ಸಾಂಬಾರ ಸೊಪ್ಪಿನ ಬಳಕೆ & ಉಪಯೋಗಗಳು

ಮನೆಯಲ್ಲಿಯೇ ಬೆಳೆಸಿ ದೊಡ್ಡಪತ್ರೆ: ದೂರ ಮಾಡಿ ಹಲವು ಆರೋಗ್ಯ ತಾಪತ್ರೆ; ಪುಟ್ಟ ಎಲೆಗಳ ದೊಡ್ಡ ಪ್ರಯೋಜನಗಳು!

ನಮ್ಮ ಮನೆಯ ಹಿತ್ತಲಲ್ಲೇ ಸಿಗುವ ಗಿಡಗಳು ಅನೇಕ ಖಾಯಿಲೆಗಳನ್ನು ಶಮನ ಮಾಡುವ ಶಕ್ತಿ ಹೊಂದಿರುತ್ತವೆ. ಹಿಂದಿನ ಕಾಲದ ಜನರು ಆಯುರ್ವೇದ ಔಷಧಗಳನ್ನು ಇಂತಹ ಗಿಡ ಗಂಟಿ, ಬೇರುಗಳಿಂದಲೇ ತಯಾರಿಸುತ್ತಿದ್ದರು. ಅಂತಹ ಒಂದು ಗಿಡಗಳಲ್ಲಿ ದೊಡ್ಡಪತ್ರೆಯೂ ಒಂದು.

doddapatre

ನಮ್ಮ ಮನೆಯ ಹಿತ್ತಲಲ್ಲೇ ಸಿಗುವ ಗಿಡಗಳು ಅನೇಕ ಖಾಯಿಲೆಗಳನ್ನು ಶಮನ ಮಾಡುವ ಶಕ್ತಿ ಹೊಂದಿರುತ್ತವೆ. ಹಿಂದಿನ ಕಾಲದ ಜನರು ಆಯುರ್ವೇದ ಔಷಧಗಳನ್ನು ಇಂತಹ ಗಿಡ ಗಂಟಿ, ಬೇರುಗಳಿಂದಲೇ ತಯಾರಿಸುತ್ತಿದ್ದರು. ಅಂತಹ ಒಂದು ಗಿಡಗಳಲ್ಲಿ ದೊಡ್ಡಪತ್ರೆಯೂ ಒಂದು.

ಮನೆಯ ಹಿತ್ತಲಿನಲ್ಲಿರುವ ಅದೆಷ್ಟೋ ಸಸ್ಯಗಳು ಸಾಮಾನ್ಯ ಕಾಯಿಲೆಗಳಿಗೆ ಪರಿಣಾಮಕಾರಿ ಪರಿಹಾರವನ್ನು ನೀಡುತ್ತದೆ. ಹೂವಿನ ಗಿಡಗಳ ನಡುವೆಯೇ ಬೆಳೆದು ಆರೋಗ್ಯ ವೃದ್ಧಿಸುವ ಕೆಲಸ ಮಾಡುವ ಪುಟ್ಟ ಪುಟ್ಟ ಗಿಡಗಳ ಆರೋಗ್ಯ ಗುಣ ಮಾತ್ರ ಬಹು ದೊಡ್ಡದು. ಅದರಲ್ಲಿ ದೊಡ್ಡ ಪತ್ರೆ ಗಿಡ ಕೂಡ ಒಂದು. ಸಾಮಾನ್ಯವಾಗಿ ಎಲ್ಲರ ಮನೆಯ ಹಿತ್ತಲಿನಲ್ಲಿ ಈ ದೊಡ್ಡ ಪತ್ರೆ ಗಿಡ ಕಂಡು ಬರುತ್ತದೆ. ಇದನ್ನು ಪುಟ್ಟ ಪಾಟ್‌ನಲ್ಲಿಯೂ ಇಟ್ಟು ಬೆಳೆಸಬಹುದಾಗಿದೆ. ಇದನ್ನು ಸಾಂಬಾರ ಸೊಪ್ಪು ಅಥವಾ ಅಜವನ ಗಿಡ ಎಂದೂ ಕರೆಯುತ್ತಾರೆ.

ದೊಡ್ಡಪತ್ರೆಯು ಸುಮಾರು ಮೂವತ್ತರಿಂದ ತೊಂಬತ್ತು ಸೆ.ಮೀ ಎತ್ತರದವರೆಗೆ ಬೆಳೆಯಬಲ್ಲದು, ಇದರ ಎಲೆಗಳು ದೊಡ್ಡ ಮತ್ತು ದಪ್ಪವಾಗಿದ್ದು ಕಡು ಸುವಾಸನೆಯನ್ನು ಹೊಂದಿರುತ್ತವೆ, ದೊಡ್ಡಪತ್ರೆಯ ರಂಬೆಗಳು ಮತ್ತು ಹೂಗಳು ಚಿಕ್ಕದಾಗಿದೆ.

ಆಫ್ರಿಕಾ ದೇಶಗಳಲ್ಲಿ ಇದನ್ನು ಪುದೀನಾದ ಬದಲಿಗೆ  ಖಾದ್ಯಗಳಲ್ಲಿ ಬಳಸುತ್ತಾರೆ. ದಕ್ಷಿಣಭಾರತದಲ್ಲಿ ಸಾಮಾನ್ಯವಾಗಿ ಇದನ್ನು ಜ್ವರ, ಶೀತ, ಕೆಮ್ಮುಗಳಿಗೆ ಮನೆಮದ್ದಾಗಿ ಬಳಸಲಾಗುತ್ತದೆ. ಗಾಯ ಅಥವಾ ಚೇಳು ಕಡಿತವಾದಾಗ ಪ್ರಥಮ ಚಿಕಿತ್ಸೆಯಾಗಿ ಇದರ ಎಲೆಗಳನ್ನು ಜಜ್ಜಿ ಬಳಸಲಾಗುತ್ತದೆ. ದಕ್ಷಿಣ ಕರ್ನಾಟಕದಲ್ಲಿ ದೊಡ್ಡಪತ್ರೆಯ ಚಟ್ನಿ, ತಂಬುಳಿ ಮಾಡಲಾಗುತ್ತದೆ. ಈಗ ಈ ದೊಡ್ಡ ಪತ್ರೆ ಸೊಪ್ಪು ಯಾವೆಲ್ಲಾ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ ಎನ್ನುವ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳಿ ಇಲ್ಲಿದೆ ನೋಡಿ.

ಸಾಮಾನ್ಯವಾಗಿ ಆಹಾರ ಸೇವನೆಯಲ್ಲಿ ಬದಲಾವಣೆ, ಹವಾಮಾನದಲ್ಲಿನ ವ್ಯತ್ಯಾಸದಿಂದ ಶ್ವಾಸಕೋಶದಲ್ಲಿ ಕಫ ಕಟ್ಟಿಕೊಳ್ಳುತ್ತದೆ. ಇದರಿಂದ ಶೀತವಾದರೆ ಎಷ್ಟು ದಿನವಾದರೂ ಕಡಿಮೆಯಾಗುವುದಿಲ್ಲ. ಇದಕ್ಕೆ ದೊಡ್ಡ ಪತ್ರೆ ಸೊಪ್ಪು ಉತ್ತಮ ಮನೆಮದ್ದಾಗಿದೆ. ದೊಡ್ಡಪತ್ರೆ ಎಲೆ, ತುಳಸಿ ಎಲೆ ಮತ್ತು ವೀಳ್ಯದೆಲೆಯನ್ನು ಅರೆದು ರಸ ತೆಗೆದು ಅದಕ್ಕೆ ಜೇನುತುಪ್ಪ ಬೆರೆಸಿ ಕುಡಿದರೆ ನೆಗಡಿ, ಕೆಮ್ಮು ದೂರವಾಗುತ್ತದೆ. ಚಿಕ್ಕ ಮಕ್ಕಳಿಗೂ ಕೂಡ ಈ ದೊಡ್ಡ ಪತ್ರೆ ಸೊಪ್ಪನ್ನು ಔಷಧವಾಗಿ ಬಳಸಬಹುದಾಗಿದೆ.

ದೊಡ್ಡ ಪತ್ರೆ ಸೊಪ್ಪನ್ನು ಕೊಯ್ದು ತಂದು ಬೆಂಕಿಯಲ್ಲಿ ಸುಟ್ಟು ಅದರ ರಸವನ್ನು ತೆಗದು ಅದಕ್ಕೆ ಅರ್ಧ ಚಮಚ ಬೆಲ್ಲ ಸೇರಿಸಿ ಕುಡಿದರೆ ಒಂದೆ ದಿನದಲ್ಲಿ ಶೀತ, ಕಟ್ಟಿದ ಮೂಗಿನ ಸಮಸ್ಯೆ ನಿವಾರಣೆಯಾಗುತ್ತದೆ.

ದೊಡ್ಡ ಪತ್ರೆ ಸೊಪ್ಪನ್ನು ಬೆಂಕಿಯ ಮೇಲೆ ಇಟ್ಟು ಬಾಡಿಸಿ ನಂತರ ಅದನ್ನು ನೆತ್ತಿಗೆ ಹಾಕಿದರೆ ದೇಹದಲ್ಲಿನ ತಣ್ಣನೆಯ ಅಂಶ ನಿವಾರಣೆಯಾಗಿ ಜ್ವರ, ಶೀತ ಕಡಿಮೆಯಾಗುತ್ತದೆ. ಮಕ್ಕಳಿಗೆ ಇದು ಬೆಸ್ಟ್‌ ಔಷಧವಾಗಿದೆ.

ಮಕ್ಕಳಿಗೆ ಜ್ವರ ಬಂದಾಗ ದೊಡ್ಡಪತ್ರೆ ಎಲೆ ಬಾಡಿಸಿ ನೆತ್ತಿಯ ಮೇಲೆ ಇಡುತ್ತಾರೆ. ಈ ಎಲೆಗಳ ಪೇಸ್ಟ್ ತಯಾರಿಸಿ ಅದನ್ನು ಚೇಳು ಕಚ್ಚಿದ ಗಾಯಕ್ಕೆ ಹಚ್ಚಿದರೆ ನೋವು ದೂರವಾಗುತ್ತದೆ. ಒಂದು ವಾರದವರೆಗೆ ದೊಡ್ಡ ಪತ್ರೆಯ ಎಲೆಗಳನ್ನು ತಿಂದರೆ ಅರಿಶಿಣ ಕಾಮಾಲೆ ವಾಸಿಯಾಗುತ್ತದೆ. ದೊಡ್ಡಪತ್ರೆಯನ್ನು ಜೀರಿಗೆ, ಎಳ್ಳಿನೊಂದಿಗೆ ಹುರಿದು ಕಾಯಿತುರಿ ಜೊತೆ ರುಬ್ಬಿ ಅದಕ್ಕೆ ಉಪ್ಪು, ಮಜ್ಜಿಗೆ ಹಾಕಿ ತಂಬುಳಿ ಮಾಡಿ ಕುಡಿದರೆ ಪಿತ್ತದ ಖಾಯಿಲೆಗಳು ಗುಣಮುಖವಾಗುವುದು.

ದೊಡ್ಡಪತ್ರೆ ಎಲೆಯನ್ನು ಉಪ್ಪಿನ ಸಹಿತ ತಿಂದರೆ ಜೀರ್ಣಶಕ್ತಿ ಅಧಿಕವಾಗುತ್ತದೆ. ದೊಡ್ಡ ಪತ್ರೆ ಎಲೆಯನ್ನು ಹುಳುಕಡ್ಡಿಯ ಭಾಗಕ್ಕೆ ತಿಕ್ಕುತ್ತಿದ್ದರೆ ಹುಳುಕಡ್ಡಿಯ ನಿವಾರಣೆಯಾಗುತ್ತದೆ. ದೊಡ್ಡ ಪತ್ರೆಯಲ್ಲಿ ವಿಟಮಿನ್‌ ಸಿ, ಫೈಬರ್‌ ಮತ್ತು ಕ್ಯಾಲ್ಸಿಯಂ ಗುಣ ಹೇರಳವಾಗಿದೆ. ಇದು ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಬಲಗೊಳಿಸಲು ಸಹಾಯ ಮಾಡುತ್ತದೆ.

ದೊಡ್ಡ ಪತ್ರೆ ಸೊಪ್ಪನ್ನು ಚಟ್ನಿ, ತಂಬುಳಿ ಅಥವಾ ಕರಕಲಿ ಮಾಡುವ ಮೂಲಕ ಸೇವಿಸಬಹುದಾಗಿದೆ. ಅಲ್ಲದೆ ದೋಸೆ ಮಾಡುವಾಗಲೂ ದೊಡ್ಡ ಪತ್ರೆ ಎಲೆಯನ್ನು ಬಳಸಬಹುದಾಗಿದೆ. ಇದು ಹೆಚ್ಚು ರುಚಿಯೊಂದಿಗೆ ಆರೋಗ್ಯವನ್ನೂ ವೃದ್ಧಿಸುತ್ತದೆ.

ದೊಡ್ಡ ಪತ್ರೆಯ ಗಿಡದ ಎಲೆಯನ್ನು ತಂದು ಬಾಡಿಸಿ ರಸ ತೆಗೆದು ಜೇನುತುಪ್ಪ ಸೇರಿಸಿ ಕುಡಿದರೆ ಮಲಬದ್ಧತೆ ಸಮಸ್ಯೆ ನಿವಾರಣೆಯಾಗುತ್ತದೆ. ಅರಿಸಿನ ಕಾಮಾಲೆ ಇದ್ದವರಿಗೂ ದೊಡ್ಡ ಪತ್ರೆ ಸೊಪ್ಪು ಉತ್ತಮ ಮನೆ ಮದ್ದಾಗಿದೆ. ಈ ಎಲೆಯನ್ನು ಆಹಾರ ರೂಪದಲ್ಲಿ ಅಂದರೆ ಚಟ್ನಿ, ತಂಬುಳಿ ಮಾಡಿ ಸೇವಿಸಿದರೆ ಕೆಲವೇ ದಿನಗಳಲ್ಲಿ ಕಾಯಿಲೆ ಚೇತರಿಕೆಯನ್ನು ಕಾಣುತ್ತದೆ. ಕಂಬಳಿ ಹುಳ, ಇಸುಬು ಇಂತಹ ಕೀಟಗಳು ಕಚ್ಚಿದ್ದರೆ ಸಹಿಸಲಾರದ ಉರಿ ಚರ್ಮಕ್ಕಾಗುತ್ತದೆ. ಇದನ್ನು ತಡೆಯಲು ಈ ದೊಡ್ಡ ಪತ್ರೆ ಸೊಪ್ಪು ಸಹಾಯಕವಾಗಿದೆ.

ದೊಡ್ಡ ಪತ್ರೆ ಎಲೆಯ ರಸಕ್ಕೆ ಬೆಲ್ಲ ಸೇರಿಸಿ ಕುಡಿದಾಗ ಬೆಲ್ಲ ಕೂಡ ದೇಹಕ್ಕೆ ಒಳ್ಳೆಯ ಪದಾರ್ಥವಾಗಿದೆ. ಇದು ದೇಹದಿಂದ ವಿಷಯುಕ್ತ ಪದಾರ್ಥವನ್ನು ಹೊರಹಾಕಲು ನೆರವಾಗುತ್ತದೆ. ಆದ್ದರಿಂದ ನಿಮ್ಮ ಮನೆಯ ಹಿತ್ತಲಿನಲ್ಲಿ ದೊಡ್ಡ ಪತ್ರೆ ಸೊಪ್ಪಿದ್ದರೆ ಜೋಪಾನ ಮಾಡಿ ಉಳಿಸಿಕೊಳ್ಳಿ. (ಕಪ್ರಡಾ)

ಚಿತ್ರದ ಪೋಸ್ಟರ್
ಸನಾತನ ಕಿಚ್ಚು
ಚಿತ್ರದ ಪೋಸ್ಟರ್
ಚಿತ್ರದ ಪೋಸ್ಟರ್
ಚಿತ್ರದ ಪೋಸ್ಟರ್
ನಿದ್ರೆಗೆ ಜಾರಿದ್ದ ವಿಕ್ರಮ್ ಗೆ ದಿಢೀರ್ ಟಾಸ್ಕ್

ಭಾರತದಲ್ಲಿ ಸೆಪ್ಟೆಂಬರ್ 9 ಮತ್ತು 10 ರಂದು ಜಿ20 ಶೃಂಗಸಭೆ ನಡೆಯಲಿದ್ದು ಇದಕ್ಕಾಗಿ ಜಗತ್ತಿನ ಪ್ರಮುಖ ರಾಷ್ಟ್ರಗಳ ಅಧ್ಯಕ್ಷರು, ಪ್ರಧಾನಿಗಳು ಭೇಟಿ ನೀಡಲಿದ್ದಾರೆ.
ಇಸ್ರೋ ಅಧ್ಯಕ್ಷ ಸೋಮನಾಥ್ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಚಂದ್ರನ ಮೇಲೆ ಮೊದಲ ಬಾರಿಗೆ ಇಳಿದ ರೋವರ್ ಚಿತ್ರವನ್ನು ಉಡುಗೋರೆಯಾಗಿ ನೀಡಿದರು.
77ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ಮಾಡಿದರು. ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಮಾಣಿಕ್ ಷಾ ಪರೇಡ್ ಮೈದಾನ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ಕಾಮಿಡಿ ಕಿಲಾಡಿಗಳು ಖ್ಯಾತಿಯ ಸಂಜು ಬಸಯ್ಯ ಅವರು ಪಲ್ಲವಿ ಬಳ್ಳಾರಿ ಅವರೊಂದಿಗೆ ಕಳೆದ ಜುಲೈ 30 ರಂದು ದಾಂಪತ್ಯ ಜೀವನಕ್ಕೆ ಕಾಲಿಟಿದ್ದು, ಇದೀಗ ಈ ಜೋಡಿಯ ಆರತಕ್ಷತೆಯು ಅದ್ದೂರಿಯಾಗಿ ನಡೆದಿದೆ.
ಪ್ರತಿ ವರ್ಷ, ಆಗಸ್ಟ್ 10 ರಂದು, ವಿಶ್ವ ಸಿಂಹ ದಿನವು ಈ ವಿಸ್ಮಯಕಾರಿ, ವೈಭವದ ಪ್ರಾಣಿ ಮೇಲೆ ಗಮನ ಸೆಳೆಯುತ್ತದೆ, ಅವುಗಳು ಈ ಜಗತ್ತಿನ ಪ್ರಾಣಿ-ಮನುಷ್ಯ ಸಂಕುಲದಲ್ಲಿ ಎಷ್ಟು ಮುಖ್ಯ ಎಂಬ ಮಹತ್ವವನ್ನು ಎತ್ತಿ ತೋರಿಸುತ್ತದೆ. ಅವುಗಳ ಅಸ್ತಿತ್ವವನ್ನು ರಕ್ಷಿಸಲು ಜಾಗತಿಕ ಸಮುದಾಯವನ್ನು ಒಟ್ಟುಗೂಡಿಸುತ್ತದೆ. 'ಕಾಡಿನ
ಮುಂಬೈನ ಸ್ಟಾರ್ ಬ್ಯಾಟರ್ ಸರ್ಫರಾಜ್ ಖಾನ್ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಹುಡುಗಿಯನ್ನು ವಿವಾಹವಾಗಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಕದಂಬಜಿಲ್ಲೆಗಾಗಿ ಸಹಿಸಂಗ್ರಹಣೆ, ಕಾನಳ್ಳಿಯಲ್ಲಿ ಹಸ್ಲರ್‌ ಸಂಘಕ್ಕೆ ಚಾಲನೆ,ಸೋಮುವಾರ ಮಹಿಳಾ ಸಂವೇದನೆ ಕವಿಗೋಷ್ಠಿ‌

ನಿರಂತರ ಹೋರಾಟದಲ್ಲಿರುವ ಶಿರಸಿ ಕೇಂದ್ರಿತ ಪ್ರತ್ಯೇಕ ಕದಂಬ ಜಿಲ್ಲೆ ಹೋರಾಟ ಸಮೀತಿ ಈ ತಿಂಗಳಿಂದ ಸಿದ್ಧಾಪುರದ ಗ್ರಾಮೀಣ ಪ್ರದೇಶಗಳಲ್ಲಿ ಪ್ರತ್ಯೇಕ ಜಿಲ್ಲೆಗಾಗಿ ಸಹಿ ಸಂಗ್ರಹಣೆ...

