ಸಚಿನ್ ತೆಂಡೂಲ್ಕರ್ ನ ಎರಡು ದಾಖಲೆ ಮುರಿದ ‘ರನ್ ಮೆಷಿನ್’ ಇದು ಕೊಯ್ಲಿ ಸಾಧನೆ!

ICC World Cup 2023: ವಿರಾಟ್ ಕೊಹ್ಲಿ ODI 50ನೇ ಶತಕ; ಸಚಿನ್ ತೆಂಡೂಲ್ಕರ್ ನ ಎರಡು ದಾಖಲೆ ಮುರಿದ ‘ರನ್ ಮೆಷಿನ್’

ಕ್ರಿಕೆಟಿಗ ವಿರಾಟ್ ಕೊಹ್ಲಿ, ಸಚಿನ್ ತೆಂಡೂಲ್ಕರ್ ಅವರ ಮತ್ತೊಂದು ವಿಶ್ವದಾಖಲೆಯನ್ನು ಮುರಿದಿದ್ದಾರೆ. 

virat kohli

ಮುಂಬೈ: ಭಾರತದ ಕ್ರಿಕೆಟಿಗ ವಿರಾಟ್ ಕೊಹ್ಲಿ ಒಂದೇ ಪಂದ್ಯದಲ್ಲಿ ಸಚಿನ್ ತೆಂಡೂಲ್ಕರ್ ಅವರ 2 ವಿಶ್ವದಾಖಲೆಯನ್ನು ಮುರಿದಿದ್ದಾರೆ.

ಮುಂಬೈ ನ ವಾಂಖೆಡೆ ಸ್ಟೇಡಿಯಂ ನಲ್ಲಿ ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಗರಿಷ್ಠ ರನ್ ಗಳನ್ನು ಗಳಿಸಿ ದಾಖಲೆ ನಿರ್ಮಿಸಿರುವುದು ಒಂದು ದಾಖಲೆಯಾದರೆ,  ಏಕದಿನ ಕ್ರಿಕೆಟ್ ನಲ್ಲಿ 50 ನೇ ಶತಕ ದಾಖಲಿಸಿ ಸಚಿನ್ ದಾಖಲೆಯನ್ನು ಸರಿಗಟ್ಟಿರುವುದು 2 ನೇ ದಾಖಲೆಯಾಗಿದೆ. ಸಚಿನ್ ತೆಂಡೂಲ್ಕರ್ ಏಕದಿನ ಕ್ರಿಕೆಟ್ ನಲ್ಲಿ 49 ಶತಕ ದಾಖಲಿಸಿದ್ದಾರೆ.

2023 ರ ವಿಶ್ವಕಪ್ ನಲ್ಲಿ ಕೊಹ್ಲಿ 673 ರನ್ ಗಳನ್ನು ಗಳಿಸಿದ್ದಾರೆ. ಇದಕ್ಕೂ ಮುನ್ನ ಕೊಹ್ಲಿ ಒಂದೇ ವಿಶ್ವಕಪ್ ಟೂರ್ನಿಯಲ್ಲಿ 600+ ರನ್ ಗಳನ್ನು ಗಳಿಸಿದ ಮೂರನೇ ಭಾರತೀಯ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಈಗ ವಿಶ್ವಕಪ್ ಟೂರ್ನಿಯಲ್ಲಿ, ಕೇವಲ 10 ಇನ್ನಿಂಗ್ಸ್ ನಲ್ಲಿ ಕೊಹ್ಲಿ ಗರಿಷ್ಠ ರನ್ ದಾಖಲಿಸಿರುವ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

ಇದಷ್ಟೇ ಅಲ್ಲದೇ ಈ ವಿಶ್ವಕಪ್ ನಲ್ಲಿ 8 ನೇ ಅರ್ಧ ಶತಕ ದಾಖಲಿಸಿದ್ದು, ಟೂರ್ನಮೆಂಟ್ ಒಂದರಲ್ಲಿ ಗರಿಷ್ಠ ಅರ್ಧ ಶತಕ ದಾಖಲಿಸಿದ್ದಾರೆ.

ಈ ಹಿಂದೆ ಸಚಿನ್ ತೆಂಡೂಲ್ಕರ್ 2003 ರಲ್ಲಿ ಟೂರ್ನಿಯೊಂದರಲ್ಲಿ ಗರಿಷ್ಠ ಅರ್ಧ ಶತಕ ದಾಖಲಿಸಿದ್ದ ದಾಖಲೆಯನ್ನು ಕೊಹ್ಲಿ ಮುರಿದಿದ್ದರು. ಸಚಿನ್ ತೆಂಡೂಲ್ಕರ್ 2003 ರ ಟೂರ್ನಿಯಲ್ಲಿ 673 ರನ್ ಗಳಿಸಿದ್ದರು. ವಿರಾಟ್ ಕೊಹ್ಲಿ ಸಾಧನೆಗೆ ಮೆಚ್ಚಿ ಸಚಿನ್ ತೆಂಡೂಲ್ಕರ್ ಅಭಿನಂದಿಸಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *