ಕ್ಯಾದಗಿ ವಿ.ಎಸ್.ಎಸ್‌ ಗ್ರಾಮೀಣ ಸೂಪರ್‌ ಮಾರ್ಕೆಟ್‌ ಶುಕ್ರವಾರ ಉದ್ಘಾಟನೆ,ಸಮಾರಂಭದಲ್ಲಿ ಪಾಲ್ಗೊಳ್ಳಲಿರುವ ಶಾಸಕರು,ಸಚಿವರು

ಕುಗ್ರಾಮಗಳ ಒಕ್ಕೂಟದ ಕ್ಯಾದಗಿ ವ್ಯವಸಾಯ ಸೇವಾ ಸಹಕಾರಿ ಸಂಘ ನಿ.ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲಕರವಾದ ಎಲ್ಲಾ ಸೇವೆಗಳನ್ನು ನೀಡಲು ಸಿದ್ಧವಾಗಿದೆ. ೨೫ ಕೋಟಿ ದುಡಿಯುವ ಬಂಡವಾಳದೊಂದಿಗೆ ೫೦ ಕೋಟಿ ವಾರ್ಷಿಕ ವ್ಯವಹಾರ ನಡೆಸುವ ಈ ಸಹಕಾರಿಯ ಸುವ್ಯವಸ್ಥಿತ ಕಟ್ಟಡ ಶುಕ್ರವಾರ ಲೋಕಾರ್ಪಣೆಯಾಗಲಿದೆ.

೨೦೧೫ ರಲ್ಲಿ ಈ ಕಟ್ಟಡ ಭಾಗಶ: ಉದ್ಘಾಟನೆಯಾಗಿತ್ತಾದರೂ ಸುಸಜ್ಜಿತ ಸಭಾ ಭವನ,ಮಹಾಧ್ವಾರ ಸೇರಿದ ಸಂಪೂರ್ಣ ವ್ಯವಸ್ಥಿತ ನಿರ್ಮಾಣ ಈಗ ಪುರ್ಣಗೊಂಡಿದೆ. ಇಂಥ ಗ್ರಾಮೀಣ ಪ್ರದೇಶದಲ್ಲಿ ಒಂದು ಕೋಟಿಗೂ ಹೆಚ್ಚು ವೆಚ್ಚದ ಕಟ್ಟಡ ಕಾಮಗಾರಿ ನಿರ್ವಹಿಸಿರುವ ಸಂಘ ತನ್ನ ಸದಸ್ಯರಿಗೆ ಅನುಕೂಲವಾಗುವ ಎಲ್ಲಾ ಸೇವೆಗಳನ್ನು ನೀಡಲು ಅವಶ್ಯ ಸಂರಚನೆಯನ್ನು ಮಾಡಿ ಗಮನ ಸೆಳೆದಿದೆ.

ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಈ ವಿ.ಎಸ್.ಎಸ್.‌ ನಿ. ಕ್ಯಾದಗಿಯ ನಿರ್ಧೇಶಕ ಮಂಡಳಿ ಅಭಿಮಾನದಿಂದ ತಮ್ಮ ಸಂಘದ ಪ್ರಗತಿಯಸೂಚ್ಯಾಂಕವನ್ನು ವಿವರಿಸಿತು.

ಶುಕ್ರವಾರ ನಡೆಯಲಿರುವ ಸಮಾರಂಭದಲ್ಲಿ ಸಚಿವರು, ಶಾಸಕರೆಲ್ಲಾ ಪಾಲ್ಗೊಳ್ಳಲಿದ್ದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಸಂಘದ ಕಟ್ಟಡದ ಮಹಾಧ್ವಾರ ಉದ್ಘಾಟಿಸುವರು. ಶಿಕ್ಷಣ ಸಚಿವ ಮಧು ಬಂಗಾರಪ್ಪ ನೂತನ ಸೂಪರ್‌ ಮಾರ್ಕೆಟ್‌ ಗೆ ಚಾಲನೆ ನೀಡಲಿದ್ದಾರೆ. ಸುಸಜ್ಜಿತ ಸಭಾಂಗಣವನ್ನು ಸ್ಥಳೀಯ ಶಾಸಕ ಭೀಮಣ್ಣ ನಾಯ್ಕ ಉದ್ಘಾಟಿಸಲಿದ್ದಾರೆ.

ಮೊದಲ ದಾಸ್ತಾನು ಕೊಠಡಿಯನ್ನು ಶಾಸಕ ಶಿವರಾಮ ಹೆಬ್ಬಾರ್‌, ಎರಡನೇ ದಾಸ್ತಾನು ಕೊಠಡಿಯನ್ನು ಮಾಜಿ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ ಉದ್ಘಾಟಿಸಲಿದ್ದಾರೆ ಎಂದು ವಿವರಿಸಿದ ವಿ.ಎಸ್.ಎಸ್.ಅಧ್ಯಕ್ಷ ಎಂ.ಜಿ. ನಾಯ್ಕ ಹಾದ್ರಿಮನೆ ಮಾಧ್ಯಮಗಳ ಮೂಲಕ ಸಾರ್ವಜನಿಕವಾಗಿ ಆಮಂತ್ರಿಸಿದರು.

ಈ ಸಮಾರಂಭದಲ್ಲಿ ಪಾಲ್ಗೊಳ್ಳಲಿರುವವರಿಗೆಲ್ಲಾ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗಿದೆ. ಸಾಯಂಕಾಲದ ವೇಳೆಗೆ ಕವಿರತ್ನ ಕಾಳಿದಾಸ ಯಕ್ಷಗಾನ ಪ್ರದರ್ಶನ ನಡೆಯಲಿದೆ ಎಂದು ಸಂಘದ ನಿರ್ಧೆಶಕ ಮಂಡಳಿ ತಿಳಿಸಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *