ಕಲ್ಲಡ್ಕಭಟ್ಟನ ಸಖಿ ಅವಿತಿದ್ದು ಮುಸ್ಲಿಂ ಸ್ನೇಹಿತೆಯ ಮನೆಯಲ್ಲಿ!

ಬಂಧನಕ್ಕೆ ಮುನ್ನ ಮುಸ್ಲಿಂ ಸ್ನೇಹಿತೆ ಮನೆಯಲ್ಲಿ ಅವಿತಿದ್ದ ಚೈತ್ರಾ ಕುಂದಾಪುರ: ಹಿಂದೂ ಕಾರ್ಯಕರ್ತೆ ಜೊತೆ ಮೂವರ ಅರೆಸ್ಟ್

ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬುವವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಆರೋಪ ಎದುರಿಸುತ್ತಿರುವ ಕರಾವಳಿ ಮೂಲದ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸೇರಿದಂತೆ ಮತ್ತೊಬ್ಬ ಪ್ರಮುಖ ಆರೋಪಿಯನ್ನು ಕಳೆದ ತಡರಾತ್ರಿ ಬೆಂಗಳೂರಿನ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು: ಉಡುಪಿ ಜಿಲ್ಲೆಯ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ನೀಡುವುದಾಗಿ ನಂಬಿಸಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬುವವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಆರೋಪ ಎದುರಿಸುತ್ತಿರುವ ಕರಾವಳಿ ಮೂಲದ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸೇರಿದಂತೆ ಮತ್ತೊಬ್ಬ ಪ್ರಮುಖ ಆರೋಪಿಯನ್ನು ಕಳೆದ ತಡರಾತ್ರಿ ಬೆಂಗಳೂರಿನ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.

ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಸೇರಿದಂತೆ ಇಬ್ಬರನ್ನು ನಿನ್ನೆ ಮಂಗಳವಾರ ರಾತ್ರಿ ಉಡುಪಿ ಶ್ರೀಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶ್ರೀಕಾಂತ್ ನಾಯಕ್ ಪೆಲತ್ತೂರ್ ಚೈತ್ರಾ ಜೊತೆ ಬಂಧನವಾಗಿರುವ ಮತ್ತೊಬ್ಬ ಆರೋಪಿ.

ಬಿಜೆಪಿ ಟಿಕೆಟ್ ಆಕಾಂಕ್ಷಿ ಹಾಗೂ ಕೈಗಾರಿಕೋದ್ಯಮಿ ಗೋವಿಂದ ಬಾಬು ಅವರನ್ನು ಪ್ರಮುಖ ಆರೋಪಿಗಳು ಬಿಲ್ಲವ ಸಮುದಾಯದ ಸಾಮಾಜಿಕ ಕಾರ್ಯಕರ್ತೆ ಎಂದು ಬಿಂಬಿಸಿ ಸುಮಾರು 7 ಕೋಟಿ ರೂಪಾಯಿ ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ. 

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಬಿಜೆಪಿ ಟಿಕೆಟ್ ನೀಡುವುದಾಗಿ ಭರವಸೆ ನೀಡಿ ಕೈಗಾರಿಕೋದ್ಯಮಿ ಕೈಗಾರಿಕೋದ್ಯಮಿಯನ್ನು ಮೂರು ಹಂತಗಳಲ್ಲಿ ವಂಚಿಸಿದ್ದರು.

ಇತರೆ ಇಬ್ಬರು ಬಂಧನ: ವಂಚನೆ ಪ್ರಕರಣದಲ್ಲಿ ಇದುವರೆಗೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಚೈತ್ರಾ ಕುಂದಾಪುರ ಮತ್ತು ಶ್ರೀಕಾಂತ್ ನಾಯಕ್ ಅವರಲ್ಲದೆ ಗಗನ್ ಕಡೂರು ಮತ್ತು ಪ್ರಸಾದ್ ಬಂಧಿತರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಚೈತ್ರಾ ಕುಂದಾಪುರ ಬಲಪಂಥೀಯ ಕಾರ್ಯಕರ್ತರು ಮತ್ತು ಹಿಂದುತ್ವವಾದಿಗಳಲ್ಲಿ ಜನಪ್ರಿಯರಾಗಿದ್ದಾರೆ. ಪ್ರಚೋದಕ ಭಾಷಣಗಳಿಗೆ ಸಂಬಂಧಿಸಿದಂತೆ ಅವರು ಹಲವಾರು ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಇದೀಗ ಸಿಸಿಬಿ ಪೊಲೀಸರು ಇಬ್ಬರನ್ನೂ ವಿಚಾರಣೆ ನಡೆಸಲಾಗುತ್ತಿದ್ದು, ಬೆಂಗಳೂರಿಗೆ ಕರೆದೊಯ್ದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಉದ್ಯಮಿ ಬೆಂಗಳೂರಿನ ಬಂಡೆಪಾಳ್ಯ ಪೊಲೀಸ್ ಠಾಣೆಯಲ್ಲಿ ವಂಚನೆ ದೂರು ದಾಖಲಿಸಿದ್ದರು.

ಮುಸ್ಲಿಂ ಸ್ನೇಹಿತೆ ಮನೆಯಲ್ಲಿ ಚೈತ್ರಾ?: ಇದಕ್ಕೂ ಮೊದಲು ಚೈತ್ರಾ ಕುಂದಾಪುರ, ಕಾಂಗ್ರೆಸ್​ ಮುಖಂಡೆ ಮನೆಯಲ್ಲಿ ಅವಿತು ಕುಳಿತಿದ್ದಳು ಎನ್ನುವ ಮಾಹಿತಿ ತಿಳಿದುಬಂದಿದೆ. ಆರೋಪಿಗೆ ಆಶ್ರಯ ನೀಡಿದ ಆರೋಪದ ಮೇಲೆ ಕಾಂಗ್ರೆಸ್​ ಮಾಧ್ಯಮ ವಕ್ತಾರೆ ಅಂಜುಂಗೆ ಸಿಸಿಬಿ ನೋಟಿಸ್ ನೀಡಿದೆ. ಸದಾ ಮುಸ್ಲಿಮರ ಮೇಲೆ ದ್ವೇಷ ಕಾರುವ ಭಾಷಣ ಮಾಡಿ ಹಿಂದೂ ಯುವಕರನ್ನು ಉದ್ರೇಕಿಸುತ್ತಿದ್ದ ಚೈತ್ರಾ ಕುಂದಾಪುರದಲ್ಲಿ ಮುಸ್ಲಿಂ ಗೆಳತಿಯ ಮನೆಯಲ್ಲಿ ಆಶ್ರಯ ಪಡೆದಿದ್ದಳು ಎಂಬ ಸ್ಫೋಟಕ ಮಾಹಿತಿ ಸಿಕ್ಕಿದೆ. (ಕಪ್ರಡಾ)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *