ರಾಜ್‌ಕುಮಾರ್ ಕುಟುಂಬ ಎಂದಿಗೂ ಕೆಟ್ಟದ್ದನ್ನು ಬಯಸಿಲ್ಲ

ರಾಜ್‌ಕುಮಾರ್ ಕುಟುಂಬ ಎಂದಿಗೂ ಕೆಟ್ಟದ್ದನ್ನು ಬಯಸಿಲ್ಲ: ಪುನೀತ್ ರಾಜ್ ಕುಮಾರ್ ಪ್ರತಿಮೆ ಅನಾವರಣ ಮಾಡಿದ ಸಿಎಂ ಸಿದ್ದರಾಮಯ್ಯ

ಸ್ಯಾಂಡಲ್ ವುಡ್ ನ ಖ್ಯಾತ ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರ ಪತ್ನಿ ಪುನೀತ್ ರಾಜ್ ಕುಮಾರ್ ಒಡೆತನದ ಪಿ.ಆರ್.ಕೆ. ಸ್ಟುಡಿಯೋಸ್ ಹಾಗೂ N3K ಡಿಸೈನ್ ಸ್ಟುಡಿಯೋ ವತಿಯಿಂದ ಆಯೋಜಿಸಿದ್ದ ಕರ್ನಾಟಕ ರತ್ನ ಡಾ.ಪುನೀತ್ ರಾಜ್‍ ಕುಮಾರ್ ಅವರ ಸಂಗ್ರಹಣೀಯ ಶಿಲ್ಪಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣ ಮಾಡಿದರು. 

Dr Puneet Rajkumar statue unveiled by CM Siddaramaiah

ಸ್ಯಾಂಡಲ್ ವುಡ್ ನ ಖ್ಯಾತ ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರ ಪತ್ನಿ ಪುನೀತ್ ರಾಜ್ ಕುಮಾರ್ ಒಡೆತನದ ಪಿ.ಆರ್.ಕೆ. ಸ್ಟುಡಿಯೋಸ್ ಹಾಗೂ N3K ಡಿಸೈನ್ ಸ್ಟುಡಿಯೋ ವತಿಯಿಂದ ಆಯೋಜಿಸಿದ್ದ ಕರ್ನಾಟಕ ರತ್ನ ಡಾ. ಪುನೀತ್ ರಾಜ್‍ ಕುಮಾರ್ ಅವರ ಸಂಗ್ರಹಣೀಯ ಶಿಲ್ಪಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣ ಮಾಡಿದರು. 

ಇದೇ ಸಂದರ್ಭದಲ್ಲಿ ಪುನೀತ್ ರಾಜ್ ಕುಮಾರ್ ಅವರ ಸ್ಮಾರಕ ಪುನರಾಭಿವೃದ್ಧಿ ಸಂಬಂಧ ಅಶ್ವಿನಿ ಪುನೀತ್ ರಾಜ್‌ಕುಮಾರ್ ಮಾಡಿದ ಮನವಿಗೆ ಮುಖ್ಯಮಂತ್ರಿ ಸ್ಪಂದಿಸಿದರು. ಸಂಗ್ರಹಣೀಯ ಶಿಲ್ಪ ಅನಾವರಣ ಮಾಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪುನೀತ್ ರಾಜ್‌ಕುಮಾರ್ ಅವರು ಎಲ್ಲರನ್ನೂ ಬಹಳ ಗೌರವದಿಂದ ಕಾಣುತ್ತಿದ್ದರು. ದೊಡ್ಡವರನ್ನು, ಸಹಕಲಾವಿದರನ್ನು ಗೌರವದಿಂದ ಕಾಣುವ ಪ್ರವೃತ್ತಿಯನ್ನು ಬೆಳೆಸಿಕೊಂಡಿದ್ದರು. ಕಿರಿಯ ಕಲಾವಿದರಿಗೆ ಪ್ರೋತ್ಸಾಹ ನೀಡುತ್ತಿದ್ದರು. ಅವರನ್ನು ಕಳೆದುಕೊಂಡಿರುವುದು ಇಡೀ ಕರುನಾಡಿಗೆ ಆಗಿರುವ ನಷ್ಟ. ಆ ನಷ್ಟವನ್ನು ತುಂಬಲು ಸಾಧ್ಯವಿಲ್ಲ. ಉತ್ತಮ ನಟ ಹಾಗೂ ಮಾನವೀಯತೆಯುಳ್ಳ ವ್ಯಕ್ತಿಯನ್ನು ನಾಡು ಕಳೆದುಕೊಂಡಿದೆ. ಅವರ ಪ್ರತಿಮೆಯಿಂದ ಪುನೀತ್ ಅವರನ್ನು ಇನ್ನಷ್ಟು ಸ್ಮರಿಸುವ ಕೆಲಸವಾಗಿದೆ ಎಂದರು. 

ರಾಜ್ ಕುಮಾರ್ ಕುಟುಂಬ ಕೆಟ್ಟದ್ದು ಬಯಸಿಲ್ಲ: ರಾಜ್‌ಕುಮಾರ್ ಕುಟುಂಬದವರು ಎಂದಿಗೂ ಕೆಟ್ಟದ್ದನ್ನು ಬಯಸಿಲ್ಲ. ಕೆಟ್ಟ ಪದ ಬಳಸಿಲ್ಲ. ಪುನೀತ್ ರಾಜಕುಮಾರ್ ಅವರ ತಂದೆ ರಾಜ್‌ಕುಮಾರ್ ಅವರಿಗಿಂತ ಒಂದು ಹೆಜ್ಜೆ ಮುಂದೆ ಹೋಗಿದ್ದರು. ರಾಜ್ ಕುಮಾರ್ ಜನಪ್ರಿಯ ಮೇರು ನಟ. ಪುನೀತ್ ತೀರಿಕೊಂಡಾಗ ಜನರ ಭಾವನೆಗಳನ್ನು ಕಂಡಾಗ, ರಾಜ್‌ಕುಮಾರ್ ಅವರಿಗಿಂತಲೂ ಜನಪ್ರಿಯರಾಗಿದ್ದರು ಎಂಬ ಭಾವನೆ ಬಂದಿತು. ಪುನೀತ್ ಮರಣ ಹೊಂದಿದಾಗ ನಮ್ಮ ಮನೆಯಲ್ಲಿಯೇ ಯಾರೋ ಒಬ್ಬರು ತೀರಿಕೊಂಡಿದ್ದಾರೆ ಎಂಬಂತಿತ್ತು. ಎಲ್ಲಾ ಊರುಗಳಲ್ಲಿ ಪ್ರತಿಮೆ ಸ್ಥಾಪಿಸಿ, ಕಟೌಟ್ ಹಾಕಿ ಗೋಳಾಡಿದ್ದು ಕಂಡಾಗ ಪುನೀತ್ ಅವರ ಜನಪ್ರಿಯತೆ, ಅಪಾರ ಅಭಿಮಾನಿಗಳನ್ನು ಪಡೆದಿದ್ದರು ಎಂದು ತಿಳಿಯುತ್ತದೆ. ಬಹಳ ಬೇಗ ನಮ್ಮನ್ನು ಅಗಲಿದರು. ಅವರು ಬದುಕಿದ್ದರೆ, ನಾವು ನಿರೀಕ್ಷೆ ಮಾಡದಷ್ಟು ಎತ್ತರಕ್ಕೆ ಬೆಳೆಯುತ್ತಿದ್ದರು. 

ಅಪ್ಪು ಅವರ ಕುಟುಂಬ ವರ್ಗದವರಿಗೆ ಅವರ ಸಾವಿನಿಂದಾದ ನೋವನ್ನು ಭರಿಸುವ ಶಕ್ತಿ ದೇವರು ಯಾವಾಗಲೂ ನೀಡಬೇಕು. ಪುನೀತ್ ರಾಜ್ ಕುಮಾರ್ ಮನೆ ಮನೆಯ ಮಗ. ಅವರನ್ನು ಗೌರವಿಸದವರೇ ಇಲ್ಲ.

ಕರ್ನಾಟಕ ರತ್ನ ಡಾ.ಪುನೀತ್ ರಾಜ್‌ಕುಮಾರ್ ಅವರ ಪ್ರತಿಮೆಯನ್ನು ಇಂದು ಅನಾವರಣ ಮಾಡಲಾಗಿದೆ. ಡಾ.ಪುನೀತ್ ರಾಜ್ ಕುಮಾರ್ ಅವರು ಅಪರೂಪದ ವ್ಯಕ್ತಿತ್ವ. ಸರಳತೆ, ಸಜ್ಜನಿಕೆ, ವಿನಯ ಎಲ್ಲವನ್ನೂ ಒಬ್ಬರಲ್ಲೆ ಕಾಣುವುದು ವಿರಳ. ಸಾಮಾನ್ಯ ಜನರು, ಸಂಕಷ್ಟದಲ್ಲಿದವರಿಗೆ ಸ್ಪಂದಿಸುವ ಉದಾತ್ತ ಭಾವನೆಯ ಪುನೀತ್‍ರಿಗಿದ್ದ ಅಭಿಮಾನಿ ಬಳಗ ಬಹಳ ದೊಡ್ಡದು. ಅವರು ಅಕಾಲಿಕ ಮರಣಕ್ಕೆ ತುತ್ತಾಗಿದ್ದಾಗ ಜನರು ತಮ್ಮ ಮನೆಯ ಸದಸ್ಯನನ್ನೇ ಕಳೆದುಕೊಂಡಷ್ಟು ದು:ಖಿಸಿದ್ದರು. ಕರ್ನಾಟಕ ಜನರ ಮನಸ್ಸನ್ನು ಗೆದಿದ್ದರು. 

ರಾಜ್ಯದ ಪ್ರತಿ ಮನೆಯಲ್ಲಿಯೂ ಕೂಡ ಪುನೀತ್ ರ ಭಾವಚಿತ್ರವಿದ್ದು, ಇಂದಿಗೂ ಜನರ ಮನಸ್ಸಿನಲ್ಲಿ ಅಚ್ಚಳಿಯದೇ ಉಳಿದಿದ್ದಾರೆ. ಬಹುಶ: ಇನ್ನೊಬ್ಬ ಪುನೀತ್ ರಂಥ ವ್ಯಕ್ತಿಯನ್ನು ಕಾಣುವುದು ಕಷ್ಟ. ರಾಜಕುಮಾರ್ ಕುಟುಂಬದವರು ಸದಾ ವಿನಯವಂತರು. ರಾಜಕುಮಾರ್, ಅವರ ಮಕ್ಕಳು ಮಾನವೀಯತೆಯ ಪ್ರತಿರೂಪವಾಗಿದ್ದಾರೆ. ಮಾನವೀಯತೆಯುಳ್ಳವರು ಮತ್ತೊಬ್ಬರನ್ನು ಪ್ರೀತಿ ಗೌರವಗಳಿಂದ ಕಾಣುತ್ತಾರೆ. ರಾಜ್ ಕುಮಾರ್ ಸೇರಿದಂತೆ ಅವರ ಕುಟುಂಬದವರೊಂದಿಗೆ ನನಗೆ ಬಹಳ ವರ್ಷಗಳಿಂದಲೂ ಉತ್ತಮ ಒಡನಾಟವಿದೆ ಎಂದು ಸಿಎಂ ಸಿದ್ದರಾಮಯ್ಯ ನುಡಿದರು. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *