


ಸಿದ್ದಾಪುರ: ತಾಲೂಕಿನ ಕ್ಯಾದಗಿಯ ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನ ಕಟ್ಟಡ ಹಾಗೂ ಸೂಪರ್ ಮಾರ್ಕೆಟ್ ಗೆ ಶಿರಸಿ-ಸಿದ್ದಾಪುರ ಶಾಸಕ ಭೀಮಣ್ಣ ನಾಯ್ಕ ಶುಕ್ರವಾರ ಚಾಲನೆ ನೀಡಿದರು.

ಉದ್ಘಾಟನೆ ನೆರವೇರಿಸಿದ ಶಾಸಕ ಭೀಮಣ್ಣ ನಾಯ್ಕ ಮಾತನಾಡಿ, ಜಿಲ್ಲೆಯ ಸಹಕಾರಿ ಕ್ಷೇತ್ರ ಇಡೀ ದೇಶಕ್ಕೆ ಮಾದರಿಯಾಗಿದೆ. ಸಹಕಾರಿ ಸಂಘಗಳಿಂದ ರೈತರ ಸ್ವಾವಲಂಭಿ ಬದುಕಿಗೆ ದಾರಿಯಾಗುತ್ತಿದೆ. ಇಲಾಖೆಯ ಅಧಿಕಾರಿಗಳು ಇಲ್ಲದ ಕಾರಣ ಹೇಳಿ ಸಂಘಗಳಿಗೆ ತೊಂದರೆ ಕೊಟ್ಟರೆ ಸುಮ್ಮನಿರುವುದಿಲ್ಲ ಎಂದ ಅವರು, ಕ್ಯಾದಗಿ ಸೊಸೈಟಿಯಿಂದ ಈ ಭಾಗದ ರೈತರಿಗೆ ಹೆಚ್ಚಿನ ಆರ್ಥಿಕ ಸಹಾಯ ದೊರಕಲಿ. ರೈತರ ಬೇಡಿಕೆಗಳನ್ನು ಪೂರೈಸುತ್ತಿರುವ ಸಂಘ ಇನ್ನು ಹೆಚ್ಚಿನ ಅಭಿವೃದ್ಧಿ ಕಾಣಲು ಸದಸ್ಯರು ಹಾಗೂ ಸಾರ್ವಜನಿಕರ ಸಹಕಾರ ತುಂಬಾ ಅಗತ್ಯ. ಜಿಲ್ಲೆಯ ಸಹಕಾರಿ ಕ್ಷೇತ್ರ ಪಾರದರ್ಶಕವಾಗಿ ಅತ್ಯುತ್ತಮ ಕೆಲಸ ಮಾಡುತ್ತಿವೆ. ಸಹಕಾರ ಇಲಾಖೆಯ ಅಧಿಕಾರಿಗಳಿಂದ ಸಂಘಗಳಿಗೆ ತೊಂದರೆಯಾದರೆ ಸಹಿಸುವುದಿಲ್ಲ. ಎರಡು ಮೂರು ವರ್ಷಗಳಿಂದ ಬಾಧಿಸುತ್ತಿರುವ ಎಲೆ ಚುಕ್ಕಿ ಹಾಗೂ ಹಳದಿ ರೋಗದಿಂದ ಅಡಿಕೆ ಬೆಳೆಗಾರರು ಕಂಗಾಲಾಗಿದ್ದಾರೆ. ಔಷಧಿ ಕಂಪನಿಗಳ ಮಾಲಕರನ್ನು ಕರೆದು ರೈತರ ತೋಟಕ್ಕೆ ತೆರಳಿ ಅಧ್ಯಯನ ಮಾಡಿ ಸೂಕ್ತ ಔಷಧಿ ನೀಡಿ ಎಂದು ಸೂಚಿಸಿದ್ದೇನೆ. ಆದಷ್ಟು ಬೇಗ ಈ ರೋಗ ನಿವಾರಣೆಗೆ ಔಷಧಿ ಕಂಡು ಹಿಡಿಯಲಾಗುವುದು ಎಂದರು.
ಸಂಘದ ಅಧ್ಯಕ್ಷ ಎಂ.ಜಿ.ನಾಯ್ಕ ಹಾದ್ರಿಮನೆ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕ ಮಾತನಾಡಿದರು.
ಈ ವೇಳೆ ಕ್ಯಾದಗಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ರಾಮಕೃಷ್ಣ ನಾಯ್ಕ, ಸೋವಿನಕೊಪ್ಪ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಸುಮಾ ಗೌಡ, ಸಿದ್ದಾಪುರ ಟಿಎಂಎಸ್ ಅಧ್ಯಕ್ಷ ಆರ್.ಎಂ.ಹೆಗಡೆ, ಕೆಡಿಸಿಸಿ ಬ್ಯಾಂಕ್ ನಿರ್ದೇಶಕ ರಾಘವೇಂದ್ರ ಶಾಸ್ತ್ರಿ, ಸೋವಿನಕೊಪ್ಪ ಸೊಸೈಟಿ ಅಧ್ಯಕ್ಷ ಬಿ.ಆರ್.ನಾಯ್ಕ, ಎಪಿಎಂಸಿ ಮಾಜಿ ಅಧ್ಯಕ್ಷರಾದ ಕೆ.ಜಿ.ನಾಗರಾಜ, ಕೆ.ಕೆ.ನಾಯ್ಕ ಸುಂಕತ್ತಿ, ಸಹಕಾರಿ ಸಂಘಗಳ ಉಪನಿಬಂಧಕ ಮಂಜುನಾಥ, ಸಂಘದ ನಿರ್ದೇಶಕರಾದ ಪಿ.ಬಿ.ನಾಯ್ಕ, ರವಿ ನಾಯ್ಕ ಹೆಗ್ಗಾರಕೈ, ವಿ.ಕೆ.ಗೌಡ, ಗಣಪತಿ ನಾಯ್ಕ, ಲಕ್ಷ್ಮಣ ನಾಯ್ಕ, ಭಾರತಿ ಭಟ್, ವಿಜಯ ನಾಯ್ಕ, ನಾರಾಯಣ ಹಸ್ಲರ್, ಸುಬ್ರಾಯ ಹೆಗಡೆ, ಕೆ.ಪಿ.ರಘುಪತಿ, ಗೌರ್ಯ ನಾಯ್ಕ, ರಾಮಚಂದ್ರ ಹೆಗಡೆ, ಮುಖ್ಯ ಕಾರ್ಯನಿರ್ವಾಹಕ ಎಂ.ಎನ್.ಗೌಡ ಉಪಸ್ಥಿತರಿದ್ದರು.
ನಿವೃತ್ತ ಶಿಕ್ಷಕ ಜಿ.ಜಿ.ಹೆಗಡೆ ಬಾಳಗೋಡ ನಿರೂಪಿಸಿದರು. ಸಂಘದ ಉಪಾಧ್ಯಕ್ಷ ಗಣೇಶ ಭಟ್ ಸ್ವಾಗತಿಸಿದರು. ನಿರ್ದೇಶಕ ಪಿ.ಬಿ.ನಾಯ್ಕ ವಂದಿಸಿದರು.

