

ಮೌಲ್ಯಾಧಾರಿತ ರಾಜಕಾರಣದ ಪ್ರತಿಪಾದಕ ಮಾಜಿ ಮುಖ್ಯಮಂತ್ರಿ ದೊಡ್ಮನೆ ರಾಮಕೃಷ್ಣ ಹೆಗಡೆಯವರ ಜನ್ಮದಿನವನ್ನು ಇಂದು ರಾಜ್ಯದಾದ್ಯಂತ ಆಚರಿಸಲಾಯಿತು.
ಹೆಗಡೆಯವರ ಹುಟ್ಟೂರು ಶಿರಸಿ -ಸಿದ್ಧಾಪುರಗಳಲ್ಲಿ ವಿಶಿಷ್ಟ ಕಾರ್ಯಕ್ರಮಗಳು ನಡೆದವು. ಹೆಗಡೆಯವರ ಸ್ಮರಣಾರ್ಥ ಗ್ರಾಮೀಣಾಭಿವೃದ್ಧಿ, ಮಹಿಳಾ ಸಬಲೀಕರಣದ ಚಿಂತನಾ ಕಾರ್ಯಕ್ರಮಗಳು ನಡೆದವು.

ಸಿದ್ಧಾಪುರದಲ್ಲಿ ರಾಮಕೃಷ್ಣ ಹೆಗಡೆ ಮತ್ತು ಮಹಿಳಾ ಸಬಲೀಕರಣ ವಿಷಯದ ಮೇಲೆ ರಾಷ್ಟ್ರೀಯ ಚಿಂತನೆ ಎನ್ನುವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ರಾಮಕೃಷ್ಣ ಹೆಗಡೆಯವರ ಬದ್ಧತೆ,ಜನಪರತೆಗಳನ್ನು ಸ್ಮರಿಸಲಾಯಿತು. ಇದೇ ಕಾರ್ಯಕ್ರಮದ ಅಂಗವಾಗಿ ಸಮಾಜದ ನಾನಾ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಹಲವು ಮಹಿಳೆಯರನ್ನು ಅಭಿನಂದಿಸಲಾಯಿತು.
ಶಿರಸಿ ಸಿದ್ಧಾಪುರದ ಈ ವಿಭಿನ್ನ ಕಾರ್ಯಕ್ರಮಗಳಲ್ಲಿ ರಾಮಕೃಷ್ಣ ಹೆಗಡೆಯವರ ಕುಟುಂಬದ ಸದಸ್ಯರೆಲ್ಲಾ ಪಾಲ್ಗೊಂಡಿರುವುದು ವಿಶೇಶವೆನಿಸಿತು.ನಾನಾ ಸ್ಥರದ ನಾಯಕರು ರಾಮಕೃಷ್ಣ ಹೆಗಡೆಯವರ ಕೊಡುಗೆಗಳನ್ನು ನೆನಪಿಸಿದರು. ರಾಮಕೃಷ್ಣ ಹೆಗಡೆಯವರ ೯೮ ನೇ ಜನ್ಮದಿನದ ಅಂಗವಾಗಿ ಶಿರಸಿ-ಸಿದ್ಧಾಪುರಗಳಲ್ಲಿ ರಾಮಕೃಷ್ಣ ಹೆಗಡೆ ಚಿರಂತನ ಈ ಕಾರ್ಯಕ್ರಮಗಳನ್ನು ಆಯೋಜಿಸಿತ್ತು.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
