ಸಿದ್ದಾಪುರ ಬಳಿ ಕಾಡಾನೆ ದಾಳಿಗೆ ಮಹಿಳೆ ಬಲಿ

ಕಾಡಾನೆ ದಾಳಿಗೆ 65 ವರ್ಷದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಸಿದ್ದಾಪುರ ಸಮೀಪದ ಬಡಗ ಗ್ರಾಮದಲ್ಲಿ ಸೋಮವಾರ ನಡೆದಿದೆ.

Victim Ayeesha

ಮಡಿಕೇರಿ: ಕಾಡಾನೆ ದಾಳಿಗೆ 65 ವರ್ಷದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಸಿದ್ದಾಪುರ ಸಮೀಪದ ಬಡಗ ಗ್ರಾಮದಲ್ಲಿ ಸೋಮವಾರ ನಡೆದಿದೆ.

ಆಯಿಶಾ(63) ಮೃತ ಮೃತ ದುರ್ಧೈವಿ. ಮನೆ ಸಮೀಪ ವಾಕಿಂಗ್ ಮಾಡುತ್ತಿದ್ದ ಸಂದರ್ಭ ಆನೆ ದಾಳಿ ನಡೆಸಿದೆ. ಈ ವೇಳೆ ಆಯಿಶಾ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದು ಕಳೆದ ಒಂದು ವಾರದ ಅವಧಿಯಲ್ಲಿ ನಡೆದ ಎರಡನೇ ಘಟನೆಯಾಗಿದೆ. ಕೆಲವೇ ದಿನಗಳ ಹಿಂದೆ ದಕ್ಷಿಣ ಕೊಡಗಿನ ಅರೆಕಾಡು ಪ್ರದೇಶದಲ್ಲಿ ಕಟ್ಟೆಮಾಡು ದೇವಪ್ಪ (58) ಎಂಬವರು ಆನೆ ದಾಳಿಯಿಂದ ಮೃತಪಟ್ಟಿದ್ದರು.

ವಾರದ ಅಂತರದಲ್ಲಿ ಇಬ್ಬರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಅರಣ್ಯ ಇಲಾಖೆ ವಿರುದ್ಧ ಪ್ರತಿಭಟನೆ ನಡೆಸಿದರು. ಮಾನವ-ಪ್ರಾಣಿ ಸಂಘರ್ಷ ನಿವಾರಿಸುವಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆಂದು ಆರೋಪಿಸಿದರು. ಅಲ್ಲದೆ, ಪುಂಡಾನೆಯನ್ನು ಸೆರೆಹಿಡಿಯುವಂತೆ ಆಗ್ರಹಿಸಿದರು. ಇದೇ ವೇಳೆ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಸ್ಥಳಕ್ಕೆ ಆಗಮಿಸುವಂತೆ ಒತ್ತಾಯಿಸಿದರು.

ಬಳಿಕ ಸ್ಥಳಕ್ಕೆ ಮಡಿಕೇರಿ ಡಿಸಿಎಫ್ ಎ.ಟಿ.ಪೂವಯ್ಯ, ವಿರಾಜಪೇಟೆ ಡಿಸಿಎಫ್ ಶರಣಪ್ಪ ಮತ್ತಿತರರು ಭೇಟಿ ನೀಡಿದ್ದರು. ಈ ವೇಳೆ ಆನೆಯನ್ನು ಸೆರೆ ಹಿಡಿಯುವ ಭರವಸೆ ನೀಡಿದರು.

ಮಳೆಯ ನಂತರ ಕಂದಕಗಳು ಮತ್ತು ಸೋಲಾರ್ ಬೇಲಿಗೆಳು ನಿಷ್ಕ್ರಿಯಗೊಂಡಿವೆ. ಹಲವು ಪ್ರದೇಶಗಳಲ್ಲಿ ಗೇಟ್ ಗಳನ್ನು ಹಾಕಲಾಗಿದೆ. ರಾತ್ರಿಯ ಸಮಯದಲ್ಲಿ ಗೇಟ್ ಗಳನ್ನು ಹಾಕಲಾಗಿರುತ್ತದೆ. ಆದರೆ, ತಮ್ಮ ಪ್ರಯಾಣದ ಸಂದರ್ಭದಲ್ಲಿ ಗ್ರಾಮಸ್ಥರು ತೆರೆದಿಡುತ್ತಾರೆ. ಇದರಿಂದ ಘಟನೆ ಸಂಭವಿಸುತ್ತಿದೆ. ಆದರೂ ಆನೆಗಳ ಓಡಾಟ ನಿಯಂತ್ರಿಸಲು ಯೋಜನೆಗಳನ್ನು ಸಿದ್ಧಪಡಿಸಲಾಗಿದ್ದು, ಕಾಡಾನೆಗಳ ಪ್ರವೇಶ ತಡೆಯಲು ಕಾಂಕ್ರೀಟ್ ಗೋಡೆ ನಿರ್ಮಾಣ ಪ್ರಸ್ತಾವನೆಯನ್ನು ಸರ್ಕಾರದ ಮುಂದಿಡಲಾಗಿದೆ ಎಂದು ಡಿಸಿಎಫ್‌ ಶರಣಪ್ಪ ಅವರು ಹೇಳಿದರು.

ಪುಂಡಾನೆಗಳ ಗುರುತಿಸುವ ಪ್ರಕ್ರಿಯೆಗಳು ನಡೆಯುತ್ತಿವೆ. ಎರಡು ಆನೆಗಳ ಸೆರೆ ಹಿಡಿಯಲು ಅನುಮತಿ ಸಿಕ್ಕಿದೆ. ಕಳೆದ ವಾರ ಒಂದು ಆನೆಯನ್ನು ಸೆರೆ ಹಿಡಿಯಲಾಗಿದೆ. ಮತ್ತೊಂದು ಆನೆ ಪತ್ತೆ ಮಾಡಿ, ಶೀಘ್ರದಲ್ಲೇ ಸೆರೆ ಹಿಡಿಯಲಾಗುವುದು ಎಂದು ತಿಳಿಸಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *