

ಸಮಾಜಮುಖಿ ಧ್ವನಿಯನ್ನು ಅಡಗಿಸಲು ಯತ್ನಿಸುವ ದುಷ್ಟ ಶಕ್ತಿಗಳೆಡೆಗೆ ನಮ್ಮದು ‘ಜೀರೊ ಟಾಲರೆನ್ಸ್ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಬೆಂಗಳೂರು: ಸಮಾಜಮುಖಿ ಧ್ವನಿಯನ್ನು ಅಡಗಿಸಲು ಯತ್ನಿಸುವ ದುಷ್ಟ ಶಕ್ತಿಗಳೆಡೆಗೆ ನಮ್ಮದು ‘ಜೀರೊ ಟಾಲರೆನ್ಸ್ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
ಎರಡು ವರ್ಷಗಳಿಂದ ಸಾಹಿತಿಗಳಿಗೆ ಅನಾಮಧೇಯ ಪತ್ರದ ಮೂಲಕ ಜೀವ ಬೆದರಿಕೆ ಪತ್ರ ಕಳುಹಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ದಾವಣಗೆರೆಯ ಮೂಲದ ವ್ಯಕ್ತಿಯೊಬ್ಬನನ್ನು ಬಂಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಈ ರೀತಿ ಹೇಳಿದ್ದಾರೆ.
ಇದನ್ನು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿರುವ ಮುಖ್ಯಮಂತ್ರಿ, ನಾಡಿನ ಪ್ರತಿ ವ್ಯಕ್ತಿಯ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಎತ್ತಿಹಿಡಿಯಲು ನಮ್ಮ ಸರ್ಕಾರ ಬದ್ಧವಿದೆ ಎಂದಿದ್ದಾರೆ.
ಆರೋಪಿಯ ಜೊತೆ ಯಾವುದೇ ಸಂಘಟನೆ ಅಥವಾ ವ್ಯಕ್ತಿಗಳು ಷಾಮೀಲಾಗಿದ್ದರೂ ಅವರನ್ನು ಪತ್ತೆಹಚ್ಚಿ ಕಾನೂನಿನ ಕೈಗಳಿಗೆ ಒಪ್ಪಿಸುವ ಮೂಲಕ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ ಎಂದು ಅವರು ತಿಳಿಸಿದ್ದಾರೆ. (kpc)
