ಧರ್ಮಸ್ಥಳ ಹೆಗ್ಗಡೆ ವಿರುದ್ಧ ಬಿ.ಜೆ.ಪಿ. ಪ್ರತಿಭಟನೆ!

ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣ: ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ವಿರುದ್ಧ ಬಿಜೆಪಿ ಪ್ರತಿಭಟನೆ

ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಯಾಗಿರುವ ಸಂತೋಷ್ ರಾವ್ ಅವರನ್ನು ಖುಲಾಸೆಗೊಳಿಸಿರುವ ಕುರಿತು ರಾಜ್ಯ ಬಿಜೆಪಿಯಲ್ಲೇ ಭಿನ್ನಾಭಿಪ್ರಾಯಗಳು ವ್ಯಕ್ತವಾಗಿವೆ.

File photo

ಬೆಂಗಳೂರು: ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಯಾಗಿರುವ ಸಂತೋಷ್ ರಾವ್ ಅವರನ್ನು ಖುಲಾಸೆಗೊಳಿಸಿರುವ ಕುರಿತು ರಾಜ್ಯ ಬಿಜೆಪಿಯಲ್ಲೇ ಭಿನ್ನಾಭಿಪ್ರಾಯಗಳು ವ್ಯಕ್ತವಾಗಿವೆ.

ಸಂತೋಷ್ ರಾವ್ ಅವರನ್ನು ಖುಲಾಸೆಗೊಳಿಸಿರುವುದರ ವಿರುದ್ಧ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ, ಧರ್ಮಸ್ಥಳದ ಧರ್ಮಾಧಿಕಾರಿಯಾಗಿರುವ ರಾಜ್ಯಸಭಾ ಸದಸ್ಯ ವೀರೇಂದ್ರ ಹೆಗಡೆ ವಿರುದ್ಧವೂ ಪಕ್ಷದಲ್ಲಿ ಹಲವು ಟೀಕೆಗಳು ವ್ಯಕ್ತವಾಗುತ್ತಿವೆ.

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಸಂತೋಷ್ ರಾವ್ ಖುಲಾಸೆಗೊಳಿಸಿರುವುದರ ವಿರುದ್ಧ ಬೃಹತ್ ಪ್ರತಿಭಟನೆಗಳು ನಡೆಯುತ್ತಿವೆ. ಅಲ್ಲದೆ, ವೀರೇಂದ್ರ ಹೆಗಡೆ ಕುಟುಂಬದ ವಿರುದ್ಧ ಆಕ್ರೋಶಗಳು ವ್ಯಕ್ತವಾಗುತ್ತಿವೆ.

ರಾಜಕೀಯ ವಿಶ್ಲೇಷಕ ಬಿಎಸ್ ಮೂರ್ತಿ ಅವರು ಮಾತನಾಡಿ, ಚುನಾವಣೆ ಸಮಯದಲ್ಲಿ ಸಣ್ಣ ಪಟ್ಟಣಗಳು ​​ಮತ್ತು ಸ್ಥಳಗಳಲ್ಲಿ ಇಷ್ಟು ದೊಡ್ಡ ಜನಸಂದಣಿಯನ್ನು ಎಂದೂ ನೋಡಿರಿಲಿಲ್ಲ. ಧರ್ಮಸ್ಥಳದಲ್ಲಿ ದೊಡ್ಡ ಸಂಖ್ಯೆಯಲ್ಲಿ ಜನರು ಪ್ರತಿಭಟನೆಗೆ ಸೇರುತ್ತಿದ್ದಾರೆ. ಕೆಲವು ಪ್ರತಿಭಟನೆಗಳಲ್ಲಿ 15,000-20,000 ಕ್ಕಿಂತ ಹೆಚ್ಚಿನ ಜನರು ಸೇರುತ್ತಿದ್ದಾರೆ. ಬಿಜೆಪಿ ನಾಯಕರೊಬ್ಬರ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವುದು ಆಶ್ಚರ್ಯವನ್ನುಂಟು ಮಾಡುತ್ತಿದೆ ಎಂದು ಹೇಳಿದ್ದಾರೆ.

ಪ್ರಕರಣ ಸಂಬಂಧ ಪೊಲೀಸರ ತನಿಖೆಯ ಕಾರ್ಯವೈಖರಿ ವಿರುದ್ಧ ಕೆಲವು ಪ್ರತಿಭಟನೆ ನಡೆಸುತ್ತಿದ್ದರೆ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಪ್ರಮುಖ ತಾಲೂಕುಗಳಲ್ಲಿ ಈ ಪ್ರತಿಭಟನೆಗಳಿಗೆ ಜನರನ್ನು ಸಜ್ಜುಗೊಳಿಸುವಲ್ಲಿ ಇಡೀ ಸಂಘ ಪರಿವಾರದ ಜಾಲ ಸಕ್ರಿಯವಾಗಿದೆ ಎಂದು ಮೂಲಗಳು ತಿಳಿಸಿವೆ.

ಮಹೇಶ್ ಶೆಟ್ಟಿ ತಿಮ್ಮರೋಡಿ ನೇತೃತ್ವದಲ್ಲಿ ನಿನ್ನೆ ಕೂಡ ಪ್ರತಿಭಟನೆ ನಡೆದವು. ಹಂತಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು. ಈ ನಡುವೆ ಬಿಜೆಪಿಯ ಹಲವು ನಾಯಕರು ಮರು ತನಿಖೆಗೆ ಒತ್ತಾಯಿಸುತ್ತಿದ್ದಾರೆ. ಈ ಪ್ರತಿಭಟನೆ ಶನಿವಾರ ಮುಂಬೈ ತಲುಪಿದ್ದು, ಉಡುಪಿ ಮತ್ತು ದಕ್ಷಿಣ ಕನ್ನಡ ಮೂಲದ ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು.

ಈ ನಡುವೆ ಧರ್ಮಾಧಿಕಾರಿ ವೀರೇಂದ್ರ ಹಗಡೆ ಅವರ ಕೆಲ ಬೆಂಬಲಿಗರು, ಇದು ಧರ್ಮಾಧಿಕಾರಿಗಳನ್ನು ದೂಷಿಸಲು ರೂಪಿಸಲಾಗಿರುವ ತಂತ್ರವಾಗಿದೆ ಎಂದು ಹೇಳಿದ್ದಾರೆ.

ಇತ್ತೀಚೆಗಷ್ಟೇ ಹೇಳಿಕೆ ನೀಡಿದ್ದ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು, ಪ್ರಕರಣದ ಮರುತನಿಖೆ ಇಲ್ಲ ಎಂದು ಸ್ಪಷ್ಟಪಡಿಸಿದ್ದರು. ಆದರೆ, ಪ್ರಕರಣದ ಮರು ತನಿಖೆ ನಡೆಸುವಂತೆ ಕೇಂದ್ರಕ್ಕೆ ಪತ್ರ ಬರೆದಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *