ಎಚ್ಎಸ್ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಸಾರ್ವಜನಿಕರ ನಿರಾಸಕ್ತಿ: ಸರ್ಕಾರದಿಂದ ಗಡುವು ವಿಸ್ತರಣೆ ಸಾಧ್ಯತೆ

2019ರ ಏಪ್ರಿಲ್ ತಿಂಗಳಿಗೂ ಮೊದಲು ನೋಂದಾಯಿಸಲಾದ ವಾಹನಗಳಿಗೆ ಹೈ-ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್‌ಗಳ (ಎಚ್‌ಎಸ್‌ಆರ್‌ಪಿ) ಅಳವಡಿಕೆಯ ಗಡುವು ನವೆಂಬರ್ 17ರಂದು ಕೊನೆಯಾಗಲಿದೆ. ನಂಬರ್ ಪ್ಲೇಟ್ ಅಳವಡಿಕೆಗೆ ಸಾರ್ವಜನಿಕರು ನಿರಾಸಕ್ತಿ ತೋರುತ್ತಿದ್ದು, ರಾಜ್ಯ ಸರ್ಕಾರವು ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ಗಡುವನ್ನು ವಿಸ್ತರಿಸುವ ಸಾಧ್ಯತೆಯಿದೆ. 

For representational purposes

ಬೆಂಗಳೂರು: 2019ರ ಏಪ್ರಿಲ್ ತಿಂಗಳಿಗೂ ಮೊದಲು ನೋಂದಾಯಿಸಲಾದ ವಾಹನಗಳಿಗೆ ಹೈ-ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್‌ಗಳ (ಎಚ್‌ಎಸ್‌ಆರ್‌ಪಿ) ಅಳವಡಿಕೆಯ ಗಡುವು ನವೆಂಬರ್ 17ರಂದು ಕೊನೆಯಾಗಲಿದೆ. ನಂಬರ್ ಪ್ಲೇಟ್ ಅಳವಡಿಕೆಗೆ ಸಾರ್ವಜನಿಕರು ನಿರಾಸಕ್ತಿ ತೋರುತ್ತಿದ್ದು, ರಾಜ್ಯ ಸರ್ಕಾರವು ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ಗಡುವನ್ನು ವಿಸ್ತರಿಸುವ ಸಾಧ್ಯತೆಯಿದೆ. 

ರಾಜ್ಯದಲ್ಲಿ ನೋಂದಣಿಯಾಗಿರುವ 2 ಕೋಟಿ ಹಳೆಯ ವಾಹನಗಳ ಪೈಕಿ ಕೇವಲ 1.75 ಲಕ್ಷ (ಶೇ 10ಕ್ಕಿಂತ ಕಡಿಮೆ) ವಾಹನಗಳಿಗೆ ಮಾತ್ರ ಹೊಸ ನಂಬರ್ ಪ್ಲೇಟ್‌ ಅಳವಡಿಸಲಾಗಿದೆ. ನಂಬರ್ ಪ್ಲೇಟ್ ಅಳವಡಿಸಿಕೊಳ್ಳಲು ಜನರನ್ನು ಉತ್ತೇಜಿಸಲು ಹೆಚ್ಚಿನ ಪ್ರಚಾರ ನೀಡುವ ಸಾಧ್ಯತೆಯಿದೆ ಎಂದು ಹಿರಿಯ ಸಾರಿಗೆ ಅಧಿಕಾರಿಗಳು ತಿಳಿಸಿದ್ದಾರೆ.

ಟಿಎನ್ಐಇ ಜೊತೆಗೆ ಮಾತನಾಡಿದ ಹಿರಿಯ ಸಾರಿಗೆ ಅಧಿಕಾರಿಯೊಬ್ಬರು, ‘ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯವು ಭದ್ರತೆ ಸೇರಿದಂತೆ ವಿವಿಧ ಕಾರಣಗಳಿಗಾಗಿ ಮತ್ತು ವಾಹನಗಳ ದುರುಪಯೋಗವನ್ನು ತಡೆಯಲು ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ಗಳನ್ನು ಅಳವಡಿಸುವುದನ್ನು ಕಡ್ಡಾಯಗೊಳಿಸಿದೆ. ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ಗಳನ್ನು ಒಮ್ಮೆ ಅಳವಡಿಸಿದರೆ ನಂತರ ತೆಗೆಯಲು ಸಾಧ್ಯವಾಗುವುದಿಲ್ಲ. ಇದರಿಂದಾಗಿ ನಂಬರ್ ಪ್ಲೇಟ್‌ಗಳ ವಿನಿಮಯಕ್ಕೆ ಸಾಧ್ಯವಾಗುವುದಿಲ್ಲ. ಏಪ್ರಿಲ್ 1, 2019 ಕ್ಕೂ ಮೊದಲು ರಾಜ್ಯದಲ್ಲಿ ಸುಮಾರು 2 ಕೋಟಿ ವಾಹನಗಳು ನೋಂದಣಿಯಾಗಿವೆ. ಈ ನಂತರ ನೋಂದಣಿಯಾದ ಎಲ್ಲಾ ವಾಹನಗಳಿಗೂ ಕಡ್ಡಾಯವಾಗಿ ಎಚ್‌ಎಸ್‌ಆರ್‌ಪಿ ಪ್ಲೇಟ್‌ಗಳನ್ನು ಅಳವಡಿಸಲಾಗಿದೆ’ ಎಂದರು.

ರಾಜ್ಯ ಸರ್ಕಾರದ ಅಧಿಸೂಚನೆಯಲ್ಲಿ ನವೆಂಬರ್ 17ರವರೆಗೆ ಗಡುವು ನೀಡಿದ್ದರೂ, ಸಾರ್ವಜನಿಕರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹೀಗಾಗಿ, ಜನರನ್ನು ಉತ್ತೇಜಿಸಲು ಹೆಚ್ಚಿನ ಪ್ರಚಾರಕ್ಕೆ ಯೋಜಿಸುತ್ತಿದ್ದೇವೆ. ಆದರೆ, ಅದನ್ನು ತಾತ್ಕಾಲಿಕವಾಗಿ ನಿಲ್ಲಿಸಬೇಕಾಯಿತು. ಏಕೆಂದರೆ, ಮೂಲ ಸಲಕರಣೆ ತಯಾರಕರಿಂದ (ಒಇಎಂ) ಮಾನ್ಯತೆ ಪಡೆದಿರುವ ಎಚ್ಎಸ್ಆರ್‌ಪಿ ತಯಾರಕರಿಗೆ ಮಾತ್ರ ನಂಬರ್ ಪ್ಲೇಟ್ ಅಳವಡಿಕೆಗೆ ಅನುಮತಿ ನೀಡಿರುವುದರ ವಿರುದ್ಧ ಕೆಲವರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಗಡುವು ಕೊನೆಗೊಳ್ಳುಲು ಒಂದು ತಿಂಗಳಿಗಿಂತ ಕಡಿಮೆ ಅವಧಿಯಿದ್ದು, ಸರ್ಕಾರವು ಮತ್ತೆ ಗಡುವನ್ನು ವಿಸ್ತರಿಸಬಹುದು ಎಂದು ಹೇಳಿದರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *