ICC World Cup 2023: ವಿರಾಟ್ ಕೊಹ್ಲಿ ODI 50ನೇ ಶತಕ; ಸಚಿನ್ ತೆಂಡೂಲ್ಕರ್ ನ ಎರಡು ದಾಖಲೆ ಮುರಿದ ‘ರನ್ ಮೆಷಿನ್’
ಕ್ರಿಕೆಟಿಗ ವಿರಾಟ್ ಕೊಹ್ಲಿ, ಸಚಿನ್ ತೆಂಡೂಲ್ಕರ್ ಅವರ ಮತ್ತೊಂದು ವಿಶ್ವದಾಖಲೆಯನ್ನು ಮುರಿದಿದ್ದಾರೆ.
ಮುಂಬೈ: ಭಾರತದ ಕ್ರಿಕೆಟಿಗ ವಿರಾಟ್ ಕೊಹ್ಲಿ ಒಂದೇ ಪಂದ್ಯದಲ್ಲಿ ಸಚಿನ್ ತೆಂಡೂಲ್ಕರ್ ಅವರ 2 ವಿಶ್ವದಾಖಲೆಯನ್ನು ಮುರಿದಿದ್ದಾರೆ.
ಮುಂಬೈ ನ ವಾಂಖೆಡೆ ಸ್ಟೇಡಿಯಂ ನಲ್ಲಿ ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಗರಿಷ್ಠ ರನ್ ಗಳನ್ನು ಗಳಿಸಿ ದಾಖಲೆ ನಿರ್ಮಿಸಿರುವುದು ಒಂದು ದಾಖಲೆಯಾದರೆ, ಏಕದಿನ ಕ್ರಿಕೆಟ್ ನಲ್ಲಿ 50 ನೇ ಶತಕ ದಾಖಲಿಸಿ ಸಚಿನ್ ದಾಖಲೆಯನ್ನು ಸರಿಗಟ್ಟಿರುವುದು 2 ನೇ ದಾಖಲೆಯಾಗಿದೆ. ಸಚಿನ್ ತೆಂಡೂಲ್ಕರ್ ಏಕದಿನ ಕ್ರಿಕೆಟ್ ನಲ್ಲಿ 49 ಶತಕ ದಾಖಲಿಸಿದ್ದಾರೆ.
2023 ರ ವಿಶ್ವಕಪ್ ನಲ್ಲಿ ಕೊಹ್ಲಿ 673 ರನ್ ಗಳನ್ನು ಗಳಿಸಿದ್ದಾರೆ. ಇದಕ್ಕೂ ಮುನ್ನ ಕೊಹ್ಲಿ ಒಂದೇ ವಿಶ್ವಕಪ್ ಟೂರ್ನಿಯಲ್ಲಿ 600+ ರನ್ ಗಳನ್ನು ಗಳಿಸಿದ ಮೂರನೇ ಭಾರತೀಯ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಈಗ ವಿಶ್ವಕಪ್ ಟೂರ್ನಿಯಲ್ಲಿ, ಕೇವಲ 10 ಇನ್ನಿಂಗ್ಸ್ ನಲ್ಲಿ ಕೊಹ್ಲಿ ಗರಿಷ್ಠ ರನ್ ದಾಖಲಿಸಿರುವ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.
ಇದಷ್ಟೇ ಅಲ್ಲದೇ ಈ ವಿಶ್ವಕಪ್ ನಲ್ಲಿ 8 ನೇ ಅರ್ಧ ಶತಕ ದಾಖಲಿಸಿದ್ದು, ಟೂರ್ನಮೆಂಟ್ ಒಂದರಲ್ಲಿ ಗರಿಷ್ಠ ಅರ್ಧ ಶತಕ ದಾಖಲಿಸಿದ್ದಾರೆ.
ಈ ಹಿಂದೆ ಸಚಿನ್ ತೆಂಡೂಲ್ಕರ್ 2003 ರಲ್ಲಿ ಟೂರ್ನಿಯೊಂದರಲ್ಲಿ ಗರಿಷ್ಠ ಅರ್ಧ ಶತಕ ದಾಖಲಿಸಿದ್ದ ದಾಖಲೆಯನ್ನು ಕೊಹ್ಲಿ ಮುರಿದಿದ್ದರು. ಸಚಿನ್ ತೆಂಡೂಲ್ಕರ್ 2003 ರ ಟೂರ್ನಿಯಲ್ಲಿ 673 ರನ್ ಗಳಿಸಿದ್ದರು. ವಿರಾಟ್ ಕೊಹ್ಲಿ ಸಾಧನೆಗೆ ಮೆಚ್ಚಿ ಸಚಿನ್ ತೆಂಡೂಲ್ಕರ್ ಅಭಿನಂದಿಸಿದ್ದಾರೆ. (kpc)