗಳು ಕಾಂಗ್ರೆಸ್ ಸೇರಿದ್ದಾರೆ. ಕಳೆದ ವಾರ, ಶಾಸಕ ಮುನಿರತ್ನ ಅವರ ಬೆಂಬಲಿಗರು ಸೇರಿದಂತೆ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಕೆಲವು ಬಿಜೆಪಿ ಕಾರ್ಯಕರ್ತರು  ಕಾಂಗ್ರೆಸ್ ಸೇರಿದ್ದರು.  ಈ ನಡುವೆ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಸೋಮವಾರ ಶಿವಕುಮಾರ್ ಅವರನ್ನು ಭೇಟಿ ಮಾಡಿದರು. ಮೂಲಗಳ ಪ್ರಕಾರ ಅವರು ಕೂಡ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ.

ಬೆಂಗಳೂರು ಅಭಿವೃದ್ಧಿ ಸಚಿವರು ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ತಮ್ಮ ಅಧಿಕಾರ ಚಲಾಯಿಸುತ್ತಿದ್ದು, ತಮ್ಮ ವಿರೋಧಿಗಳನ್ನು ತಣ್ಣಗಾಗಿಸಲು ಎಲ್ಲಾ ರೀತಿಯ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರೊಬ್ಬರು ಅಭಿಪ್ರಾಯ ಪಟ್ಟಿದ್ದಾರೆ.  ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆದಿರುವ ಕಾಮಗಾರಿಗಳ ಕುರಿತು ತನಿಖೆ ನಡೆಸಲು ನಿಯೋಜಿಸಲಾಗಿರುವ ನಾಲ್ಕು ವಿಶೇಷ ತನಿಖಾ ತಂಡಗಳು (ಎಸ್‌ಐಟಿ) ಒಂದು ತಿಂಗಳಲ್ಲಿ ವರದಿ ನೀಡುವ ಸಾಧ್ಯತೆ ಇದ್ದು, ಬಿಜೆಪಿಯ ಕೆಲವು ಶಾಸಕರ ಬೆಂಬಲಿಗರಿಗೆ ಸಂಕಷ್ಟ ಎದುರಾಗುವ ಸಾಧ್ಯೆತೆಯಿದೆ, ಹೀಗಾಗಿ ಅವರೆಲ್ಲರು ಕಾಂಗ್ರೆಸ್ ಸೇರುತ್ತಿದ್ದಾರೆ ಎಂದು ಅಭಿಪ್ರಾಯ ಪಟ್ಟಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *