

ಬಂಧನಕ್ಕೆ ಮುನ್ನ ಮುಸ್ಲಿಂ ಸ್ನೇಹಿತೆ ಮನೆಯಲ್ಲಿ ಅವಿತಿದ್ದ ಚೈತ್ರಾ ಕುಂದಾಪುರ: ಹಿಂದೂ ಕಾರ್ಯಕರ್ತೆ ಜೊತೆ ಮೂವರ ಅರೆಸ್ಟ್
ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬುವವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಆರೋಪ ಎದುರಿಸುತ್ತಿರುವ ಕರಾವಳಿ ಮೂಲದ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸೇರಿದಂತೆ ಮತ್ತೊಬ್ಬ ಪ್ರಮುಖ ಆರೋಪಿಯನ್ನು ಕಳೆದ ತಡರಾತ್ರಿ ಬೆಂಗಳೂರಿನ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.


ಮಂಗಳೂರು: ಉಡುಪಿ ಜಿಲ್ಲೆಯ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನೀಡುವುದಾಗಿ ನಂಬಿಸಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬುವವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಆರೋಪ ಎದುರಿಸುತ್ತಿರುವ ಕರಾವಳಿ ಮೂಲದ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸೇರಿದಂತೆ ಮತ್ತೊಬ್ಬ ಪ್ರಮುಖ ಆರೋಪಿಯನ್ನು ಕಳೆದ ತಡರಾತ್ರಿ ಬೆಂಗಳೂರಿನ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.
ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಸೇರಿದಂತೆ ಇಬ್ಬರನ್ನು ನಿನ್ನೆ ಮಂಗಳವಾರ ರಾತ್ರಿ ಉಡುಪಿ ಶ್ರೀಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶ್ರೀಕಾಂತ್ ನಾಯಕ್ ಪೆಲತ್ತೂರ್ ಚೈತ್ರಾ ಜೊತೆ ಬಂಧನವಾಗಿರುವ ಮತ್ತೊಬ್ಬ ಆರೋಪಿ.
ಬಿಜೆಪಿ ಟಿಕೆಟ್ ಆಕಾಂಕ್ಷಿ ಹಾಗೂ ಕೈಗಾರಿಕೋದ್ಯಮಿ ಗೋವಿಂದ ಬಾಬು ಅವರನ್ನು ಪ್ರಮುಖ ಆರೋಪಿಗಳು ಬಿಲ್ಲವ ಸಮುದಾಯದ ಸಾಮಾಜಿಕ ಕಾರ್ಯಕರ್ತೆ ಎಂದು ಬಿಂಬಿಸಿ ಸುಮಾರು 7 ಕೋಟಿ ರೂಪಾಯಿ ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಬಿಜೆಪಿ ಟಿಕೆಟ್ ನೀಡುವುದಾಗಿ ಭರವಸೆ ನೀಡಿ ಕೈಗಾರಿಕೋದ್ಯಮಿ ಕೈಗಾರಿಕೋದ್ಯಮಿಯನ್ನು ಮೂರು ಹಂತಗಳಲ್ಲಿ ವಂಚಿಸಿದ್ದರು.
ಇತರೆ ಇಬ್ಬರು ಬಂಧನ: ವಂಚನೆ ಪ್ರಕರಣದಲ್ಲಿ ಇದುವರೆಗೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಚೈತ್ರಾ ಕುಂದಾಪುರ ಮತ್ತು ಶ್ರೀಕಾಂತ್ ನಾಯಕ್ ಅವರಲ್ಲದೆ ಗಗನ್ ಕಡೂರು ಮತ್ತು ಪ್ರಸಾದ್ ಬಂಧಿತರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಚೈತ್ರಾ ಕುಂದಾಪುರ ಬಲಪಂಥೀಯ ಕಾರ್ಯಕರ್ತರು ಮತ್ತು ಹಿಂದುತ್ವವಾದಿಗಳಲ್ಲಿ ಜನಪ್ರಿಯರಾಗಿದ್ದಾರೆ. ಪ್ರಚೋದಕ ಭಾಷಣಗಳಿಗೆ ಸಂಬಂಧಿಸಿದಂತೆ ಅವರು ಹಲವಾರು ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಇದೀಗ ಸಿಸಿಬಿ ಪೊಲೀಸರು ಇಬ್ಬರನ್ನೂ ವಿಚಾರಣೆ ನಡೆಸಲಾಗುತ್ತಿದ್ದು, ಬೆಂಗಳೂರಿಗೆ ಕರೆದೊಯ್ದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಉದ್ಯಮಿ ಬೆಂಗಳೂರಿನ ಬಂಡೆಪಾಳ್ಯ ಪೊಲೀಸ್ ಠಾಣೆಯಲ್ಲಿ ವಂಚನೆ ದೂರು ದಾಖಲಿಸಿದ್ದರು.
ಮುಸ್ಲಿಂ ಸ್ನೇಹಿತೆ ಮನೆಯಲ್ಲಿ ಚೈತ್ರಾ?: ಇದಕ್ಕೂ ಮೊದಲು ಚೈತ್ರಾ ಕುಂದಾಪುರ, ಕಾಂಗ್ರೆಸ್ ಮುಖಂಡೆ ಮನೆಯಲ್ಲಿ ಅವಿತು ಕುಳಿತಿದ್ದಳು ಎನ್ನುವ ಮಾಹಿತಿ ತಿಳಿದುಬಂದಿದೆ. ಆರೋಪಿಗೆ ಆಶ್ರಯ ನೀಡಿದ ಆರೋಪದ ಮೇಲೆ ಕಾಂಗ್ರೆಸ್ ಮಾಧ್ಯಮ ವಕ್ತಾರೆ ಅಂಜುಂಗೆ ಸಿಸಿಬಿ ನೋಟಿಸ್ ನೀಡಿದೆ. ಸದಾ ಮುಸ್ಲಿಮರ ಮೇಲೆ ದ್ವೇಷ ಕಾರುವ ಭಾಷಣ ಮಾಡಿ ಹಿಂದೂ ಯುವಕರನ್ನು ಉದ್ರೇಕಿಸುತ್ತಿದ್ದ ಚೈತ್ರಾ ಕುಂದಾಪುರದಲ್ಲಿ ಮುಸ್ಲಿಂ ಗೆಳತಿಯ ಮನೆಯಲ್ಲಿ ಆಶ್ರಯ ಪಡೆದಿದ್ದಳು ಎಂಬ ಸ್ಫೋಟಕ ಮಾಹಿತಿ ಸಿಕ್ಕಿದೆ. (ಕಪ್ರಡಾ)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
