

ಲೋಕಸಭೆ ಚುನಾವಣೆ: ‘ಗ್ಯಾರಂಟಿ’ ಅಸ್ತ್ರ ಬಳಸಿ 20 ಸ್ಥಾನ ಗೆಲ್ಲುವ ಭರವಸೆಯಲ್ಲಿ ರಾಜ್ಯ ಕಾಂಗ್ರೆಸ್!
ಗೃಹ ಲಕ್ಷ್ಮಿ ಮತ್ತು ಗೃಹ ಜ್ಯೋತಿ ಸೇರಿದಂತೆ ಐದು ಗ್ಯಾರಂಟಿ ಯೋಜನೆಗಳ ಯಶಸ್ವಿಯಾರಿ ಜಾರಿಗೆ ತಂದಿರುವ ರಾಜ್ಯ ಕಾಂಗ್ರೆಸ್, ಇದೀಗ ಕರ್ನಾಟಕದಲ್ಲಿ 20 ಲೋಕಸಭಾ ಸ್ಥಾನಗಳನ್ನು ಗೆಲ್ಲುವ ವಿಶ್ವಾಸದಲ್ಲಿದೆ.

ಅಂಕೋಲಾ (ಉತ್ತರ ಕನ್ನಡ): ಗೃಹ ಲಕ್ಷ್ಮಿ ಮತ್ತು ಗೃಹ ಜ್ಯೋತಿ ಸೇರಿದಂತೆ ಐದು ಗ್ಯಾರಂಟಿ ಯೋಜನೆಗಳ ಯಶಸ್ವಿಯಾರಿ ಜಾರಿಗೆ ತಂದಿರುವ ರಾಜ್ಯ ಕಾಂಗ್ರೆಸ್, ಇದೀಗ ಕರ್ನಾಟಕದಲ್ಲಿ 20 ಲೋಕಸಭಾ ಸ್ಥಾನಗಳನ್ನು ಗೆಲ್ಲುವ ವಿಶ್ವಾಸದಲ್ಲಿದೆ.
ಅಂಕೋಲದಲ್ಲಿ ಲೋಕಸಭಾ ಚುನಾವಣೆ ನಿಮಿತ್ತ ಜಿಲ್ಲಾ ಕಾಂಗ್ರೆಸ್ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಚಿವ ಆರ್.ವಿ ದೇಶಪಾಂಡೆ ಅವರು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 20 ಸ್ಥಾನಗಳನ್ನು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.
ವಿಧಾನಸಭಾ ಚುನಾವಣೆಯಲ್ಲಿ ಬಂದ ಫಲಿತಾಂಶವೇ ಲೋಕಸಭಾ ಚುನಾವಣೆಯಲ್ಲಿಯೂ ಪುನರಾವರ್ತಿತವಾಗಲಿದೆ. 28ರ ಪೈಕಿ 20 ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ. ಪಕ್ಷವನ್ನು ಸಂಘಟಿಸುವ ಕೆಲಸ ಒಂದು ಅಥವಾ ಎರಡು ದಿನ, ಚುನಾವಣಾ ಸಮಯದಲ್ಲಿ ಮಾತ್ರವೇ ಅಲ್ಲದೆ, ನಿರಂತರವಾಗಿ ನಡೆಯುವಂತೆ ಮಾಡಬೇಕು ಎಂದು ಹೇಳಿದರು.
ಇದೇ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕಾಂಗ್ರೆಸ್ ನಾಯಕರು ಬಿಜೆಪಿಗೆ ಸೇರ್ಪಡೆಗೊಳ್ಳುತ್ತಿದ್ದಾರೆಂದು ವದಂತಿಗಳನ್ನು ಹಬ್ಬಿಸಲಾಗುತ್ತಿದೆ. ಆದರೆ, ಯಾರೂ ಕಾಂಗ್ರೆಸ್ ಪಕ್ಷವನ್ನು ತೊರೆಯುತ್ತಿಲ್ಲ. ಬಿಜೆಪಿಯಿಂದಲೂ ನಮಗೆ ಯಾರೂ ಅಗತ್ಯವಿಲ್ಲ ಎಂದು ತಿಳಿಸಿದರು.
ಇದೇ ವೇಳೆ ಪಕ್ಷದಲ್ಲಿನ ಕೆಲ ನಾಯಕರಿಗೆ ಸಲಹೆ ನೀಡಿದ, ಸಾರ್ವಜನಿಕವಾಗಿ ಜಗಳವಾಡುವ ಬದಲು ಆಂತರಿಕ ಭಿನ್ನಾಭಿಪ್ರಾಯಗಳನನು ಪರಿಹರಿಸಿಕೊಳ್ಳಬೇಕು. “ರಾಜಕೀಯ ಪಕ್ಷದಲ್ಲಿ ಭಿನ್ನಾಭಿಪ್ರಾಯಗಳು ಉಂಟಾಗುವುದು ಸಹಜ. ಆದರೆ, ಅದು ಸಾರ್ವಜನಿಕವಾಗಬಾರದು, ಪಕ್ಷದಲ್ಲಿಯೇ ಬಗೆಹರಿಸಿಕೊಳ್ಳಬೇಕು ಎಂದರು.
ಶಿರಸಿ ಶಾಸಕ ಭೀಮಣ್ಣ ನಾಯ್ಕ ಮಾತನಾಡಿ, ಪಕ್ಷವನ್ನು ಬಲಪಡಿಸಬೇಕು, ಜಿಲ್ಲೆಯಲ್ಲಿ ಪಕ್ಷದ ಸಂಘಟನೆ ಮಂದಗತಿಯಲ್ಲಿ ಸಾಗುತ್ತಿದೆ ಎಂದು ತಿಳಿಸಿದರು.
ಕುಮಟಾ- ಕಾರವಾರ ಶಾಸಕ ಸತೀಶ ಸೈಲ್ ಅವರು ಮಾತನಾಡಿ, ಐದು ಗ್ಯಾರಂಟಿ ಯೋಜನೆಗಳ ಜಾರಿಗೆ ತಂದ ಪಕ್ಷದ ಹಿರಿಯರಿಗೆ ಕೃತಜ್ಞತೆ ಸಲ್ಲಿಸಿದರು, ಆದರೆ ಉತ್ತರ ಕನ್ನಡ ಜಿಲ್ಲೆ ಪ್ರವಾಸಿ ಕೇಂದ್ರವಾಗಿರುವುದರಿಂದ ಇಲ್ಲಿನ ಕ್ಷೇತ್ರಕ್ಕೆ ಸರ್ಕಾರ ಉತ್ತೇಜನ ನೀಡಬೇಕು. ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ನಾವೆಲ್ಲರೂ ಶ್ರಮಿಸುತ್ತೇವೆ, ಆದರೆ ಕನಿಷ್ಠ ಪ್ರವಾಸೋದ್ಯಮವನ್ನು ಉತ್ತೇಜಿಸುವ ಮೂಲಕ ಜಿಲ್ಲೆಯಲ್ಲಿ ಸಾಕಷ್ಟು ಉದ್ಯೋಗಾವಕಾಶಗಳ ಸೃಷ್ಟಿಬೇಕು ಎದು ಹೇಳಿದರು.
ಎಚ್ ಕೆ ಪಾಟೀಲ್ ಮಾತನಾಡಿ, ಮುಂಬರುವ ಚುನಾವಣೆಯ ಕುರಿತು ಪಕ್ಷದಲ್ಲಿ ಉತ್ಸಾಹವಿದೆ. ‘ಚುನಾವಣೆಯಲ್ಲಿ ಪಕ್ಷ 20 ಸ್ಥಾನಗಳನ್ನು ಗೆಲ್ಲುವುದರಲ್ಲಿ ಯಾವುದೇ ಸಂಶಯವಿಲ್ಲ. ಇಂದಿನ ಈ ಸಭೆಯು ಸಂತಸ ತಂದಿದೆ. ಸಭೆಯಲ್ಲಿ ಎಲ್ಲರೂ ಮನಃಪೂರ್ವಕವಾಗಿ ಮಾತನಾಡಿದ್ದಾರೆ. ನಮ್ಮಲ್ಲಿ ಭಿನ್ನಾಭಿಪ್ರಾಯಗಳಿಲ್ಲ. ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿದ್ದರೂ ಬಗೆಹರಿಸಲು ಇಲ್ಲಿ ನಾಯಕರಿದ್ದಾರೆ’ ಎಂದು ಹೇಳಿದರು. (kpc)
