


ಸಿದ್ದಾಪುರ
ತಾಲೂಕಿನಲ್ಲಿ ಮಳೆ ಕೊರತೆಯಿಂದ ಹೈನುಗಾರಿಕೆ ಮಾಡುವುದು ಕಷ್ಠಕರವಾಗಿರುವುದರಿಂದ ರಾಜ್ಯ ಸರ್ಕಾರ ಹೈನುಗಾರರಿಗೆ ಹೆಚ್ಚಿನ ಪ್ರೋತ್ಸಾಹ ಹಾಗೂ ಸಹಕಾರವನ್ನು ನೀಡುವುದಕ್ಕೆ ಮುಂದಾಗಬೇಕು ಎಂದು ಧಾರವಾಡ ಹಾಲು ಒಕ್ಕೂಟದ ನಿರ್ದೇಶಕ ಪಿ.ವಿ.ನಾಯ್ಕ ಬೇಡ್ಕಣಿ ಹೇಳಿದರು.
ತಾಲೂಕಿನ ಹಾರ್ಸಿಕಟ್ಟಾ ಗಣೇಶಮಂಟಪದಲ್ಲಿ ಹಾರ್ಸಿಕಟ್ಟಾ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸರ್ವಸಾಧಾರಣ ಸಭೆಯಲ್ಲಿ ಅವರು ಮಾತನಾಡಿದರು.

ಧಾರವಾಡ ಹಾಲು ಒಕ್ಕೂಟ ಹೈನು ಉತ್ಪಾದನೆಗೆ ವಿವಿಧ ರೀತಿಯ ಸಹಾಯ ಸಹಕಾರ ನೀಡುತ್ತಿದ್ದು ಇದರ ಪ್ರಯೋಜನವನ್ನು ಹೈನುಗಾರರು ಪಡೆದುಕೊಳ್ಳಬೇಕೆಂದರು.
ತಾಲೂಕು ಪಶುಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ವಿವೇಕ ಹೆಗಡೆ ಹೈನುಗಾರಿಕೆ ಅಭಿವೃದ್ಧಿ ಕುರಿತು ಮಾತನಾಡಿ ತಳಿಯ ಆಯ್ಕೆ, ನಿರ್ವಹಣೆ, ಹಸಿರು ಮೇವು, ಸಮತೋಲನ ಪಶು ಆಹಾರ, ಲಸಿಕಾ ನಿರ್ವಹಣೆ ಕುರಿತು ಸಮಗ್ರ ಮಾಹಿತಿ ನೀಡಿದರು.
ಧಾರವಾಡ ಹಾಲು ಒಕ್ಕೂಟದ ಸಿದ್ದಾಪುರ ಮಾರ್ಗದ ವಿಸ್ತರಣಾಧಿಕಾರಿ ಪ್ರಕಾಶ ಕೆ. ಅವರು ಒಕ್ಕೂಟದ ಕಲ್ಯಾಣ ಸಂಘದ ಕುರಿತು, ಕಿಸಾನ್ ಕ್ರೆಡಿಟ್ ಕಾರ್ಡ ಕುರಿತು ಮಾಹಿತಿ ನೀಡಿದರು.
ಸಂಘದ ಅಧ್ಯಕ್ಷ ಶ್ರೀಧರ ಎಂ.ಭಟ್ಟ ಅಧ್ಯಕ್ಷತೆವಹಿಸಿದ್ದರು. ಉಪಾಧ್ಯಕ್ಷ ಎಂ.ಜಿ.ನಾಯ್ಕ ಹುಬ್ಬಗೈ, ಡಾಶ್ರೇಯಸ್ ರಾಜ್, ಹಾರ್ಸಿಕಟ್ಟಾ ಸೇವಾ ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಾಹಕ ದಿನೇಶ ಹೆಗಡೆ ಉಪಸ್ಥಿತರಿದ್ದರು.
ಪ್ರೋತ್ಸಾಹಕ ಬಹುಮಾನ: ಸಂಘಕ್ಕೆ ೨೦೨೨-೨೩ನೇ ಸಾಲಿನಲ್ಲಿ ಹೆಚ್ಚು ಹಾಲು ಪೂರೈಸಿದ ಗೋಪಾಲಕೃಷ್ಣ ಹೆಗಡೆ ಊರತೋಟ, ಶ್ರೀಧರ ಭ್ಟ ಮಾಣಿಕ್ನಮನೆ, ಮಾರ್ಯ ನಾಯ್ಕ ಒಡಗೇರೆ, ರಾಜಾರಾಮ ಹೆಗಡೆ ಹೊಸ್ಕೊಪ್ಪ, ಅನಂತ ಹೆಗಡೆ ಊರತೋಟ ಅವರನ್ನು ಹಾಗೂ ಸಂಘಕ್ಕೆ ಪ್ರಸಕ್ತ ಸಾಲಿನಲ್ಲಿ ಹಾಲು ಪೂರೈಸಿದ ಎಲ್ಲ ಸದಸ್ಯರಿಗೆ ಪ್ರೋತ್ಸಾಹಕ ಬಹುಮಾ ವಿತರಿಸಲಾಯಿತು. ಪಶುಸಂಗೋಪನಾ ಇಲಾಖೆಯಯಿಂದ ಲವಣ ಮಿಶ್ರಣ ವಿತರಿಸಲಾಯಿತು.
ಸಂಘದ ಕಾರ್ಯದರ್ಶಿ ರಮೇಶ ಹೆಗಡೆ ಹಾರ್ಸಿಮನೆ ಸಂಘದ ವಾರ್ಷಿಕ ಅಡಾವೆಯನ್ನು ಓದಿ ಹೇಳಿ ಕಾರ್ಯಕ್ರಮ ನಿರ್ವಹಿಸಿದರು. ಟೆಸ್ಟರ್ ಪ್ರಮೋದ ಕೊಡಿಯಾ ಹೊನ್ನೆಹದ್ದ ಸಹಕರಿಸಿದರು.


ಸುಶೀಲಾ ಅಣ್ಣಪ್ಪ ಹೆಗಡೆ
ಸಿದ್ದಾಪುರ: ತಾಲೂಕಿನ ಇಟಗಿ ಸಮೀಪದ ಕಾಂತಿವನದ ನಿವಾಸಿ ಸುಶೀಲಾ ಅಣ್ಣಪ್ಪ ಹೆಗಡೆ(೮೩) ಇವರು ಇತ್ತೀಚೆಗೆ ನಿಧನಹೊಂದಿರು.
ಅವರಿಗೆ ಪುತ್ರ ವಸಂತ ಹೆಗಡೆ, ಇಬ್ಬರು ಪುತ್ರಿಯರಿದ್ದಾರೆ.

_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






