ಭಾರತದ ರಾಜಕೀಯ ಪಕ್ಷಗಳಲ್ಲಿ ಅತಿ ಶ್ರೀಮಂತ ಪಕ್ಷ ಯಾವುದು? ಅದರ ಒಟ್ಟೂ ಸಂಪತ್ತು ಎಷ್ಟು ಗೊತ್ತೆ?

ಬಿಜೆಪಿ ಸಂಪತ್ತು 6,046 ಕೋಟಿ ರೂ., ಕಾಂಗ್ರೆಸ್ 805 ಕೋಟಿ ರೂ. ಆಸ್ತಿ ಹೊಂದಿದೆ

ದೇಶದ ಎಂಟು ರಾಷ್ಟ್ರೀಯ ಪಕ್ಷಗಳು 2021-22ರಲ್ಲಿ ಒಟ್ಟು 8,829.16 ಕೋಟಿ ರೂ. ಆಸ್ತಿ ಘೋಷಿಸಿಕೊಂಡಿವೆ. ಈ ಪೈಕಿ ಆಡಳಿತರೂಢ ಬಿಜೆಪಿ ಅತ್ಯಂತ ಶ್ರೀಮಂತ ಪಕ್ಷವಾಗಿದ್ದು, 6,046 ಕೋಟಿ ರೂಪಾಯಿ ಆಸ್ತಿ ಘೋಷಿಸಿಕೊಂಡಿದೆ.

Congress_BJP_Casual_Images1

ನವದೆಹಲಿ: ದೇಶದ ಎಂಟು ರಾಷ್ಟ್ರೀಯ ಪಕ್ಷಗಳು 2021-22ರಲ್ಲಿ ಒಟ್ಟು 8,829.16 ಕೋಟಿ ರೂ. ಆಸ್ತಿ ಘೋಷಿಸಿಕೊಂಡಿವೆ. ಈ ಪೈಕಿ ಆಡಳಿತರೂಢ ಬಿಜೆಪಿ ಅತ್ಯಂತ ಶ್ರೀಮಂತ ಪಕ್ಷವಾಗಿದ್ದು, 6,046 ಕೋಟಿ ರೂಪಾಯಿ ಆಸ್ತಿ ಘೋಷಿಸಿಕೊಂಡಿದೆ.

2020-21ರಲ್ಲಿ ಈ ಎಂಟು ರಾಷ್ಟ್ರೀಯ ಪಕ್ಷಗಳ ಒಟ್ಟು ಆಸ್ತಿ 7,297.62 ಕೋಟಿ ರೂ.ಗಳಷ್ಟಿತ್ತು ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್(ಎಡಿಆರ್) ವರದಿ ಮಾಡಿದೆ.

Ads by

ಎಂಟು ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್, ಎನ್‌ಸಿಪಿ, ಬಿಎಸ್‌ಪಿ, ಸಿಪಿಐ, ಸಿಪಿಐ(ಎಂ), ಎಐಟಿಸಿ ಮತ್ತು ಎನ್‌ಪಿಇಪಿ ಘೋಷಿಸಿದ 2020-21 ಮತ್ತು 2021-22ನೇ ಸಾಲಿನ ಆಸ್ತಿ ಮತ್ತು ಹೊಣೆಗಾರಿಕೆಗಳನ್ನು ಎಡಿಆರ್ ವಿಶ್ಲೇಷಿಸಿದೆ. 

ಎಡಿಆರ್ ಪ್ರಕಾರ, 2020-21ರ ಆರ್ಥಿಕ ವರ್ಷದಲ್ಲಿ, ಬಿಜೆಪಿಯು 4,990 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಘೋಷಿಸಿಕೊಂಡಿತ್ತು. 2021-22 ರಲ್ಲಿ ಕೇಸರಿ ಪಕ್ಷದ ಆಸ್ತಿ 6,046.81 ಕೋಟಿಗೆ ಅಂದರೆ ಶೇ. 21.17 ರಷ್ಟು ಹೆಚ್ಚಾಗಿದೆ. 

2020-21ರಲ್ಲಿ ಕಾಂಗ್ರೆಸ್‌ ಘೋಷಿತ ಆಸ್ತಿ 691.11 ಕೋಟಿ ರೂ.ಗಳಷ್ಟಿತ್ತು. ಇದು 2021-22ರಲ್ಲಿ ಶೇ.16.58 ರಷ್ಟು ಏರಿಕೆಯಾಗಿ 805.68 ಕೋಟಿ ರೂ.ಗೆ ತಲುಪಿದೆ. ಬಿಎಸ್ಪಿ ತನ್ನ ವಾರ್ಷಿಕ ಘೋಷಿತ ಆಸ್ತಿಯಲ್ಲಿ ಇಳಿಕೆಯನ್ನು ತೋರಿಸಿರುವ ಏಕೈಕ ರಾಷ್ಟ್ರೀಯ ಪಕ್ಷವಾಗಿದೆ ಎಂದು ವರದಿ ಹೇಳಿದೆ.

2020-21 ಮತ್ತು 2021-22 ರ ನಡುವೆ BSP ಯ ಒಟ್ಟು ಆಸ್ತಿ 732.79 ಕೋಟಿಯಿಂದ 690.71 ಕೋಟಿಗೆ ಶೇಕಡಾ ಅಂದರೆ 5.74 ರಷ್ಟು ಕಡಿಮೆಯಾಗಿದೆ. ಟಿಎಂಸಿಯ ಒಟ್ಟು ಆಸ್ತಿ 2020-21ರಲ್ಲಿ ರೂ.182.001 ಕೋಟಿಯಿಂದ ರೂ.458.10 ಕೋಟಿ ರೂ.ಗೆ ಏರಿಕೆಯಾಗಿದ್ದು, ಶೇ.151.70ರಷ್ಟು ಹೆಚ್ಚಳವಾಗಿದೆ ಎಂದು ಎಡಿಆರ್ ತಿಳಿಸಿದೆ. (kpc)

https://samajamukhi.net/2023/08/29/ramakrishna-hegade-memory-sirsi-siddapur/

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *