


ಸಿದ್ದಾಪುರ
ತಾಲೂಕಿನ ವಾಜಗದ್ದೆಯ ದುರ್ಗಾವಿನಾಯಕ ದೇವಸ್ಥಾನದ ಸಭಾಂಗಣದಲ್ಲಿ ತೋಟಗಾರಿಕಾ ಇಲಾಖೆ, ಜಿಪಂ ಹಾಗೂ ದುರ್ಗಾವಿನಾಯಕ ಕೃಷಿಕ ಯುವಕ ಸಂಘ ವಾಜಗದ್ದೆ ಇವರ ಆಶ್ರಯದಲ್ಲಿ ಅಡಕೆಯಲ್ಲಿ ಎಲೆ ಚುಕ್ಕೆ ರೋಗದ ಕುರಿತು ವಿಚಾರ ಸಂಕಿರಣ ಅಕ್ಟೋಬರ್ ೬ರಂದು ಬೆಳಗ್ಗೆ ೧೦ರಿಂದ ನಡೆಯಲಿದೆ.
ಶಾಸಕ ಭೀಮಣ್ಣ ನಾಯ್ಕ ಉದ್ಘಾಟಿಸುವರು. ಹಾರ್ಸಿಕಟ್ಟಾ ಗ್ರಾಪಂ ಉಪಾಧ್ಯಕ್ಷ ಸಿದ್ಧಾರ್ಥ ದೇಸಾಯಿ ಗೌಡರ್ ಅಧ್ಯಕ್ಷತೆವಹಿಸುವರು. ತೋಟಗಾರಿಕಾ ಇಲಾಖೆಯ ಉಪನಿರ್ದೇಶಕ ಬಿ.ಪಿ.ಸತೀಶ ಶಿರಸಿ, ಗ್ರಾಪಂ ಸದಸ್ಯ ಅನಂತ ಹೆಗಡೆ ಹೊಸಗದ್ದೆ, ವಿಶಾಲಾಕ್ಷಿ ಎಂ. ಹಸ್ಲರ್, ಹಾರ್ಸಿಕಟ್ಟಾ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಮಹಾಬಲೇಶ್ವರ ದೇವರು ಭಟ್ಟ ಅಗ್ಗೇರೆ, ಅಘನಾಶಿನಿ ಸಂಬಾರು ಬೆಳೆಗಳ ಉತ್ಪಾದಕರ ಕಂಪನಿಯ ಸಹಾಯಕ ನಿರ್ದೇಶಕ ಎಸ್.ಆರ್.ಹೆಗಡೆ ಕುಂಬಾರಕುಳಿ ಉಪಸ್ಥಿತರಿರುತ್ತಾರೆ.
ನಂತರ ವಿಜ್ಞಾನಿ ಡಾ.ವಿನಾಯಕ ಹೆಗಡೆ ಅವರಿಂದ ಅಡಕೆಯಲ್ಲಿ ಎಲೆ ಚುಕ್ಕೆ ರೋಗದ ಕುರಿತು ಮಾಹಿತಿ ಕಾರ್ಯಕ್ರಮ ನಡೆಯಲಿದೆ.
ಮಧ್ಯಾಹ್ನ ೨.೪೫ರಿಂದ ರೈತರೊಂದಿಗೆ ಸಂವಾದ ಹಾಗೂ ಸಮಾರೋಪ ನಡೆಯಲಿದ್ದು ಅಧ್ಯಕ್ಷತೆಯನ್ನು ವಾಜಗದ್ದೆ ದುರ್ಗಾವಿನಾಯಕ ದೇವಸ್ಥಾನದ ಮೊಕ್ತೇಸರ ಶ್ರೀಧರ ಎಂ.ಹೆಗಡೆ ಅಧ್ಯಕ್ಷತೆವಹಿಸುವರು. ಟಿಎಂಎಸ್ ಅಧ್ಯಕ್ಷ ಆರ್.ಎಂ.ಹೆಗಡೆ ಬಾಳೇಸರ, ಟಿಎಸ್‌ಎಸ್ ಅಧ್ಯಕ್ಷ ಗೋಪಾಲಕೃಷ್ಣ ವೈದ್ಯ, ಸಿದ್ದಾಪುರ ಶಿಕ್ಷಣ ಪ್ರಸಾರಕ ಸಮಿತಿ ಅಧ್ಯಕ್ಷ ಡಾ.ಶಶಿಭೂಷಣ ಹೆಗಡೆ ಉಪಸ್ಥಿತರಿರುತ್ತಾರೆ ಎಂದು ಸಂಘಟಕರು ತಿಳಿಸಿದ್ದಾರೆ.