ಧಾರ್ಮಿಕ, ಆರ್ಥಿಕ, ಶೈಕ್ಷಣಿಕ ಕೆಲಸಗಳಿಂದ ಸುಸ್ಥಿರ ಅಭಿವೃದ್ಧಿ… ಅರಶಿನಗೋಡು ಅಷ್ಟಬಂಧ ಹಾಗೂ ಬ್ರಹ್ಮಕಲಶೋತ್ಸವ ಸಂಪನ್ನ

ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶಿಕ್ಷಣ ಮತ್ತು ಉದ್ಯೋಗ ಗಳಿಗೆ ಹೆಚ್ಚಿನ ಮಹತ್ವ ನೀಡಿದರೆ ಹೊಸ ಪೀಳಿಗೆ ಮಹತ್ವದ್ದನ್ನು ಸಾಧಿಸಲು ಸಾಧ್ಯ ಎಂದಿರುವ ಶಾಸಕ ಭೀಮಣ್ಣ ನಾಯ್ಕ...

ಬಿ.ಜೆ.ಪಿ. & ಕಾಂಗ್ರೆಸ್‌ ಗಳಿಂದ ತುಷ್ಟೀಕರಣದ ಸ್ಫರ್ಧೆ… ಕಾಂಗ್ರೆಸ್‌ ಬಸ್ಮಾಸುರ,ಬಿ.ಜೆ.ಪಿ. ಬಕಾಸುರ….

ಮುಸ್ಲಿಂ ಅಲ್ಪಸಂಖ್ಯಾತರನ್ನು ಒಲೈಸುವಲ್ಲಿ ಬಿ.ಜೆ.ಪಿ. ಮತ್ತು ಕಾಂಗ್ರೆಸ್‌ ಗಳು ಸ್ಫರ್ಧೆ ನಡೆಸಿದ್ದು ಅಪಾಯಕಾರಿ ನಡೆಗಳಲ್ಲಿ ಎರಡೂ ಪಕ್ಷಗಳೂ ಒಂದೇ ನಾಣ್ಯದ ಎರಡು ಮುಖಗಳಿಂತಿವೆ ಎಂದು...

ಬಹಿರಂಗ ಶುದ್ಧಿ ಜೊತೆಗೆ ಅಂತರಂಗ ಶುದ್ಧಿ ಮಹತ್ವ

ಸಿದ್ದಾಪುರದಲ್ಲಿ ಪವಿತ್ರ ರಂಜಾನ್ ಸಂಭ್ರಮಾಚರಣೆಸಿದ್ದಾಪುರ :31ಒಂದು ತಿಂಗಳ ಕಾಲ ಉಪವಾಸ ವ್ರತವನ್ನು ಆಚರಿಸಿದ ಮುಸ್ಲಿಮ್ ಬಾಂಧವರು ಪವಿತ್ರ ರಂಜಾನ್ (ಈದ್ ಉಲ್ ಫಿತ್ರ )ಹಬ್ಬವನ್ನು...

samajamukhi.net exclusive- ಇಂದು ಕರ್ನಾಟಕ….ಪತ್ರಕರ್ತ ವಿಶ್ವಾಮಿತ್ರ ಹೆಗಡೆ ವಿಧಿವಶ,ಶಿರಸಿಗೆ ಬಾರದ ಗೃಹಸಚಿವ,ಹಳದೋಟದಲ್ಲಿ ನಡೆಯಿತು ಸೇನಾವಿಧಿ!

ಶಿರಸಿಯ ಹಿರಿಯ ಪತ್ರಕರ್ತ ವಿಶ್ವಾಮಿತ್ರ ಹೆಗಡೆ ಭತ್ತಗುತ್ತಿಗೆ ಇಂದು ವಿಧಿವಶರಾಗಿದ್ದಾರೆ. ಪ್ರತಿಷ್ಠಿತ ಭತ್ತಗುತ್ತಿಗೆ ಕುಟುಂಬದ ವಿಶ್ವಾಮಿತ್ರ ಹೆಗಡೆ ಕನ್ನಡಪ್ರಭ,ವಿಶ್ವವಾಣಿ ಸೇರಿದಂತೆ ಕೆಲವು ಪತ್ರಿಕೆಗಳಲ್ಲಿ ಕೆಲಸಮಾಡಿದ್ದರು....

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *