ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ..!

ನವೆಂಬರ್‌ನಲ್ಲಿ 7ನೇ ವೇತನ ಆಯೋಗ ಜಾರಿಗೆ ಸರ್ಕಾರ ಸಿದ್ಧತೆ!

ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಸಂಬಂಧ ರಚಿಸಿರುವ 7ನೇ ವೇತನ ಆಯೋಗ ಮುಂದಿನ ನವೆಂಬರ್ ಒಳಗೆ ವರದಿ ಸಲ್ಲಿಸಲಿದ್ದು, ವರದಿ ಬಳಿಕ ಅನುಷ್ಠಾನದ ಬಗ್ಗೆ ರಾಜ್ಯ ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಶುಕ್ರವಾರ ಭರವಸೆ ನೀಡಿದರು.

Parameshwara

ತುಮಕೂರು: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಸಂಬಂಧ ರಚಿಸಿರುವ 7ನೇ ವೇತನ ಆಯೋಗ ಮುಂದಿನ ನವೆಂಬರ್ ಒಳಗೆ ವರದಿ ಸಲ್ಲಿಸಲಿದ್ದು, ವರದಿ ಬಳಿಕ ಅನುಷ್ಠಾನದ ಬಗ್ಗೆ ರಾಜ್ಯ ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಶುಕ್ರವಾರ ಭರವಸೆ ನೀಡಿದರು.

ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಶುಕ್ರವಾರ ಆರಂಭವಾದ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಸಚಿವರು ಚಾಲನೆ ನೀಡಿ ನೀಡಿದರು.

ಬಳಿಕ ಮಾತನಾಡಿದ ಅವರು, ನವೆಂಬರ್ ಒಳಗೆ ವರದಿ ಸಲ್ಲಿಸುವಂತೆ ವೇತನ ಆಯೋಗಕ್ಕೆ ಸೂಚಿಸಲಾಗಿದೆ. ವರದಿ ಬಂದ ನಂತರ ನಿರ್ಧಾರ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ಭರವಸೆ ನೀಡಿದ್ದಾರೆ. ವೇತನ ಆಯೋಗ ಜಾರಿಯಾಗಲಿದ್ದು, ನೌಕರರು ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದರು.

ಹೊಸ ಪಿಂಚಣಿ ಯೋಜನೆ (ಎನ್‌ಪಿಎಸ್) ರದ್ದುಪಡಿಸಿ ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೆ ತರಲು ಸರ್ಕಾರ ಬದ್ಧವಾಗಿದ್ದು, ವರದಿ ನೀಡಲು ಸಮಿತಿ ರಚಿಸಲಾಗಿದೆ. ವರದಿ ಬಂದ ನಂತರ ಜಾರಿ ಮಾಡಲಾಗುವುದು. ವಿಧಾನಸಭೆ ಚುನಾವಣೆ ಪ್ರಣಾಳಿಕೆಯಲ್ಲಿ ಒಪಿಎಸ್ ಜಾರಿ ಮಾಡುವುದಾಗಿ ಕಾಂಗ್ರೆಸ್ ಭರವಸೆ ನೀಡಿದೆ. ಅದರಂತೆ ಸರ್ಕಾರ ನಡೆದುಕೊಳ್ಳಲಿದ್ದು, ಜಾರಿ ಮಾಡಿಯೇ ತೀರುತ್ತೇವೆ. ಎಲ್ಲಾ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದವರಿಗೆ ಉಚಿತವಾಗಿ ಆರೋಗ್ಯ ಸೇವೆ ಒದಗಿಸುವ ‘ಕರ್ನಾಟಕ ಆರೋಗ್ಯ ಸಂಜೀವಿನಿ’ ಯೋಜನೆಯೂ ಶೀಘ್ರವೇ ಜಾರಿಯಾಗಲಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ 5.25 ಲಕ್ಷ ಸರ್ಕಾರಿ ನೌಕರರು ಇದ್ದು, ಇನ್ನೂ 2.50 ಲಕ್ಷ ಹುದ್ದೆಗಳು ಖಾಲಿ ಉಳಿದಿವೆ. ಚುನಾವಣೆ ಪ್ರಣಾಳಿಕೆಯಲ್ಲಿ ಈ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಭರವಸೆ ನೀಡಿದ್ದು, ಮುಂದಿನ ಐದು ವರ್ಷಗಳಲ್ಲಿ ನೇಮಕ ಮಾಡಲಾಗುವುದು ಎಂದರು.

ರಾಜ್ಯದ ಆಡಳಿತ ವ್ಯವಸ್ಥೆ ದೇಶದಲ್ಲೇ ಮಾದರಿಯಾಗಿದ್ದು, ‘ಕರ್ನಾಟಕ ಮಾದರಿ’ ಎನ್ನುವಂತಾಗಿದೆ. ಅದಕ್ಕೆ ನೌಕರ ವರ್ಗದ ಬದ್ಧತೆ ಕಾರಣವಾಗಿದೆ. ದಕ್ಷತೆ, ಪ್ರಾಮಾಣಿಕತೆಯಿಂದ ಕೆಲಸ ಮಾಡಿದರೆ ಸರ್ಕಾರಕ್ಕೆ ಒಳ್ಳೆಯ ಹೆಸರು ಬರುತ್ತದೆ. ಕ್ರೀಡೆ ನೌಕರರ ಜೀವನದ ಒಂದು ಭಾಗವಾದರೆ ಆರೋಗ್ಯ ಸುಧಾರಿಸಿ ಸರಿಯಾಗಿ ಕರ್ತವ್ಯ ನಿರ್ವಹಿಸಲು ಸಾಧ್ಯವಾಗುತ್ತದೆ. ಇಂತಹ ಸದುದ್ದೇಶದಿಂದಲೇ ಕ್ರೀಡಾಕೂಟಕ್ಕೆ ರಾಜ್ಯ ಸರ್ಕಾರ ರೂ.3.50 ಕೋಟಿ ಹಣ ನೀಡಿದೆ ಎಂದು ಹೇಳಿದರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *