

ಗಣೇಶ ಕಾಲ್ಪನಿಕ ದೇವರು- ಗಣಪತಿ ಪೂಜೆ ನಮ್ಮ ಸಂಸ್ಕೃತಿಯಲ್ಲ, ಮೌಢ್ಯದ ಆಚರಣೆ: ಸಾಣೇಹಳ್ಳಿ ಸ್ವಾಮೀಜಿ
ವೇದಿಕೆ ಕಾರ್ಯಕ್ರಮಗಳಲ್ಲಿ ಅಥವಾ ಮನೆಗಳಲ್ಲಿ ಗಣಪತಿಯನ್ನು ವಿಘ್ನ ನಿವಾರಕನನ್ನಾಗಿ ಪೂಜಿಸುವುದು, ಪ್ರಾರ್ಥನೆ ಸಲ್ಲಿಸುವುದು ನಮ್ಮ ಸಂಸ್ಕೃತಿಯಲ್ಲ. ಅದರ ಬದಲು ವಾಸ್ತವಕ್ಕೆ ತಕ್ಕುದಾದ ವಚನಗಳನ್ನು ಪಠಿಸಬೇಕು’


ಚಿತ್ರದುರ್ಗ: ವೇದಿಕೆ ಕಾರ್ಯಕ್ರಮಗಳಲ್ಲಿ ಅಥವಾ ಮನೆಗಳಲ್ಲಿ ಗಣಪತಿಯನ್ನು ವಿಘ್ನ ನಿವಾರಕನನ್ನಾಗಿ ಪೂಜಿಸುವುದು, ಪ್ರಾರ್ಥನೆ ಸಲ್ಲಿಸುವುದು ನಮ್ಮ ಸಂಸ್ಕೃತಿಯಲ್ಲ. ಅದರ ಬದಲು ವಾಸ್ತವಕ್ಕೆ ತಕ್ಕುದಾದ ವಚನಗಳನ್ನು ಪಠಿಸಬೇಕು’ ಎಂದು ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ಸಾಣೆಹಳ್ಳಿಯಲ್ಲಿ ಗುರುವಾರದಿಂದ ಆರಂಭವಾದ ರಾಷ್ಟ್ರೀಯ ನಾಟಕೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಶಿವ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಗಣಪತಿ ಸ್ತುತಿಸುವುದು ಮೌಢ್ಯದ ಆಚರಣೆ, ವಚನ ಪ್ರಸ್ತುತ ಪಡಿಸುವುದು ನಿಜವಾದ ಪ್ರಾರ್ಥನೆ. ಶಿವಕುಮಾರ ಸ್ವಾಮೀಜಿ ಕಾರ್ಯಕ್ರಮಗಳ ಆರಂಭದಲ್ಲಿ ವಚನಗಳನ್ನು ಹಾಡಬಹುದು ಎಂದು ತೋರಿಸಿದ್ದಾರೆ ಎಂದು ಹೇಳಿದ್ದಾರೆ.
ಗಣಪತಿ ಕಾಲ್ಪನಿಕ ದೇವರು, ಸ್ವಾತಂತ್ರ್ಯ ಚಳವಳಿಯ ಸಂದರ್ಭದಲ್ಲಿ ನೆಪ ಮಾತ್ರಕ್ಕೆ ಹುಟ್ಟಿಕೊಂಡ ದೇವರದು. ಬಾಹ್ಯ ವಸ್ತುಗಳಿಂದ ಮಾಡಿದ ದೇವರುಗಳು ದೇವರಲ್ಲ, ಮನೆಗಳಲ್ಲಿ ಅಥವಾ ಯಾವುದೇ ಸಮಾರಂಭಗಳಲ್ಲಿ ಮೊದಲು ಗಣಪತಿ ಪೂಜೆ, ಸ್ತೋತ್ರ ಶ್ಲೋಕ ಪಠಸಬೇಕು ಎಂಬುದು ಹಲವರ ನಂಬಿಕೆಯಾಗಿದ್ದು, ಅದರ ಬದಲು ವಚನಗಳನ್ನು ಪ್ರಾರ್ಥನೆಯಂತೆ ಪಠಿಸಬೇಕು ಎಂದು ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ. (ಕಪ್ರಡಾ)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
